Hardik Pandya: ರಾಜಸ್ಥಾನ ವಿರುದ್ಧ ರಾಯಲ್ ಆಟ ಆಡಿದ ಹಾರ್ದಿಕ್ ಪಾಂಡ್ಯ
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಪ್ರಸಕ್ತ ಐಪಿಎಲ್ ಲೀಗ್‌ನಲ್ಲಿ ಅಮೋಘ ಫಾರ್ಮ್‌ನಲ್ಲಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಉತ್ತಮ ಕಾಣಿಕೆ ನೀಡುತ್ತಿರುವ ಪಾಂಡ್ಯ ತಂಡದ ಗೆಲುವಿನಲ್ಲಿ ಮಿಂಚುತ್ತಿದ್ದಾರೆ. ಇಷ್ಟು ದಿನ ಬೌಲಿಂಗ್‌ನಲ್ಲಿ ಅಬ್ಬರಿಸಿದ್ದ ಪಾಂಡ್ಯ, ರಾಜಸ್ಥಾನ ವಿರುದ್ಧ ಬ್ಯಾಟಿಂಗ್‌ನಲ್ಲೂ ಕಮಾಲ್ ಪ್ರದರ್ಶನ ನೀಡಿದರು. ಈ ಮೂಲಕ ರಾಯಲ್ಸ್ ವಿರುದ್ಧದ ಜಯದಲ್ಲಿ ಮಿಂಚಿದರು. ಇವರ ಆಲ್‌ರೌಂಡರ್ ಆಟದ ಪ್ರದರ್ಶನದ ಬಲದಿಂದ ಮುಂಬೈ ಪಂದ್ಯ ಗೆದ್ದಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡದ ಆರಂಭಿಕರಾದ ರಯಾನ್ ರಿಕಲ್ಟನ್ ಹಾಗೂ ರೋಹಿತ್ ಶರ್ಮಾ ಅರ್ಧಶತಕ ಬಾರಿಸಿದರು. ಪರಿಣಾಮ ಮುಂಬೈ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 217 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ಬ್ಯಾಟರ್‌ಗಳು ರನ್ ಕಲೆ ಹಾಕುವುದನ್ನೇ ಮರೆತರು ಪರಿಣಾಮ ಹೀನಾಯ ಸೋಲು ಕಂಡರು. ತವರಿನಲ್ಲಿ ರಾಯಲ್ಸ್ 16.1 ಓವರ್‌ಗಳಲ್ಲಿ 117 ರನ್ ಸೇರಿಸಿ ಸೋಲು ಕಂಡಿತು.

ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಒಂದು ತಂಡವಾಗಿ ಆಡುತ್ತಿದೆ. ಕಳೆದ ಬಾರಿ ಇದ್ದ ಮನಸತಾಪಗಳು ಈಗ ತಂಡದಲ್ಲಿ ಇಲ್ಲ. ಎಲ್ಲ ಆಟಗಾರರು ತಂಡದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಈ ತಂಡವನ್ನು ಹಾರ್ದಿಕ್ ಪಾಂಡ್ಯ ಸಹ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಔಟ್ ಆಗುತ್ತಿದ್ದಂತೆ ಮೈದಾನಕ್ಕೆ ಇಳಿದ ಹಾರ್ದಿಕ್ ಪಾಂಡ್ಯ ಅಬ್ಬರಿಸಿದರು. ತಮ್ಮ ನೈಜ ಆಟವನ್ನು ಆಡಿದ ಪಾಂಡ್ಯ ರನ್ ವೇಗವನ್ನು ಸ್ಥಿರವಾಗಿಟ್ಟುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದರು.
ಹಾರ್ದಿಕ್ ಆಲ್‌ರೌಂಡರ್ ಆಟ
ಮೂರನೇ ವಿಕೆಟ್‌ಗೆ ಅನುಭವಿ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರನ್ನು ಸೇರಿಕೊಂಡ ಹಾರ್ದಿಕ್ ಪಾಂಡ್ಯ, ರಾಯಲ್ಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಮೂರನೇ ವಿಕೆಟ್‌ಗೆ ಈ ಜೋಡಿ 44 ಎಸೆತಗಳಲ್ಲಿ ಅಜೇಯ 94 ರನ್‌ಗಳ ಕಾಣಿಕೆ ನೀಡಿ ತಂಡಕ್ಕೆ ಆಧಾರವಾಯಿತು. ಸೂರ್ಯಕುಮಾರ್ ಯಾದವ್ 23 ಎಸೆತಗಳಲ್ಲಿ 48 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ 23 ಎಸೆತಗಳಲ್ಲಿ 48 ರನ್ ಸಿಡಿಸಿದರು. ಹಾರ್ದಿಕ್ ಈ ಇನಿಂಗ್ಸ್‌ನಲ್ಲಿ 6 ಬೌಂಡರಿ, 1 ಸಿಕ್ಸರ್ ಸೇರಿವೆ.
ಬ್ಯಾಟಿಂಗ್‌ನಲ್ಲಿ ನೆರವಾಗಿದ್ದ ಪಾಂಡ್ಯ ತಂಡಕ್ಕೆ ಬೌಲಿಂಗ್‌ನಲ್ಲೂ ಆಧಾರವಾದರು. ಈ ಬಾರಿಯ ಐಪಿಎಲ್‌ನಲ್ಲಿ ಬೌಲಿಂಗ್‌ನಲ್ಲಿ ಉತ್ತಮ ಮಾರ್ಪಾಡುಗಳನ್ನು ಪಾಂಡ್ಯ ಮಾಡಿಕೊಂಡಿರುವುದು ಕಂಡು ಬಂದಿತು. ರಾಜಸ್ಥಾನ್ ತಂಡದ ಶುಭಂ ದುಬೆ ಹಾರ್ದಿಕ್ ಪಾಂಡ್ಯ ಅವರ 132 ಕಿಲೋ ಮೀಟರ್ ವೇಗದ ಎಸೆತವನ್ನು ಅರಿಯುವಲ್ಲಿ ವಿಫಲರಾದರು. ಔಟ್ ಸೈಡ್ ಔಫ್ ಸ್ಟಂಪ್ ಆಚೆಗೆ ಹೊರಟಿದ್ದ ಚೆಂಡನ್ನು ಶುಭಂ ಲಾಂಗ್ ಆನ್ ಮೇಲೆ ಬಾರಿಸಲು ಹೋಗಿ ಟ್ರೆಂಟ್ ಬೌಲ್ಟ್ ಹಿಡಿದ ಕ್ಯಾಚ್‌ಗೆ ಬಲಿಯಾದರು. ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್‌ನಲ್ಲಿ ಮಿಂಚು ಹರಿಸುತ್ತಿರುವುದು ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಖುಷಿ ನೀಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications