ಬಾರ್ಡರ್-ಗವಾಸ್ಕರ್ ಟೆಸ್ಟ್: ಈ ಆಟಗಾರರ ಫಾರ್ಮ್ ನಿರ್ಣಾಯಕ: ಹೇಡನ್
ಈ ವರ್ಷದ ಅಂತ್ಯದಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಆರಂಭವಾಗಲಿದೆ. ಈ ಸರಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ. ಬಹು ನಿರೀಕ್ಷಿತ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಸರಣಿಯಲ್ಲಿ ಐದು ಟೆಸ್ಟ್ ಪಂದ್ಯಗಳನ್ನು ಆಡಲಾಗುತ್ತದೆ. ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಡೇವಿಡ್ ವಾರ್ನರ್ ತಂಡದ ಭಾಗವಾಗಿರುವುದಿಲ್ಲ.
ಡೇವಿಡ್ ವಾರ್ನರ್ ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದಲೇ ಹೆಸರುವಾಸಿ. ಇವರು ಆಡಿದ 112 ಟೆಸ್ಟ್ ಪಂದ್ಯಗಳಲ್ಲಿ 45ರ ಸರಾಸರಿಯಲ್ಲಿ 8786 ರನ್ ಗಳಿಸಿದ್ದಾರೆ. ಹೀಗಾಗಿ ಈ ಬಾರಿ ಎಲ್ಲರ ಚಿತ್ತ ವಿರಾಟ್ ಕೊಹ್ಲಿ ಹಾಗೂ ಸ್ಟೀವನ್ ಸ್ಮಿತ್ ಅವರ ಮೇಲೆ ನೆಟ್ಟಿದೆ. ಈ ಇಬ್ಬರ ನಡುವೆ ಸರಣಿಯ ವೇಳೆ ಜಿದ್ದಾಜಿದ್ದಿನ ಕಾಳಗ ನಡೆಯಲಿದೆ ಎಂದು ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇವರೇ ನಿರ್ಣಾಯಕ
ಸಿಯೆಟ್ ಕ್ರಿಕೆಟ್ ರೇಟಿಂಗ್ ಅವಾರ್ಡ್ಸ್ ಸಂದರ್ಭದಲ್ಲಿ ಮಾತನಾಡಿದ ಹೇಡನ್ , ಉಭಯ ತಂಡಗಳ ಸ್ಟಾರ್ ಬ್ಯಾಟರ್‌ಗಳು ತಮ್ಮ ಪ್ರಬಲ್ಯ ತೋರಿಸಲು ಸನ್ನದ್ಧರಾಗಿದ್ದಾರೆ. ಸರಣಿ ಯಾವ ರೀತಿ ನಡೆಯಬೇಕು ಎಂಬುದನ್ನು ಈ ಸ್ಟಾರ್ ಆಟಗಾರರೇ ನಿರ್ಧರಿಸಲಿದ್ದಾರೆ ಎಂದು ಮಾಜಿ ಕ್ರಿಕೆಟ್ ಆಟಗಾರ ಹೇಡನ್ ತಿಳಿಸಿದ್ದಾರೆ.
ಐದು ಟೆಸ್ಟ್ ಪಂದ್ಯಗಳ ಸರಣಿ
ಭಾರತ ಮತ್ತು ಆಸ್ಟ್ರೇಲಿಯಾ 1991-92ರ ನಂತರ ಇದೇ ಮೊದಲ ಬಾರಿಗೆ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಐದು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈ ಸರಣಿಯಲ್ಲಿ ಯಾರ ಕೈ ಮೇಲಾಗುತ್ತದೆ ಎಂದು ಹೇಳುವುದು ಕಷ್ಟ. ಎರಡೂ ತಂಡದಲ್ಲಿ ಸ್ಟಾರ್ ಆಟಗಾರರು ಇದ್ದು, ಸರಣಿ ನಿಜಕ್ಕೂ ರೋಚಕತೆಯಿಂದ ಕೂಡಿರಲಿದೆ. ಈ ಎರಡೂ ತಂಡಗಳಲ್ಲಿ ವ್ಯತ್ಯಾಸ ಕಾಣುವದಿದ್ದರೆ ಅದು ರನ್ ಎಂದು ತಿಳಿಸಿದ್ದಾರೆ.

ಈಗಾಗಲೇ ಉಭಯ ದೇಶಗಳು ಮೂರು ಹಾಗೂ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡಿವೆ. ಆದರೆ ಐದು ಪಂದ್ಯದ ಈ ಸರಣಿ ಭಾರೀ ರೋಚಕತೆಯಿಂದ ಕೂಡಿದೆ. ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಒಂದು ತಂಡ ಪ್ರಾಬಲ್ಯ ಸಾಧಿಸಲಿದೆ ಎಂದು ಹೇಳುವುದು ಕಷ್ಟ ಎಂದಿದ್ದಾರೆ.
ನವೆಂಬರ್‌ನಿಂದ ಟೆಸ್ಟ್ ಸರಣಿ ಆರಂಭ
ಈ ವರ್ಷದ ಬಹು ನಿರೀಕ್ಷಿತ ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಟೆಸ್ಟ್ ಪಂದ್ಯ ನವೆಂಬರ್ 22 ರಿಂದ ಪರ್ತ್‌ನಲ್ಲಿ ನಡೆಯಲಿದೆ. ಇದಾದ ಬಳಿಕ ಎರಡನೇ ಟೆಸ್ಟ್ ಡಿಸೆಂಬರ್ 6ರಿಂದ, ಮೂರನೇ ಟೆಸ್ಟ್ ಡಿಸೆಂಬರ್ 14 ರಿಂದ, ನಾಲ್ಕನೇ ಟೆಸ್ಟ್ ಡಿಸೆಂಬರ್ 26 ರಿಂದ, 5ನೇ ಟೆಸ್ಟ್ ಪಂದ್ಯ ಜನವರಿ 3 ರಿಂದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications