Hardik Pandya: ಏಷ್ಯಾ ಕಪ್ ಟಿ20ಗೆ ಹಾರ್ದಿಕ್ ಪಾಂಡ್ಯ ನ್ಯೂ ಲುಕ್
ಇನ್ನೇನು ಕೆಲವೇ ದಿನಗಳಲ್ಲಿ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಗೆ ಎಲ್ಲ ತಂಡಗಳು ಯುಎಇನತ್ತ ಮುಖ ಮಾಡಿವೆ. ಭಾರತ ಸಹ ಈ ಟೂರ್ನಿಯಲ್ಲಿ ಭಾಗವಹಿಸಲು ಯುಎಇನತ್ತ ಮುಖ ಮಾಡಿದೆ. ಸೆ.9 ರಂದು ಯುಎಇನಲ್ಲಿ ನಡೆಯಲಿದೆ. ಭಾರತ ಈ ಟೂರ್ನಿಯಲ್ಲಿ ಸೆ.10 ರಂದು ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಐಸಿಸಿ ಅಕಾಡೆಮಿಯಲ್ಲಿ ಮೊದಲ ಅಭ್ಯಾಸವನ್ನು ಇಂದು (ಸೆ.5) ನಡೆಸಲಿದೆ.
ಬಿಗ್ ಟೂರ್ನಿಗಾಗಿ ಟೀಮ್ ಇಂಡಿಯಾದ ಆಟಗಾರರು ಭರದ ತಯಾರಿ ನಡೆಸಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸಹ ಭರ್ಜರಿ ತಾಲೀಮು ನಡೆಸಿದ್ದಾರೆ. ಸಾಮಾಜಿಕ ತಾಣದಲ್ಲಿ ಹಾರ್ದಿಕ್ ಪಾಂಡ್ಯ ಅವರ ನ್ಯೂ ಲುಕ್ ಸಖತ್ ವೈರಲ್ ಆಗುತ್ತಿದೆ. ಈ ಲುಕ್ ನೋಡಿದ ಅಭಿಮಾನಿಗಳು ಅವರನ್ನು ಗುರುತಿಸಲು ಕಷ್ಟ ಪಟ್ಟಿದ್ದಾರೆ.

ಹಾರ್ದಿಕ್ ಪಾಂಡ್ಯ ತಮ್ಮ ಹೊಸ ಲುಕ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾನ್ಯವಾಗಿ ಕಪ್ಪು ಬಣ್ಣ ತಲೆ ಕೂದಿಲಿನಲ್ಲಿ ಮಿಂಚುತ್ತಿದ್ದ ಹಾರ್ದಿಕ್ ಈ ಬಾರಿ ಬಣ್ಣ ಬದಲಿಸಿದ್ದಾರೆ. ಈ ಬಾರಿ ಹಾರ್ದಿಕ್ ಪಾಂಡ್ಯ ಮರಳು ಹೊಂಬಣ್ಣದ ಬಣ್ಣದ ಕೂದಿಲಿನಲ್ಲಿ ಕಂಡು ಬಂದಿದ್ದಾರೆ. ಈ ಲುಕ್ ಅವರಿಗೆ ಸಖತ್ ಆಗಿ ಕಾಣುತ್ತಿದೆ. ನಿಜಕ್ಕೂ ಆಲ್‌ರೌಂಡರ್ ಅವರ ನ್ಯೂ ಲುಕ್ ಸಖತ್ ಆಗಿ ಕಾಣುತ್ತಿದೆ. ಈ ವೇಳೆ ಟೀಮ್ ಇಂಡಿಯಾ ಸೂಪರ್ ಸ್ಟಾರ್ ಆಟಗಾರ ವಿಭಿನ್ನ ಭಂಗಿಗಳಲ್ಲಿ ತಮ್ಮ ಹೊಸ ಲುಕ್‌ನೊಂದಿಗೆ ಅನೇಕ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.
ನ್ಯೂ ಲುಕ್
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಭಾರತದ ಪರ ಕೊನೆಯ ಬಾರಿಗೆ ಈ ವರ್ಷದ ಆರಂಭದಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಏಕದಿನ ಪಂದ್ಯದಲ್ಲಿ ಅಂಗಳಕ್ಕೆ ಇಳಿದಿದ್ದರು. ಈಗ ಅವರು ಮತ್ತೆ ಬ್ಲ್ಯೂ ಜೆರ್ಸಿಯಲ್ಲಿ ಅಬ್ಬರಿಸಲು ತಯಾರಾಗಿದ್ದಾರೆ. ಇವರು ಈ ಟೂರ್ನಿಯಲ್ಲಿ ವಿಶೇಷವಾಗಿ ಫಿನಿಷರ್ ಪಾತ್ರದಲ್ಲಿ ಕಾಣಿಸಿಕೊಂಡರೆ ಅಚ್ಚರಿಯಿಲ್ಲ. ಇವರು ಚುಟುಕು ಫಾರ್ಮೆಟ್‌ನಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗಬಲ್ಲ ಆಟಗಾರ.
ಹಾರ್ದಿಕ್ ಏಷ್ಯಾ ಕಪ್‌ನಲ್ಲಿ ಹಲವು ಹೊಸ ದಾಖಲೆಗಳನ್ನು ಬರೆಯುವ ಅವಕಾಶವನ್ನು ಹೊಂದಿದ್ದಾರೆ. ಇವರು ಈ ಟೂರ್ನಿಯಲ್ಲಿ 5 ಸಿಕ್ಸರ್ ಬಾರಿಸಿದ್ದೇ ಆದಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಸಿಕ್ಸರ್ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ವರೆಗೆ ಈ ಸಾಧನೆಯನ್ನು ಭಾರತದ ಪರ ಕೇವಲ ನಾಲ್ಕು ಆಟಗಾರರು ಮಾತ್ರ ಮಾಡಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅವರ ಎಲೈಟ್ ಕ್ಲಬ್‌ಗೆ ಎಂಟ್ರಿ ಪಡೆಯಲು ಹಾರ್ದಿಕ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯ 17 ರನ್ ಬಾರಿಸುತ್ತಿದ್ದಂತೆ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ 100 ರನ್ ಹಾಗೂ 10 ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications