ಮುಂಬೈನಲ್ಲಿ ನಟಿ ಮಹಿಕಾ ಶರ್ಮಾ ಜೊತೆ ಕಾಣಿಸಿಕೊಂಡ ಟೀಮ್ ಇಂಡಿಯಾ ಸ್ಟಾರ್
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಇತ್ತೀಚಿಗೆ ತಮ್ಮ ಪ್ರದರ್ಶನಕ್ಕಿಂತ ತಮ್ಮ ವೈಯಕ್ತಿಕ ಜೀವನದಿಂದ ಹೆಚ್ಚು ಸುದ್ದಿಯಲ್ಲಿದ್ದಾರೆ. ಕೆಲ ದಿನಗಳ ಹಿಂದೆ ಹಾರ್ದಿಕ್ ಜೆಸ್ಮಿನ್ ವಾಲಿಯಾ ಅವರೊಂದಿಗೆ ಸಂಬಂಧ ಹೊಂದಿದ್ದಾಗಿ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಈಗ ಹಾರ್ದಿಕ್ ಪಾಂಡ್ಯ ಮುಂಬೈ ವಿಮಾನ ನಿಲ್ದಾಣದಲ್ಲಿ ಸುಂದರ ಯುವತಿಯೊಂದಿಗೆ ತಿರುಗಾಡುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹಾರ್ದಿಕ್ ಅವರೊಂದಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಯುವತಿಯನ್ನು ಮಹಿಕಾ ಶರ್ಮಾ ಗುರುತಿಸಲಾಗಿದೆ. ಅವರಿಬ್ಬರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಆದರೆ ಇವರಿಬ್ಬರೂ ತಮ್ಮ ಸಂಬಂಧದ ಬಗ್ಗೆ ಇನ್ನು ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಹಾರ್ದಿಕ್ ಪಾಂಡ್ಯ ಅವರು ಕಳೆದ ವರ್ಷ ನತಾಶಾ ಸ್ಟಾಂಕೋವಿಕ್ ಅವರಿಂದ ವಿಚ್ಛೇದನ ಪಡೆದಿದ್ದರು.

ವೈರಲ್ ವಿಡಿಯೋ
ಇತ್ತೀಚಿಗೆ ಮಹಿಕಾ ಅವರು ತಮ್ಮ ಒಂದು ಸೆಲ್ಫಿ ವಿಡಿಯೋ ಒಂದನ್ನು ಸಾಮಾಜಿಕ ತಾಣದಲ್ಲಿ ಹಾಕಿದ್ದರು. ಆಗಿನಿಂದ ಹಾರ್ದಿಕ್ ಹಾಗೂ ಅವರ ಸಂಬಂಧದ ಬಗ್ಗೆ ವದಂತಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಹಲವು ಹೇಳಿಕೆಗಳು ಹರಿದಾಡುತ್ತಿದ್ದವು. ಇನ್ನು ಈಗ ಹಾರ್ದಿಕ್ ಅವರು ಮಹಿಕಾ ಅವರೊಂದಿಗಿನ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ತಾಣದಲ್ಲಿ ಬಳಕೆ ದಾರರು, ಜಾಸ್ಮಿನ್ ವಾಲಿಯಾ ಎಲ್ಲಿಗೆ ಹೋಗಿದ್ದಾರೆ ಎಲ್ಲಿ ಎಂದು ಕೇಳುತ್ತಿದ್ದಾರೆ.
ಸಾಮಾಜಿಕ ತಾಣದಲ್ಲಿ ತುಂಬ ಸಕ್ರಿಯವಾಗಿರುವ ಮಹಿಕಾ ಶರ್ಮಾ ಒಬ್ಬ ಮಾಡೆಲ್ ಹಾಗೂ ನಟಿ. ಇವರು ಫಿಟ್ನೆಸ್ ಹಾಗೂ ಫ್ಯಾಷನ್ ಸಂಬಂಧಿತ ವಿಡಿಯೋಗಳನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಳ್ಳುತ್ತಿದ್ದರು. ಇವರು ದೆಹಲಿಯಲ್ಲಿ ತಮ್ಮ ವ್ಯಾಸಂಗವನ್ನು ಪೂರ್ಣಗೊಳಿಸಿದ್ದಾರೆ. ಅಲ್ಲದೆ ಯುಎಸ್‌ಎ ನಲ್ಲಿ ಉನ್ನತ ವ್ಯಾಸಂಗವನ್ನು ಮಾಡಿದ್ದಾರೆ. ಇವರು ಅರ್ಥಶಾಸ್ತ್ರ ಹಾಗೂ ಹಣಕಾಸು ಅಧ್ಯಯನ ಮಾಡಿದ್ದಾರೆ. ಬಳಿಕ ಇವರು ಮಾಡೆಲಿಂಗ್ ಹಾಗೂ ನಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಅಲ್ಲದೆ ಇವರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಹಾರ್ದಿಕ್ ಪಾಂಡ್ಯ ಅವರು ಟೀಮ್ ಇಂಡಿಯಾದ ಪರ ಸ್ಥಿರ ಪ್ರದರ್ಶನದಿಂದ ಹೆಸರುವಾಸಿ. ಇವರು ಇತ್ತಿಚಿಗೆ ದುಬೈನಲ್ಲಿ ನಡೆದ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಫೈನಲ್‌ನಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಇವರು ಈ ವೇಳೆ ಗಾಯಕ್ಕೆ ತುತ್ತಾಗಿದ್ದರು. ಈಗ ಇವರು ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications