Hardik Pandya: ಚಹಾಲ್ ದಾಖಲೆ ಅಳಿಸಿದ ಹಾರ್ದಿಕ್ ಪಾಂಡ್ಯ
ಭಾರತ ಹಾಗೂ ಪಾಕಿಸ್ತಾನ ನಡುವಣ ಏಷ್ಯಾ ಕಪ್ ಟಿ20 ಟೂರ್ನಿಯ ಸೂಪರ್ 4 ಹಂತದ ಪಂದ್ಯ ಭಾನುವಾರ ನಡೆಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಭಾರತದ ಸ್ಟಾರ್ ಆಟಗಾರರು ಭರ್ಜರಿ ಪ್ರದರ್ಶನ ನೀಡಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು. ಈ ಪಂದ್ಯದಲ್ಲಿ ಭಾರತದ ಪರ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದಾಖಲೆಯನ್ನು ಬರೆದಿದ್ದಾರೆ. ಅವರು ಬರೆದ ದಾಖಲೆ ಏನು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ಕಾಡಿದರು. ಇವರು ತಮ್ಮ ಮೊದಲ ಓವರ್‌ನಲ್ಲಿ ಪೆಟ್ಟು ನೀಡುವ ಸೂಚನೆ ನೀಡಿದರು. ಆದರೆ ಅಭಿಷೇಕ್ ಶರ್ಮಾ ಕ್ಯಾಚ್ ಬಿಟ್ಟರು. ಆದರೆ ಇನಿಂಗ್ಸ್‌ನ ಮೂರನೇ ಓವರ್‌ನಲ್ಲಿ ಪಾಕ್ ಆರಂಭಿಕರನ್ನು ಪೆವಿಲಿಯನ್‌ಗೆ ಅಟ್ಟುವಲ್ಲಿ ಸಫಲರಾದರು. ಈ ಮೂಲಕ ದಾಖಲೆ ಬರೆದರು.

ಹಾರ್ದಿಕ್ ಪಾಂಡ್ಯ, ಫಖರ್ ಜಮಾನ್‌ಗೆ ಖೆಡ್ಡ ತೋಡಿದಿರು. ಈ ವೇಳೆ ಇಲ್ಲದ ಹೊಡೆತಕ್ಕೆ ಮುಂದಾದ ಫಖರ್ ಜಮಾನ್ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರಿಗೆ ಕ್ಯಾಚ್ ನೀಡಿದರು. ಈ ಮೂಲಕ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ಚಹಾಲ್ ದಾಖಲೆ ಅಳಿಸಿದ ಪಾಂಡ್ಯ
ಟೀಮ್ ಇಂಡಿಯಾದ ಸೂಪರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಪಾಕ್ ವಿರುದ್ಧದ ಪಂದ್ಯದಲ್ಲಿ ಯುಜುವೇಂದ್ರ ಚಹಾಲ್ ಅವರ ದಾಖಲೆಯನ್ನು ಅಳಿಸಿ ಹಾಕಿದರು. ಯುಜುವೇಂದ್ರ ಚಹಾಲ್ 80 ಪಂದ್ಯಗಳಲ್ಲಿ 96 ವಿಕೆಟ್ ಪಡೆದು ಬೀಗಿದ್ದರು. ಹಾರ್ದಿಕ್ ಪಾಂಡ್ಯ 118 ಪಂದ್ಯಗಳಲ್ಲಿ 97 ವಿಕೆಟ್ ಪಡೆಯುವ ಮೂಲಕ ಚಹಾಲ್ ದಾಖಲೆಯನ್ನು ಅಳಿಸಿ ಹಾಕಿದರು.
ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್
ಅರ್ಷದೀಪ್ ಸಿಂಗ್, 64 ಪಂದ್ಯ, 100 ವಿಕೆಟ್
ಹಾರ್ದಿಕ್ ಪಾಂಡ್ಯ, 118 ಪಂದ್ಯ, 97 ವಿಕೆಟ್
ಯುಜುವೇಂದ್ರ ಚಹಾಲ್, 80 ಪಂದ್ಯ, 96 ವಿಕೆಟ್
ಜಸ್ಪ್ರೀತ್ ಬುಮ್ರಾ, 73 ಪಂದ್ಯ, 92 ವಿಕೆಟ್
ಭುವನೇಶ್ವರ್ ಕುಮಾರ್, 87 ಪಂದ್ಯ, 90 ವಿಕೆಟ್
ಪಂದ್ಯದ ಫಲಿತಾಂಶ
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡದ ಪರ ಸಾಹಿಬ್‌ಜಾದಾ ಫರ್ಹಾನ್ (58 ರನ್) ಬಾರಿಸಿದ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 171 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭಿಕರಾದ ಶುಭಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ಜೋಡಿ ಶತಕದ ಜೊತೆಯಾಟದ ಕಾಣಿಕೆ ನೀಡಿತು. ಪರಿಣಾಮ ಭಾರತ 18.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಸೇರಿಸಿ ಜಯ ಸಾಧಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications