ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್

ಬೆಂಗಳೂರು, ಫೆಬ್ರವರಿ 21: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಅಂತಾರಾಷ್ಟ್ರೀಯ ಸರಣಿಗೂ ಮುನ್ನ ಟೀಂ ಇಂಡಿಯಾಕ್ಕೆ ಭಾರಿ ಹಿನ್ನಡೆಯುಂಟಾಗಿದೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಗಾಯಗೊಂಡಿದ್ದು ಸರಣಿಯಿಂದ ಹೊರಗುಳಿಯಬೇಕಿದೆ.
ಹಾರ್ದಿಕ್ ಪಾಂಡ್ಯ ಅವರ ಬದಲಿಗೆ ರವೀಂದ್ರ ಜಡೇಜ ಅವರು ತಂಡವನ್ನು ಸೇರಲಿದ್ದು, 5 ಏಕದಿನ ಪಂದ್ಯಗಳನ್ನಾಡಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ಸೆಣಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಎರಡು ಟಿ20 ಮತ್ತು ಐದು ಏಕದಿನ ಪಂದ್ಯಗಳಿಗಾಗಿ ಒಟ್ಟು ಮೂರು ತಂಡಗಳನ್ನು ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ಈ ಸರಣಿಯಲ್ಲಿ ಆಡುವ ಸದಸ್ಯರು ಬಹುತೇಕ ಮುಂಬರುವ ವಿಶ್ವಕಪ್ ನಲ್ಲಿ ಆಡುವ ತಂಡದಲ್ಲಿ ಸ್ಥಾನ ಪಡೆಯುವುದರಿಂದ ದಿನೇಶ್ ಕಾರ್ತಿಕ್, ರವೀಂದ್ರ ಜಡೇಜ, ಸುರೇಶ್ ರೈನಾ ಅವರನ್ನು ಆಯ್ಕೆ ಮಾಡದಿರುವ ಬಗ್ಗೆ ಪ್ರಶ್ನೆಗಳು ಕೇಳಿ ಬಂದಿತ್ತು.
ಫೆಬ್ರವರಿ 24ರಿಂದ ಆರಂಭಗೊಳ್ಳಲಿರುವ ಸರಣಿ ಆಡಲಿರುವ ಭಾರತ ತಂಡವನ್ನು ನ್ಯೂಜಿಲೆಂಡ್ ಸರಣಿಯಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದ ನಾಯಕ ವಿರಾಟ್ ಕೊಹ್ಲಿ, ಜಸ್ ಪ್ರೀತ್ ಬೂಮ್ರಾ, ಟಿವಿಶೋ ವಿವಾದದ ಹೇಳಿಕೆ ನಂತರ ನಿಷೇಧಕ್ಕೆ ಒಳಗಾಗಿದ್ದ ಕೆಎಲ್ ರಾಹುಲ್ ತಂಡ ಸೇರಿದ್ದಾರೆ
Story first published: Thursday, February 21, 2019, 15:04 [IST]
Other articles published on Feb 21, 2019
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications