ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಕ್ರಿಕೆಟ್‌ನಲ್ಲಿ ಹಾರ್ದಿಕ್ ಪಾಂಡ್ಯ ಗೈರು ಅನುಭವಕ್ಕೆ ಬರಲಿದೆ: ಸೆಹ್ವಾಗ್

Hardik Pandya’s absence in Test series will be felt, says Virender Sehwag

ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿ ಅಂತ್ಯವಾಗಿದ್ದು ಸುದೀರ್ಘ ಮಾದರಿಯ ಕ್ರಿಕೆಟ್‌ನತ್ತ ಆಟಗಾರರು ಹಾಗೂ ಅಭಿಮಾನಿಗಳು ಚಿತ್ತ ನೆಟ್ಟಿದ್ದಾರೆ. ಸೀಮಿತ ಓವರ್‌ನ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಪರವಾಗಿ ಅದ್ಭುತ ಪ್ರದರ್ಶನ ನಿಡಿದ ಆಟಗಾರ ಎಂದರೆ ಹಾರ್ದಿಕ್ ಪಾಂಡ್ಯ. ಏಕದಿನ ಹಾಗೂ ಟಿ20 ಕ್ರಿಎಕಟ್‌ನಲ್ಲಿ ಮಿಂಚಿದ ಪಾಂಡ್ಯ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿಲ್ಲ.

ಆದರೆ ಹಾರ್ದಿಕ್ ಪಾಂಡ್ಯ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಿಕೊಲ್ಳಬೇಕು ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ. ವಿರಾಟ್ ಕೊಹ್ಲಿ ಮೊದಲ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮರಳುವ ಕಾರಣ ಆ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ಅಭಿಪ್ರಾಯಗಳನ್ನು ಅನೇಕರು ನೀಡಿದ್ದಾರೆ. ಈ ಮಧ್ಯೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಹಾರ್ದಿಕ್ ಪಾಂಡ್ಯ ಟೆಸ್ಟ್ ಸರಣಿಗೆ ಗೈರಾಗುತ್ತಿರುವುದು ತಂಡದ ಅನುಭವಕ್ಕೆ ಬರಲಿದೆ ಎಂದಿದ್ದಾರೆ.

ಸಿಕ್ಸ್‌ ಚಚ್ಚಿ ಅರ್ಧ ಶತಕ ಪೂರೈಸಿದ ಜಸ್‌ಪ್ರೀತ್‌ ಬೂಮ್ರಾ: ವಿಡಿಯೋಸಿಕ್ಸ್‌ ಚಚ್ಚಿ ಅರ್ಧ ಶತಕ ಪೂರೈಸಿದ ಜಸ್‌ಪ್ರೀತ್‌ ಬೂಮ್ರಾ: ವಿಡಿಯೋ

ಹಾರ್ದಿಕ್ ಪಾಂಡ್ಯ ದೀರ್ಘ ಕಾಲದ ಬೆನ್ನುನೋವಿಗೆ ಒಳಗಾದ ಕಾರಣ ಬೌಲಿಂಗ್ ಮಾಡಲು ಅಸಮರ್ಥರಾಗಿದ್ದಾರೆ. ಹಾಗಾಗಿ ಆರನೇ ಬೌಲರ್‌ನತ್ತ ಟೀಮ್ ಇಂಡಿಯಾ ನಾಯಕ ದೃಷ್ಟಿಹರಿಸಿದ್ದಾರೆ. ಈ ಕಾರಣದಿಂದಾಗಿ ಹಾರ್ದಿಕ್ ಪಾಂಡ್ಯ ಟೆಸ್ಟ್ ತಂಡದಿಂದ ಹೊರಗುಳಿದಿದ್ದಾರೆ ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಭಾರತದಿಂದಲೇ ಆಡಿ, 520 ಮಿ ಡಾಲರ್ ಪವರ್‌ಬಾಲ್ ಜಾಕ್‌ಪಾಟ್‌ ಗೆಲ್ಲಿಭಾರತದಿಂದಲೇ ಆಡಿ, 520 ಮಿ ಡಾಲರ್ ಪವರ್‌ಬಾಲ್ ಜಾಕ್‌ಪಾಟ್‌ ಗೆಲ್ಲಿ

"ಆತ ಬೌಲಿಂಗ್ ಮಾಡಲು ಸಮರ್ಥನಾದರೆ ಆತ ಟೀಮ್ ಇಂಡಿಯಾದ ಭಾಗವಾಗಲಿದ್ದಾರೆ. ಇದೇ ಕಾರಣದಿಂದಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಗಾರರಲ್ಲಿ ಟೆಸ್ಟ್ ಸರಣಿಗೆ ಪರಿಗಣಿಸದಿರುವಂತೆ ಹೇಳಿರುವ ಸಾಧ್ಯತೆಯಿದೆ. ಹಾಗಾಗಿಯೇ ಅವರು ಕೇವಲ ಟಿ20 ಹಾಗೂ ಏಕದಿನ ಸರಣಿಯಲ್ಲಿ ಪಾಲ್ಗೊಂಡಿದ್ದು ಬಳಿಕ ಕುಟುಂಬವನ್ನು ಸೇರಿಕೊಳ್ಳಲಿದ್ದಾರೆ" ಎಂದು ಸೆಹ್ವಾಗ್ ಪ್ರತಿಕ್ರಿಯಿಸಿದ್ದಾರೆ.

Story first published: Saturday, December 12, 2020, 10:18 [IST]
Other articles published on Dec 12, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X