Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್‌

ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ ಎಂದು ತಿಳಿದು ಬಂದಿದೆ.

ಭಾರತ ಹಾಗೂ ಅಫ್ಘಾನಿಸ್ತಾನ್ ನಡುವಿನ ಮೊದಲ ಏಕದಿನ ಪಂದ್ಯ ಜೂನ್‌ 13 ರಂದು ಧರ್ಮಶಾಲಾದಲ್ಲಿ ನಡೆಯಲಿದೆ. ಇನ್ನು ಸರಣಿಯ ಎರಡನೇ ಪಂದ್ಯ ಲಕ್ನೋನಲ್ಲಿ ಜೂನ್ 17 ರಿಂದ ನಡೆದರೆ, ಮೂರನೇ ಏಕದಿನ ಪಂದ್ಯ ಜೂನ್‌ 20 ರಂದು ಚೆನ್ನೈನಲ್ಲಿ ನಡೆಯಲಿದೆ.

Hardik Pandya

ಹಾರ್ದಿಕ್ ಪಾಂಡ್ಯ ಅವರು ಫಿಟ್ ಆಗಿದ್ದಾರೆ ಎಂದು ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ತಿಳಿಸಿತ್ತು. ಇವರಿಗೆ ಎರಡು ದಿನಗಳ ಮುಂಚೆಯೇ ಫಿಟ್ ಆಗಿದ್ದರೆ ಎಂದು ಪತ್ರವನ್ನು ನೀಡಲಾಗಿತ್ತು. ಅವರು ತಮ್ಮ ಫಿಟ್‌ನೆಸ್ ವರದಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಸಲ್ಲಿಸಿದ್ದರು.

ಸಿಒಇ ನಿಂದ ಹೊರಡುವ ಮುನ್ನ ನಡೆದ ಅವರ ಕೊನೆಯ ತರಬೇತಿ ಅವಧಿಯ ವೇಳೆ, ಅವರಿಗೆ ತಮ್ಮ ಫಿಟ್‌ನೆಸ್‌ಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳು ಕಾಣಿಸಿಕೊಂಡವು, ಹೀಗಾಗಿ ಇವರಿಗೆ ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವ ಅವಕಾಶವನ್ನು ನೀಡಲಾಗಿಲ್ಲ ಎಂದು ತಿಳಿದು ಬಂದಿದೆ.

ರೋಹಿತ್ ಶರ್ಮಾ ಫಿಟ್

ಇದಕ್ಕೂ ಮೊದಲು ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಇಬ್ಬರೂ ಫಿಟ್ನೆಸ್‌ ಪರೀಕ್ಷೆಯಲ್ಲಿ ಪಾಸ್‌ ಆಗಿದ್ದು, ಏಕದಿನ ಸರಣಿಯ ವೇಳೆ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಸುದ್ದಿಗಳು ಬಂದಿದ್ದವು. ಈ ಇಬ್ಬೂರ ಸ್ಟಾರ್ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ವೇಳೆ ಗಾಯಕ್ಕೆ ತುತ್ತಾಗಿದ್ದರು. ರೋಹಿತ್‌ ಶರ್ಮಾ ಸ್ನಾಯು ಸೆಳೆತದಿಂದಾಗಿ ಹಲವು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದರು. ಇನ್ನು ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಯನ್ನು ಎದುರಿಸುತ್ತಿದ್ದರು. ಹೀಗಾಗಿ ಇವರು ಸಹ ಲೀಗ್‌ ಹಂತದ ಕೊನೆಯಲ್ಲಿ ಹಲವು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದರು. ಇವರು ಐಪಿಎಲ್‌ ವೇಳೆ ಗಾಯಕ್ಕೆ ತುತ್ತಾಗಿದ್ದರಿಂದ ಇವರಿಬ್ಬರೂ ತಮ್ಮ ಫಿಟ್ನೆಸ್‌ ಪರೀಕ್ಷೆ ನೀಡಿ ತಂಡವನ್ನು ಸೇರಬಹುದಿತ್ತು.

ವಿರಾಟ್ ಕೊಹ್ಲಿ ಅನುಪಸ್ಥಿತಿ

ಸ್ಟಾರ್ ಆರಂಭಿಕ ಆಟಗಾರ ರೋಹಿತ್ ಶರ್ಮಾ ಫಿಟ್ನೆಸ್‌ ಪರೀಕ್ಷೆಯಲ್ಲಿ ಪಾಸ್‌ ಆಗಿದ್ದು, ಇವರು ಅಫ್ಘಾನಿಸ್ತಾನದ ಬೌಲರ್‌ಗಳನ್ನು ಕಾಡಲು ಸಿದ್ಧರಾಗಿದ್ದಾರೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಅವರ ಮೇಲೆ ಹೆಚ್ಚಿನ ನಿರೀಕ್ಷೆಗಳು ಇವೆ.

Hardik Pandya

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಈ ಏಕದಿನ ಸರಣಿಯು ಎರಡೂ ತಂಡಗಳಿಗೆ ನಿರ್ಣಾಯಕವಾಗಬಹುದು. 2027 ರ ಏಕದಿನ ವಿಶ್ವಕಪ್‌ಗೆ ಭಾರತ ತಂಡವು ತನ್ನ ಸಿದ್ಧತೆಗಳನ್ನು ಬಲಪಡಿಸಲು ಮತ್ತು ಹೊಸ ಆಟಗಾರರನ್ನು ಪರೀಕ್ಷಿಸಲು ಪ್ರಯತ್ನಿಸುತ್ತಿದ್ದರೆ, ಅಫ್ಘಾನಿಸ್ತಾನವು ಬಲಿಷ್ಠ ಎದುರಾಳಿಯ ವಿರುದ್ಧ ತನ್ನನ್ನು ತಾನು ಸಾಬೀತುಪಡಿಸಲು ಪ್ರಯತ್ನಿಸುತ್ತಿದೆ.

Story first published: Wednesday, June 10, 2026, 13:42 [IST]
Other articles published on Jun 10, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+