For Quick Alerts
ALLOW NOTIFICATIONS  
For Daily Alerts
 

Hardik Pandya: ಸಿಕ್ಸರ್ ಬಾರಿಸಿ ಪಂದ್ಯ ಗೆಲ್ಲಿಸಿದ ಹಾರ್ದಿಕ್ ಪಾಂಡ್ಯ ಹೆಸರಿನಲ್ಲಿ ದಾಖಲೆ

ಭಾರತಕ್ಕೆ ಎಂಎಸ್ ಧೋನಿ ನಂತರ ಸಿಕ್ಕ ಬೆಸ್ಟ್ ಫಿನಿಶರ್ ಅಂದರೆ ಹಾರ್ದಿಕ್ ಪಾಂಡ್ಯ. ಅವರು ಟೀಮ್ ಇಂಡಿಯಾ ಪರ ಹಲವು ಪಂದ್ಯಗಳನ್ನು ವಿಭಿನ್ನವಾಗಿ ಫಿನಿಶ್ ಮಾಡಿದ್ದಾರೆ. ಅವರು ಹೊಡೆಯುವ ಒಂದೊಂದು ಶಾಟ್ ಕೂಡ ಪವರ್ ಫುಲ್ ಆಗಿದ್ದು, ಚೆಂಡನ್ನು ಮೈದಾನದಿಂದ ಹೊರ ಕಳುಹಿಸುವ ಸಾಮರ್ಥ್ಯ ಹೊಂದಿದ್ದಾರೆ.

ಭಾನುವಾರ ಕೂಡ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಸಿಕ್ಸರ್ ಬಾರಿಸುವ ಮೂಲಕ ಪಂದ್ಯವನ್ನು ಗೆಲ್ಲಿಸಿದರು. ಅವರು ಭಾರತವನ್ನು ಪಂದ್ಯವನ್ನು ಗೆಲ್ಲುವಂತೆ ಮಾಡಿದ್ದು ಮಾತ್ರವಲ್ಲದೆ ತಮ್ಮ ಹೆಸರಿನಲ್ಲಿ ವಿಶಿಷ್ಟ ದಾಖಲೆಯನ್ನು ದಾಖಲಿಸಿದರು. ಇದರೊಂದಿಗೆ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

Hardik Pandya wrote record of winning the match by hitting six

ಕೊಹ್ಲಿ ದಾಖಲೆ ಬ್ರೇಕ್

ವಿರಾಟ್ ಕೊಹ್ಲಿ ಅವರು ಟಿ20 ವಿಶ್ವಕಪ್ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಚುಟುಕು ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಕೊಹ್ಲಿಯನ್ನು ಹಿಂದಿಕ್ಕಿರುವ ಹಾರ್ದಿಕ್ ಪಾಂಡ್ಯ ತಮ್ಮ ವೃತ್ತಿಜೀವನದಲ್ಲಿ ಐದನೇ ಬಾರಿಗೆ ಸಿಕ್ಸರ್ ಬಾರಿಸುವ ಮೂಲಕ ಪಂದ್ಯವನ್ನು ಗೆಲ್ಲಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದು, ಅವರು ನಾಲ್ಕು ಬಾರಿ ಸಿಕ್ಸರ್ ಹೊಡೆದು ಪಂದ್ಯ ಮುಗಿಸಿದ್ದರು. ಅವರು 2022ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಪಾಂಡ್ಯ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಭಾರತಕ್ಕೆ ಗೆಲುವ ತಂದು ಕೊಟ್ಟಿದ್ದರು.

ಇದಲ್ಲದೆ, ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 2020ರ ಟಿ20 ವಿಶ್ವಕಪ್‌ನಲ್ಲಿ ಪಾಂಡ್ಯ ಕೊನೆಯ ಎರಡು ಎಸೆತಗಳಲ್ಲಿ ಸಿಕ್ಸರ್‌ಗಳನ್ನು ಬಾರಿಸಿದ್ದರು. ಪಾಂಡ್ಯ ಐದು ಬಾರಿ ಮತ್ತು ಕೊಹ್ಲಿ ನಾಲ್ಕು ಬಾರಿ ಈ ಸಾಧನೆ ಮಾಡುವ ಮೂಲಕ ಅತಿಹೆಚ್ಚು ಬಾರಿ ಸಿಕ್ಸರ್ ಹೊಡೆದು ಪಂದ್ಯ ಗೆಲ್ಲಿಸಿದವರ ಪಟ್ಟಿಯಲ್ಲಿ ಕ್ರಮವಾಗಿ ಮೊದಲೆರು ಸ್ಥಾನದಲ್ಲಿದ್ದಾರೆ. ರಿಷಬ್ ಪಂತ್ ಮತ್ತು ಎಂಎಸ್ ಧೋನಿ ತಲಾ ಮೂರು ಬಾರಿ ಈ ಸಾಧನೆ ಮಾಡಿದ್ದು, ಮೂರನೇ ಸ್ಥಾನದಲ್ಲಿದ್ದಾರೆ.

ಭಾರತ vs ಬಾಂಗ್ಲಾದೇಶ ಮೊದಲ ಟಿ20

ಗ್ವಾಲಿಯರ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಭಾರತ 127 ರನ್‌ಗಳಿಗೆ ಕಟ್ಟಿಹಾಕಿತು. ಅರ್ಷದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ ತಲಾ ಮೂರು ವಿಕೆಟ್ ಕಬಳಿಸಿ ಮಿಂಚಿದರು. ಈ ಗುರಿ ಬೆನ್ನಟ್ಟಿದ ಭಾರತ 49 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್‌ಗಳು ಭರ್ಜರಿ ಜಯ ದಾಖಲಿಸಿತು.

ಹಾರ್ದಿಕ್ ಪಾಂಡ್ಯ 39 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿ ಭಾರತ ಸುಲಭ ಗುರಿ ತಲುಪಲು ನೆರವಾದರು. ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಎರಡನೇ ಟಿ20 ಪಂದ್ಯ ಅಕ್ಟೋಬರ್ 9 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

Story first published: Monday, October 7, 2024, 20:18 [IST]
Other articles published on Oct 7, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+