ವರುಣ್‌ಗೆ 51, ಹಾರ್ದಿಕ್‌ಗೆ 100 ವಿಕೆಟ್ ಸಂಭ್ರಮ: ಭಾರತಕ್ಕೆ 118 ರನ್ ಗುರಿ ನೀಡಿದ ದ.ಆಫ್ರಿಕಾ
ಧರ್ಮಶಾಲಾ: ನಾಯಕ ಐಡೇನ್ ಮಾರ್ಕ್ರಮ್ ಬಾರಿಸಿದ ಅರ್ಧಶತಕದ ಬಲದಿಂದ ದಕ್ಷಿಣ ಆಫ್ರಿಕಾ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ ಭಾರತಕ್ಕೆ 118 ರನ್‌ಗಳ ಗುರಿಯನ್ನು ನೀಡಿದೆ. ಈ ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ಸಾಧನೆ ಮಾಡಿದ್ದಾರೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಆಟಗಾರರು ಉತ್ತಮ ಜೊತೆಯಾಟ ನೀಡಲು ವಿಫಲರಾದರು. ಭಾರತದ ಪರ ಇನಿಂಗ್ಸ್ ಆರಂಭಿಸಿದ ಅರ್ಷದೀಪ್ ಸಿಂಗ್ ಮೊದಲ ಓವರ್‌ನ ನಾಲ್ಕನೇ ಎಸೆತದಲ್ಲಿ ರಿಜಾ ಹೆಂಡ್ರಿಕ್ಸ್ ತೋಡಿದ ಖೆಡ್ಡಾಗೆ ಬಲಿಯಾದರು. ಇನ್ನೊಂದು ತುದಿಯಿಂದ ಬೌಲಿಂಗ್ ಮಾಡಿದ ಹರ್ಷಿತ್ ರಾಣಾ ಅವರು ಸಹ ದಕ್ಷಿಣ ಆಫ್ರಿಕಾಕ್ಕೆ ಪೆಟ್ಟು ನೀಡಿದರು. ಹರ್ಷಿತ್, ಎರಡನೇ ಟಿ20 ಪಂದ್ಯದಲ್ಲಿ ಅರ್ಧಶತಕ ಬಾರಿಸಿ ತಂಡಕ್ಕೆ ಆಧಾರವಾಗಿದ್ದ ಕ್ವಿಂಟನ್ ಡಿಕಾಕ್‌ಗೆ ಪೆವಿಲಿಯನ್ ಹಾದಿ ತೋರಿಸಿದರು.

ಭರವಸೆಯ ಬ್ಯಾಟರ್ ಡೆವಾಲ್ಡ್ ಬ್ರೇವಿಸ್ (2) ಬಂದು ಹೋಗುವ ಸಂಪ್ರದಾಯವನ್ನು ಮುಗಿಸಿದರು. ದಕ್ಷಿಣ ಆಫ್ರಿಕಾ 3.1 ಓವರ್‌ಗಳಲ್ಲಿ 7 ರನ್‌ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. 4ನೇ ವಿಕೆಟ್‌ಗೆ ಟ್ರಿಸ್ಟನ್ ಸ್ಟಬ್ಸ್ (9) ಹಾಗೂ ನಾಯಕ ಐಡೆನ್ ಮಾರ್ಕ್ರಮ್ ಜೋಡಿ 23 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಸ್ಟಬ್ಸ್ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದ ಕಾರ್ಬಿನ್ ಬಾಷ್ ಅವರನ್ನು ಔಟ್ ಮಾಡುವಲ್ಲಿ ಶಿವಂ ದುಬೆ ಸಫಲರಾದರು. ಡೊನೊವನ್ ಫೆರೀರಾ (20) ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಯಶಸ್ವಿಯಾದರು.
ನಾಯಕ ಐಡೆನ್ ಮಾರ್ಕ್ರಾಮ್ ಒಂದು ತುದಿಯಲ್ಲಿ ವಿಕೆಟ್ ಬೀಳುತ್ತಾ ಇದ್ದರೂ, ಕೆಚ್ಚೆದೆಯಿಂದ ಬ್ಯಾಟಿಂಗ್ ಮಾಡಿದ ಇವರು 46 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ ಸಹಾಯದಿಂದ 61 ರನ್ ಬಾರಿಸಿ ಔಟ್ ಆದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್‌ದೀಪ್ ಯಾದವ್ ತಲಾ 2 ವಿಕೆಟ್ ಪಡೆದರು.
ಹಾರ್ದಿಕ್‌ಗೆ 100 ವಿಕೆಟ್
ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಮುಟ್ಟಿದರು. ಇವರು ಭಾರತದ ಪರ ಚುಟುಕು ಫಾರ್ಮೆಟ್‌ನಲ್ಲಿ ನೂರು ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ವೇಗದ ಬೌಲರ್ ಅರ್ಷದೀಪ್ ಸಿಂಗ್ ಹಾಗೂ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ಈ ಸಾಧನೆಯನ್ನು ಮಾಡಿದರು.
ವರುಣ್ ಅರ್ಧಶತಕ
ವಿಶ್ವದ ಸ್ಟಾರ್ ಸ್ಪಿನ್ ಬೌಲರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿರುವ ವರುಣ್ ಚಕ್ರವರ್ತಿ ಸಹ ಈ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿದರು. ಇವರು 4 ಓವರ್ ಬೌಲ್ ಮಾಡಿ 11 ರನ್ ನೀಡಿ 2 ವಿಕೆಟ್ ಪಡೆದು ಬೀಗಿದರು. ಈ ಮೂಲಕ ವರುಣ್ ಚಕ್ರವರ್ತಿ ತಮ್ಮ 32ನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ 51 ವಿಕೆಟ್ ಪಡೆದು ಸಾಧನೆ ಮಾಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications