T20 World Cup 2026: ಇಂಗ್ಲೆಂಡ್‌ಗೆ ಹ್ಯಾರಿ ಬ್ರೂಕ್ ನಾಯಕ: ಆರ್‌ಸಿಬಿ ಆಟಗಾರರಿಗೂ ಸ್ಥಾನ
ಭಾರತ ಹಾಗೂ ಶ್ರೀಲಂಕಾ ದೇಶಗಳು ಜಂಟಿಯಾಗಿ ಟಿ20 ವಿಶ್ವಕಪ್ ಆಯೋಜಿಸುತ್ತಿವೆ. ಈ ವಿಶ್ವಕಪ್‌ಗೆ ಭಾರತ ತಂಡವನ್ನು ಇತ್ತೀಚಿಗೆ ಪ್ರಕಟಿಸಲಾಗಿದೆ. ಈಗ ಎಲ್ಲ ದೇಶಗಳು ತಮ್ಮ ತಮ್ಮ ತಂಡವನ್ನು ಪ್ರಕಟಿಸುತ್ತಿವೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಈ ವಿಶ್ವಕಪ್‌ಗೆ ತಂಡವನ್ನು ಪ್ರಕಟಿಸಿದೆ. ಐಪಿಎಲ್‌ನಿಂದ ನಿಷೇಧಿಸಲ್ಪಟ್ಟ ಹ್ಯಾರಿ ಬ್ರೂಕ್‌ಗೆ ಪಟ್ಟವನ್ನು ಕಟ್ಟಲಾಗಿದೆ. ಪ್ರಕಟಿತ ತಂಡದಲ್ಲಿ ಇಬ್ಬರು ಆರ್‌ಸಿಬಿ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.
ಇಂಗ್ಲೆಂಡ್ ಟಿ20 ಸರಣಿಗೂ ಮುನ್ನ ಶ್ರೀಲಂಕಾ ವಿರುದ್ಧ ಸರಣಿಯನ್ನೂ ಸಹ ಆಡಲಿದೆ. ಈ ಎರಡೂ ಸರಣಿಗಳೂ ಒಂದೇ ತಂಡವನ್ನು ಆಯ್ಕೆ ಮಾಡಲಾಗಿದೆ. ತಂಡದ ಮಾಜಿ ನಾಯಕರಾದ ಜೋಸ್ ಬಟ್ಲರ್ ಮತ್ತು ಫಿಲ್ ಸಾಲ್ಟ್ ಅವರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ. ಜೋಫ್ರಾ ಆರ್ಚರ್ ಟಿ20 ವಿಶ್ವಕಪ್‌ನಲ್ಲಿ ಮಾತ್ರ ಆಡಲಿದ್ದು, ಬ್ರೈಡೆನ್ ಕಾರ್ಸೆ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ಪರ ಕಣಕ್ಕೆ ಇಳಿಯಲಿದ್ದಾರೆ. ಫೆಬ್ರವರಿ 8 ರಂದು ಇಂಗ್ಲೆಂಡ್ ವಿಶ್ವಕಪ್‌ನಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಇಂಗ್ಲೆಂಡ್ ಸಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಉಳಿದಂತೆ ಬಾಂಗ್ಲಾದೇಶ, ಇಟಲಿ, ನೇಪಾಳ, ವೆಸ್ಟ್ ಇಂಡೀಸ್ ತಂಡಗಳು ಈ ಗುಂಪಿನಲ್ಲಿ ಸ್ಥಾನ ಪಡೆದಿವೆ. ಇಂಗ್ಲೆಂಡ್ ಫೆ.11 ರಂದು ವೆಸ್ಟ್ ಇಂಡೀಸ್ ವಿರುದ್ಧ ವಾಂಖೇಡೆಯಲ್ಲಿ ಕಾದಾಟ ನಡೆಸಲಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಕಳೆದ ವರ್ಷ ಕೊನೆಯ ಕ್ಷಣದಲ್ಲಿ ಐಪಿಎಲ್ ತಂಡದಲ್ಲಿ ಭಾಗವಹಿಸಲು ನಿರಾಕರಿಸಿದ್ದಕ್ಕಾಗಿ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಅವರನ್ನು ಬಿಸಿಸಿಐ 2 ವರ್ಷ ಐಪಿಎಲ್‌ನಿಂದ ನಿಷೇಧಿಸಿದೆ. ಹೀಗಾಗಿ ಇವರು ಈ ಬಾರಿಯೂ ಐಪಿಎಲ್‌ನಲ್ಲಿ ಆಡುತ್ತಿಲ್ಲ.
ಆರ್‌ಸಿಬಿ ಆಟಗಾರರಿಗೂ ಸ್ಥಾನ
ಫಿಲ್ ಸಾಲ್ಟ್, ಜಾಕಬ್ ಬೆಥೆಲ್ ಆರ್‌ಸಿಬಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಫಿಲ್ ಸಾಲ್ಟ್ ಆರಂಭಿಕರಾಗಿ ಕಾಣಿಸಿಕೊಂಡರೆ, ಬೆಥೆಲ್ ಆಲ್‌ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಇಬ್ಬರೂ ಆಟಗಾರರಿಗೂ ಭಾರತದಲ್ಲಿ ಆಡಿದ ಅನುಭವ ಇದೆ. ಇಂಗ್ಲೆಂಡ್ ತಂಡದ ಬಹುತೇಕ ಆಟಗಾರರು ಐಪಿಎಲ್ ತಂಡಗಳ ಭಾಗವಾಗಿದ್ದರಿಂದ ಇಲ್ಲಿನ ಪಿಚ್ ಮರ್ಮ ಅವರಿಗೆ ಚೆನ್ನಾಗಿ ತಿಳಿದಿದೆ.

ವಿಶ್ವಕಪ್‌ಗೆ ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹಮದ್, ಜೋಫ್ರಾ ಆರ್ಚರ್, ಟಾಮ್ ಬಾಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಬ್ರೈಡನ್ ಕಾರ್ಸ್, ಸ್ಯಾಮ್ ಕರ್ರನ್, ಲಿಯಾಮ್ ಡೌಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮಿ ಓವರ್‌ಟನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟಂಗ್ ಮತ್ತು ಲೂಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications