ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಏಕದಿನ ವಿಶ್ವಕಪ್ ಬಳಿಕ ಮೊದಲ ಬಾರಿಗೆ ಬೌಲಿಂಗ್ ಮಾಡಲು ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ

Hardik Pandya returns to bowling for 1st time in ODIs since 2019 World Cup

ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸುದೀರ್ಘ ಕಾಲದ ಬಳಿಕ ಬೌಲಿಂಗ್ ಮಾಡಲು ಕಣಕ್ಕಿಳಿದಿದ್ದಾರೆ. ಮೊದಲ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ಮಾತನಾಡುತ್ತಾ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಲು ಸಂಪೂರ್ಣವಾಗಿ ಫಿಟ್ ಇಲ್ಲ ಎಂದಿದ್ದರು. ಆದರೆ ಎರಡನೇ ಪಂದ್ಯದಲ್ಲಿ ಪಾಂಡ್ಯ ಬೌಲಿಂಗ್ ಮಾಡಿ ಮಿಂಚಿದ್ದಾರೆ.

ಎರಡನೇ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕ ವಿರಾಟ್ ಕೊಹ್ಲಿ 7ನೇ ಬೌಲರ್ ಆಗಿ ಕಣಕ್ಕಿಳಿಸಿದರು. 131- 132 ಕಿಮಿ ವೇಗದಲ್ಲಿ ಬೌಲಿಂಗ್ ಮಾಡಿದ ಪಾಂಡ್ಯ ಅವರು ತಮ್ಮ ಓಟದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಿಕಂಡಿದ್ದರು. ಆದರೆ ಬೌಲಿಂಗ್‌ನ ತೀಕ್ಷ್ಣತೆ ಎಂದಿನಂತೆಯೇ ಅದ್ಭುತವಾಗಿಯೇ ಇತ್ತು.

ಭಾರತ vs ಆಸ್ಟ್ರೇಲಿಯಾ: ವಿಶೇಷ ಮೈಲಿಗಲ್ಲು ಸ್ಥಾಪಿಸಿದ ವಿರಾಟ್ ಕೊಹ್ಲಿಭಾರತ vs ಆಸ್ಟ್ರೇಲಿಯಾ: ವಿಶೇಷ ಮೈಲಿಗಲ್ಲು ಸ್ಥಾಪಿಸಿದ ವಿರಾಟ್ ಕೊಹ್ಲಿ

2019ರ ಸೆಪ್ಟೆಂಬರ್‌ನಲ್ಲಿ ನಡೆದ ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೊನೆಯ ಬಾರಿಗೆ ಬೌಲಿಂಗ್ ಮಾಡಿದ್ದರು. ಅದಾದ ಬಳಿಕ ಬೆನ್ನುನೋವಿಗೆ ತುತ್ತಾದ ಪಾಂಡ್ಯ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದರು. ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದರಾದರೂ ಬೌಲಿಂಗ್‌ನಿಂದ ದೂರಉಳಿದಿದ್ದರು.

ಇತ್ತೀಚೆಗೆ ಮುಕ್ತಾಯವಾದ ಐಪಿಎಲ್‌ನಲ್ಲೂ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಲು ಕಣಕ್ಕಿಳಿದಿರಲಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ಪೂರ್ಣಪ್ರಮಾಣದ ಬ್ಯಾಟ್ಸ್‌ಮನ್ ಆಗಿಯೇ ಕಣಕ್ಕಿಳಿದು 90 ರನ್ ಬಾರಿಸಿದ್ದರು.

IND vs AUS: ಬೌನ್ಸರ್ ಏಟು ತಿಂದ ಆಸಿಸ್ ನಾಯಕನನ್ನು ರಾಹುಲ್ ಪರೀಕ್ಷಿಸಿದ್ದು ಹೀಗೆ! ವಿಡಿಯೋIND vs AUS: ಬೌನ್ಸರ್ ಏಟು ತಿಂದ ಆಸಿಸ್ ನಾಯಕನನ್ನು ರಾಹುಲ್ ಪರೀಕ್ಷಿಸಿದ್ದು ಹೀಗೆ! ವಿಡಿಯೋ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಐವರು ಬೌಲರ್‌ಗಳೊಂದಿಗೆ ಕಣಕ್ಕಿಳಿದ ಕಾರಣ ಬೌಲಿಂಗ್‌ ವಿಭಾಗಕ್ಕೆ ಹಿನ್ನೆಡೆಯಾಯಿತು ಎಂದು ಸಾಕಷ್ಟು ಮಾತುಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಾಯಕ ವಿರಾಟ್ ಕೊಹ್ಲಿ ಕೂಡ ಪ್ರತಿಕ್ರಿಯಿಸುತ್ತಾ ಪಾಂಡ್ಯ ಬೌಲಿಂಗ್ ಮಾಡಲು ಸಂಪೂರ್ಣವಾಗಿ ಫಿಟ್ ಇಲ್ಲ ಎಂದಿದ್ದರು.

Story first published: Monday, November 30, 2020, 10:03 [IST]
Other articles published on Nov 30, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X