Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2022: ಯೊ-ಯೊ ಟೆಸ್ಟ್ ಪಾಸ್ ಆದ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯಲು ಸಿದ್ಧ

Hardik Pandya successfully cleart Yo-Yo test ahead of IPL 2022

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ತಿಂಗಳ 26ರಂದು ಆರಂಭವಾಗುತ್ತಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್‌ ಕಿಂಗ್ಸ್ ಮತ್ತು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜಿಯಂಟ್ಸ್ ನೂತನ ತಂಡಗಳಾಗಿ ಕಣಕ್ಕಿಳಿಯುತ್ತಿವೆ. ಲಕ್ನೋ ಸೂಪರ್ ಜಿಯಂಟ್ಸ್ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಿದರೆ, ಗುಜರಾತ್ ಟೈಟನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಇನ್ನು ಈ ಹಿಂದೆ ಗಾಯದ ಸಮಸ್ಯೆಯಿಂದಾಗಿ ಬೌಲಿಂಗ್ ಕೂಡ ಮಾಡಲಾಗದೇ ಇದ್ದ ಹಾರ್ದಿಕ್ ಪಾಂಡ್ಯ ಫಿಟ್‌ನೆಸ್ ಕುರಿತು ಸಾಕಷ್ಟು ಅನುಮಾನಗಳಿದ್ದವು. ಅಂತರರಾಷ್ಟ್ರೀಯ ತಂಡದಿಂದ ಹೊರಗುಳಿಯುವಷ್ಟು ಸಮಸ್ಯೆಗೊಳಗಾಗಿರುವ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್‌ ಟೈಟನ್ಸ್ ತಂಡವನ್ನು ಮುನ್ನಡೆಸುವಷ್ಟು ಶಕ್ತರಾಗಿದ್ದಾರಾ ಎಂಬ ಸಂಶಯ ಕೂಡ ಕ್ರಿಕೆಟ್ ಪ್ರೇಕ್ಷಕರಲ್ಲಿತ್ತು. ಆದರೆ, ಇದೀಗ ಹಾರ್ದಿಕ್ ಪಾಂಡ್ಯಾ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಯೊಯೊ ಟೆಸ್ಟ್‌್ನ್ನು ಯಶಸ್ವಿಯಾಗಿ ಪೂರೈಸಿದ್ದು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಣಕ್ಕಿಳಿದು ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.

ಇನ್ನು ಖುಷಿಯ ವಿಷಯವೇನೆಂದರೆ ಹಾರ್ದಿಕ್ ಪಾಂಡ್ಯಾ ಈ ಫಿಟ್‌ನೆಸ್ ಪರೀಕ್ಷೆಯಲ್ಲಿ ಗಂಟೆಗೆ 135 ಕಿಲೋ ಮೀಟರ್ ವೇಗದಲ್ಲಿ ಕೂಡ ಬೌಲಿಂಗ್ ಮಾಡಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯಾ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಬೌಲಿಂಗ್ ಮಾಡಲಿದ್ದಾರೆ ಎಂಬ ಅಭಿಪ್ರಾಯ ಕ್ರಿಕೆಟ್ ಪ್ರೇಕ್ಷಕರ ವಲಯದಲ್ಲಿ ವ್ಯಕ್ತವಾಗುತ್ತಿದ್ದು, ಹಲವು ದಿನಗಳ ಬಳಿಕ ತಮ್ಮ ನೆಚ್ಚಿನ ಕ್ರಿಕೆಟಿಗ ಬೌಲಿಂಗ್ ಮಾಡುವುದನ್ನು ಕಣ್ತುಂಬಿಕೊಳ್ಳಲು ಹಾರ್ದಿಕ್ ಪಾಂಡ್ಯಾ ಅಭಿಮಾನಿಗಳು ಕಾತರರಾಗಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯಾ ಈ ಯೊ ಯೊ ಟೆಸ್ಟ್ ಪಾಸ್ ಆಗಿರುವುದು ಸದ್ಯ ಹಾರ್ದಿಕ್ ಪಾಂಡ್ಯಾಗೆ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಅವಕಾಶವನ್ನು ತಂದುಕೊಡಲಿದೆಯಾ ಎಂಬ ಚರ್ಚೆಗಳಿಗೂ ನಾಂದಿ ಹಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ಈ ರೀತಿಯ ಅಭಿಪ್ರಾಯಗಳೂ ಸಹ ವ್ಯಕ್ತವಾಗುತ್ತಿವೆ. ಹಾರ್ದಿಕ್ ಪಾಂಡ್ಯಾ 17+ ಅಂಕಗಳೊಂದಿಗೆ ಈ ಯೊ ಯೊ ಟೆಸ್ಟ್‌ನ್ನು ಪೂರೈಸಿದ್ದು, ಶೀಘ್ರದಲ್ಲಿಯೇ ಗುಜರಾತ್ ಟೈಟನ್ಸ್ ತರಬೇತಿ ಶಿಬಿರವನ್ನು ಸೇರಿಕೊಳ್ಳಲಿದ್ದಾರೆ.

ಗುಜರಾತ್ ಟೈಟನ್ಸ್ ಜೆರ್ಸಿ ಬಿಡುಗಡೆ: ಹಾರ್ದಿಕ್ ಪಾಂಡ್ಯಾ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ನೂತನ ತಂಡ ಗುಜರಾತ್ ಟೈಟನ್ಸ್ ತಂಡದ ಜೆರ್ಸಿ ಬಿಡುಗಡೆ ಕಾರ್ಯಕ್ರಮ ಕಳೆದ ಶನಿವಾರ ( ಮಾರ್ಚ್ 12 ) ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ನೀಲಿ ಮತ್ತು ತಿಳಿನೀಲಿ ಬಣ್ಣದ ಜೆರ್ಸಿಯನ್ನು ಗುಜರಾತ್ ಟೈಟನ್ಸ್ ಫ್ರಾಂಚೈಸಿ ತಮ್ಮ ನಾಯಕ ಹಾರ್ದಿಕ್ ಪಾಂಡ್ಯಾ ಮತ್ತು ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಿತು.

ಗುಜರಾತ್ ಟೈಟನ್ಸ್ ಸಂಪೂರ್ಣ ತಂಡ: ಹಾರ್ದಿಕ್ ಪಾಂಡ್ಯ, ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ರಹಮಾನುಲ್ಲಾ ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ವಿಜಯ್ ಶಂಕರ್, ಜಯಂತ್ ಯಾದವ್, ಡೊಮಿನಿಕ್ ಡ್ರೇಕ್ಸ್, ದರ್ಶನ್ ನಲ್ಕಂಡೆ, ಪ್ರದೀಪ್ ನಲ್ಕಂಡೆ, ಯಶ್ವಾನ್ ದಯಾಳ್ , ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್.

Story first published: Wednesday, March 16, 2022, 20:49 [IST]
Other articles published on Mar 16, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+