Hardik Pandya: ಭುವಿ, ಬುಮ್ರಾ ಹಿಂದಿಕ್ಕಿದ ಹಾರ್ದಿಕ್ ಪಾಂಡ್ಯ
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಬುಧವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಸೃಷ್ಟಿಸಿದ್ದಾರೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದವರ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಮೇಲೆರಿದ್ದಾರೆ. ಈ ಮೂಲಕ ವೇಗದ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರನ್ನು ಹಾರ್ದಿಕ್ ಪಾಂಡ್ಯ ಹಿಂದಿಕ್ಕಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 2 ವಿಕೆಟ್ ಪಡೆದು ಈ ದೊಡ್ಡ ಸಾಧನೆ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ಕೋಲ್ಕತ್ತಾದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ಹೆಚ್ಚು ರನ್ ಬಿಟ್ಟು ಕೊಟ್ಟರು. ಆದರೂ ಎರಡು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಹಾರ್ದಿಕ್ ಪಾಂಡ್ಯ 4 ಓವರ್‌ಗಳಲ್ಲಿ 42 ರನ್ ನೀಡಿ 2 ವಿಕೆಟ್ ಪಡೆದರು. ಈ ಪಂದ್ಯದಲ್ಲಿ ಜಾಕೋಬ್ ಬೆಥೆಲ್ (7) ಮತ್ತು ಜೋಫ್ರಾ ಆರ್ಚರ್ (12) ಅವರನ್ನು ಹಾರ್ದಿಕ್ ಪಾಂಡ್ಯ ಔಟ್ ಮಾಡಿದ್ದರು.

ಹಾರ್ದಿಕ್ ಪಾಂಡ್ಯ ಇಂಗ್ಲೆಂಡ್‌ನ ಜಾಕೋಬ್ ಬೆಥೆಲ್ ಮತ್ತು ಜೋಫ್ರಾ ಆರ್ಚರ್ ಅವರನ್ನು ಔಟ್ ಮಾಡುತ್ತಿದ್ದಂತೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡರು. ಹಾರ್ದಿಕ್ ಪಾಂಡ್ಯ 110 ಟಿ20 ಪಂದ್ಯಗಳಲ್ಲಿ 91 ವಿಕೆಟ್ ಪಡೆದಿದ್ದಾರೆ. ಇದಕ್ಕೂ ಮುನ್ನ ಭುವನೇಶ್ವರ್ ಕುಮಾರ್ 87 ಟಿ20 ಪಂದ್ಯಗಳಲ್ಲಿ 90 ವಿಕೆಟ್ ಮೂರನೇ ಸ್ಥಾನದಲ್ಲಿದ್ದರು. ಜಸ್ಪ್ರೀತ್ ಬುಮ್ರಾ 70 ಟಿ20 ಪಂದ್ಯಗಳಲ್ಲಿ 89 ವಿಕೆಟ್‌ಗಳೊಂದಿಗೆ ನಂತರದ ಸ್ಥಾನದಲ್ಲಿದ್ದರು.
ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್
ಹಾರ್ದಿಕ್ ಪಾಂಡ್ಯ ಈಗ ಅರ್ಷದೀಪ್ ಸಿಂಗ್ ಮತ್ತು ಯುಜ್ವೇಂದ್ರ ಚಹಾಲ್ ನಂತರ ಟಿ20 ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಉರುಳಿಸಿದ ಬೌಲರ್ ಎಂ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಹಾರ್ದಿಕ್ ಅವರಿಗೂ ಮುನ್ನ ಈ ಪಂದ್ಯದಲ್ಲಿಯೇ, ಅರ್ಷದೀಪ್ ಸಿಂಗ್ ಭಾರತದ ಪರ ಅತಿ ಹೆಚ್ಚು ಟಿ20 ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಅವರು ಪವರ್-ಪ್ಲೇನಲ್ಲಿ 2 ವಿಕೆಟ್ ಪಡೆದು ಇತಿಹಾಸ ಸೃಷ್ಟಿಸಿದರು.
ಅರ್ಷದೀಪ್ ಸಿಂಗ್ ಪಂದ್ಯದ ಮೊದಲ ಎರಡು ಓವರ್‌ಗಳಲ್ಲಿ ಇಂಗ್ಲೆಂಡ್‌ನ ಆರಂಭಿಕರಾದ ಫಿಲ್ ಸಾಲ್ಟ್ (0) ಮತ್ತು ಬೆನ್ ಡಕೆಟ್ (4) ಇಬ್ಬರನ್ನೂ ಔಟ್ ಮಾಡಿದರು. ಅರ್ಷದೀಪ್ ಸಿಂಗ್ ಈಗ 61 ಟಿ20 ಪಂದ್ಯಗಳಲ್ಲಿ 97 ವಿಕೆಟ್‌ಗಳನ್ನು ಕಬಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ಯುಜ್ವೇಂದ್ರ ಚಹಾಲ್ 80 ಪಂದ್ಯಗಳಲ್ಲಿ 96 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನವನ್ನು ಪಡೆದಿದ್ದಾರೆ.
ಅತಿಹೆಚ್ಚು ಟಿ20 ವಿಕೆಟ್ ಪಡೆದ ಭಾರತದ ಬೌಲರ್ಸ್
ಅರ್ಷದೀಪ್ ಸಿಂಗ್ - 97 ವಿಕೆಟ್
ಯುಜ್ವೇಂದ್ರ ಚಹಾಲ್ - 96 ವಿಕೆಟ್
ಹಾರ್ದಿಕ್ ಪಾಂಡ್ಯ - 91 ವಿಕೆಟ್
ಭುವನೇಶ್ವರ್ ಕುಮಾರ್ - 90 ವಿಕೆಟ್
ಜಸ್ಪ್ರೀತ್ ಬುಮ್ರಾ - 89 ವಿಕೆಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications