ಡಿಸೆಂಬರ್‌ನಲ್ಲಿ ಭಾರತ, ಶ್ರೀಲಂಕಾ ವಿರುದ್ಧ 5 ಪಂದ್ಯಗಳ ಟಿ20 ಸರಣಿ
ಭಾರತದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಬಳಿಕ ಹರ್ಮನ್ ಪ್ರೀತ್ ಕೌರ್ ಪಡೆ ವಿಶ್ರಾಂತಿಯಲ್ಲಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋಲಿನ ಬಳಿಕ ಟೀಮ್ ಇಂಡಿಯಾ, ಅಂಗಳಕ್ಕೆ ಇಳಿದಿಲ್ಲ. ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಣ ಸರಣಿಯನ್ನು ಈ ಮೊದಲು ಆಡಬೇಕಿತ್ತು. ಆದರೆ ಆಟಗಾರ್ತಿಯರಿಗೆ ಹೆಚ್ಚಿನ ವಿಶ್ರಾಂತಿಯನ್ನು ನೀಡುವ ಉದ್ದೇಶದಿಂದ ಬಿಸಿಸಿಐ ಈ ಸರಣಿಯನ್ನು ಮುಂದೂಡಿತ್ತು. ಬಿಸಿಸಿಐ ಮಹಿಳಾ ತಂಡದ ಮುಂದಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಭಾರತ ತವರಿನಲ್ಲಿ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯ ವೇಳಾ ಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.
ಭಾರತ ಹಾಗೂ ಶ್ರೀಲಂಕಾ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಡಿಸೆಂಬರ್ 21 ರಂದು ಆರಂಭವಾಗಲಿದೆ. ಈ ಸರಣಿಯ ಕೊನೆಯ ಪಂದ್ಯ ಡಿಸೆಂಬರ್ 30 ರಂದು ನಡೆಯಲಿದೆ. ಈ ಸರಣಿಯ ವೇಳೆ ಎಲ್ಲರ ಕಣ್ಣುಗಳು ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿಯರಾದ ಜೆಮಿಮಾ ರೋಡ್ರಿಗಸ್ ಅವರ ಮೇಲೆ ನೆಟ್ಟಿರಲಿದೆ. ಇದೇ ವೇಳೆ ನಾಯಕಿ ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂಧಾನ ಅವರ ಅಬ್ಬರಿಸುವ ನಿರೀಕ್ಷೆ ಇದೆ.

ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಸರಣಿ ಮಹತ್ವ
ಜೂನ್ 2026 ರಲ್ಲಿ ಇಂಗ್ಲೆಂಡ್‌ನಲ್ಲಿ ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಡೆಯಲಿದ್ದು, ಭಾರತೀಯ ಮಹಿಳಾ ತಂಡಕ್ಕೆ ಅದಕ್ಕೆ ಸಿದ್ಧತೆ ನಡೆಸಲಿದೆ. ಆದ್ದರಿಂದ, ಈ ಮೆಗಾ ಈವೆಂಟ್‌ಗೆ ತಯಾರಿ ನಡೆಸುತ್ತಿರುವ ಟೀಮ್ ಇಂಡಿಯಾಗೆ ಈ ಸರಣಿ ನಿರ್ಣಾಯಕವಾಗಿದೆ. ಟಿ20 ಗಳಲ್ಲಿ ಶ್ರೀಲಂಕಾ ಮಹಿಳಾ ತಂಡದ ವಿರುದ್ಧ ಭಾರತ ತಂಡದ ಪ್ರಾಬಲ್ಯ ಇಲ್ಲಿಯವರೆಗೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಒಟ್ಟು 26 ಟಿ20ಐಗಳನ್ನು ಆಡಿದ್ದು, 20 ಗೆದ್ದು 5ರಲ್ಲಿ ಸೋತಿದ್ದು, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಆದ್ದರಿಂದ, ಮುಂಬರುವ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಈ ದಾಖಲೆಯನ್ನು ಮುಂದುವರಿಸಲು ಎದುರು ನೋಡುತ್ತಿದೆ.
ಭಾರತ ಏಕದಿನ ವಿಶ್ವಕಪ್ ಗೆದ್ದ ಬೆನ್ನಲ್ಲೆ ಹೊಸ ಭರವಸೆ ಮೂಡಿದೆ. ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲೂ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಕನಸನ್ನು ಭಾರತ ಕಾಣುತ್ತಿದೆ.
ಭಾರತ ಹಾಗೂ ಶ್ರೀಲಂಕಾ ನಡುವಣ ಟಿ20 ಸರಣಿಯ ವೇಳಾ ಪಟ್ಟಿ
| ಪಂದ್ಯ | ದಿನಾಂಕ | ಸ್ಥಳ |
|---|---|---|
| ಮೊದಲ ಪಂದ್ಯ | ಡಿ.21 | ವಿಶಾಖಪಟ್ಟಣಂ |
| ಎರಡನೇ ಪಂದ್ಯ | ಡಿ.23 | ವಿಶಾಖಪಟ್ಟಣಂ |
| ಮೂರನೇ ಪಂದ್ಯ | ಡಿ.26 | ತಿರುವನಂತಪುರಂ |
| ನಾಲ್ಕನೇ ಪಂದ್ಯ | ಡಿ.28 | ತಿರುವನಂತಪುರಂ |
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications