ಮೈದಾನಕ್ಕೆ ಇಳಿಯುತ್ತಲೇ ರೋಹಿತ್ ಶರ್ಮಾ ದಾಖಲೆ ಅಳಿಸಿ ಹಾಕಿದ ಹರ್ಮನ್‌ಪ್ರೀತ್ ಕೌರ್
2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಭಾನುವಾರ ಕಣಕ್ಕೆ ಇಳಿದವು. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್ ಮೈದಾನ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಭಾರತ ತಂಡದ ಪಾಲಾಯಿತು. ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆಲ್ಲುತ್ತಿದ್ದಂತೆ ಬ್ಯಾಟಿಂಗ್ ಮಾಡಲು ಮುಂದಾದರು. ಈ ಪಂದ್ಯದಲ್ಲಿ ಹರ್ಮನ್ ಕಣಕ್ಕೆ ಇಳಿಯುತ್ತಿದ್ದಂತೆ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದರು. ಭಾರತೀಯ ಪುರುಷ ಮತ್ತು ಮಹಿಳಾ ಕ್ರಿಕೆಟ್‌ನಲ್ಲಿ ಇದುವರೆಗೆ ಯಾವೊಬ್ಬ ಆಟಗಾರ ಮಾಡದ ದಾಖಲೆಗೆ ಹರ್ಮನ್‌ಪ್ರೀತ್ ಕೌರ್ ತಮ್ಮ ಹೆಸರು ನಮೂದಿಸಿದರು.
ಪಾಕ್ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿಯುತ್ತಿದ್ದಂತೆ ಹರ್ಮನ್‌ಪ್ರೀತ್ ಕೌರ್ ಅತಿ ಹೆಚ್ಚು ಟಿ20 ವಿಶ್ವಕಪ್ ಆಡಿದ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ಈ ದಾಖಲೆ ರೋಹಿತ್ ಶರ್ಮಾ ಹಾಗೂ ಹರ್ಮನ್ ಪ್ರಿತ್ ಕೌರ್ ಅವರ ಹೆಸರಿನಲ್ಲಿತ್ತು.

ಹರ್ಮನ್‌ಪ್ರೀತ್ ಕೌರ್, ರೋಹಿತ್ ಶರ್ಮಾ ಈ ಮೊದಲು 9 ಟಿ20 ವಿಶ್ವಕಪ್ ಆಡಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದರು. ಈಗ ಈ ಹಿರಿಮೆ ಹರ್ಮನ್‌ಪ್ರೀತ್ ಕೌರ್ ಪಾಲಾಗಿದೆ. ಮಹಿಳಾ ಟಿ20 ವಿಶ್ವಕಪ್‌ನ ಎಲ್ಲಾ 10 ಆವೃತ್ತಿಗಳಲ್ಲಿ ಆಡಿದ ಏಕೈಕ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅವರು ತಮ್ಮ ಫಿಟ್ನೆಸ್ ಮತ್ತು ಸ್ಥಿರ ಪ್ರದರ್ಶನದ ಮೂಲಕ ಈ ಸಾಧನೆ ಮಾಡಿದ್ದಾರೆ.
10ನೇ ಟಿ20 ವಿಶ್ವಕಪ್ ಆಡುತ್ತಿರುವ ಹರ್ಮನ್
2009 ರ ಮಹಿಳಾ ಟಿ 20 ವಿಶ್ವಕಪ್‌ನಲ್ಲಿ ಭಾರತದ ಪರ ಹರ್ಮನ್‌ಪ್ರೀತ್ ಮೊದಲ ಬಾರಿಗೆ ಅಖಾಡಕ್ಕೆ ಇಳಿದಿದ್ದರು. ಇವರು ಅಲ್ಲಿಂದ ಈವರೆಗೆ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಇವರು 2009, 2010, 2012, 2014, 2016, 2018, 2020, 2023, 2024 ಮತ್ತು ಈಗ 2026 ರ ಟಿ 20 ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. 37 ವರ್ಷದ ಹರ್ಮನ್‌ಪ್ರೀತ್ ಕೌರ್ ಭಾರತದ ನಾಯಕಿಯಾಗಿದ್ದಾರೆ. ಇವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಮಹಿಳಾ ತಂಡ, ತವರಿನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು.
9 ಟಿ20 ವಿಶ್ವಕಪ್ ಆಡಿರುವ ರೋಹಿತ್
ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದಲ್ಲಿ ಭಾರತಕ್ಕಾಗಿ ಒಟ್ಟು ಒಂಬತ್ತು ಟಿ 20 ವಿಶ್ವಕಪ್‌ಗಳನ್ನು ಆಡಿದ್ದಾರೆ. ಅವರು 2007 ರಲ್ಲಿ ಮೊದಲ ಟಿ20 ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ಆಡಿದ್ದರು. ಇವರು ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ 2024ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುನ್ನಡಿಸಿದ್ದರು. ಅಲ್ಲದೆ ಈ ವಿಶ್ವಕಪ್‌ನಲ್ಲಿ ಭಾರತ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ರೋಹಿತ್ 2007, 2009, 2010, 2012, 2014, 2016, 2021, 2022, ಮತ್ತು 2024 ರ ಟಿ 20 ವಿಶ್ವಕಪ್‌ಗಳಲ್ಲಿ ಭಾರತ ತಂಡದ ಭಾಗವಾಗಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications