ಆತನಿಗೆ ಹೆಚ್ಚಿನ ಅವಕಾಶ ನೀಡಿ; ಭಾರತದ ಪರವಾಗಿ ಅಚ್ಚರಿಗಳನ್ನು ಸೃಷ್ಟಿಸಬಲ್ಲ ಕ್ರಿಕೆಟಿಗ ಆತ: ದಿನೇಶ್ ಕಾರ್ತಿಕ್

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು 1-2 ಅಂತರದಿಂದ ಸೋಲು ಕಂಡ ಬಳಿಕ ಟೀಮ್ ಇಂಡಿಯಾ ಏಕದಿನ ಸರಣಿಯಲ್ಲಿಯೂ ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಕಂಡಿದೆ. ಏಕದಿನ ಸರಣಿಯಲ್ಲಿ ಭಾರತ ವೈಟ್‌ವಾಶ್ ಮುಖಭಂಗಕ್ಕೆ ಒಳಗಾಗಿದೆ. ಈ ಸರಣಿಯ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ಆಟಗಾರರ ಪ್ರದರ್ಶನದ ಬಗ್ಗೆ ವಿಶ್ಲೇಷಣೆಗಳು ಈಗ ನಡೆಯುತ್ತಿದೆ. ಈ ಸಂದರ್ಭದಲ್ಲಿ ಭಾರತ ತ,ಡದ ಓರ್ವ ಪ್ರತಿಭಾನ್ವಿತ ಆಟಗಾರನ ಬಗ್ಗೆ ದಿನೇಶ್ ಕಾರ್ತಿಕ್ ಮಾತನಾಡಿದ್ದು ಆತನಿಗೆ ಹೆಚ್ಚಿನ ಅವಕಾಶವನ್ನು ನೀಡಬೇಕು ಎಂದಿದ್ದಾರೆ.

ಭಾರತದ ಅನುಭವಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಸೂರ್ಯಕುಮಾರ್ ಯಾದವ್ ಬಗ್ಗೆ ಹೀಗೆ ವಿಶೇಷ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ಮಾತ್ರವೇ ಅವಕಾಶ ಪಡೆದುಕೊಂಡಿದ್ದ ಸೂರ್ಯಕುಮಾರ್ ಯಾದವ್ ಅಂತಿಮ ಪಂದ್ಯದಲ್ಲಿ ಒತ್ತಡದ ಮಧ್ಯೆಯೂ ಉತ್ತಮ ಪ್ರದರ್ಶನ ನೀಡಿದ್ದರು. ಈ ಪ್ರದರ್ಶನದ ಬಳಿಕ ಮಾತನಾಡಿದ ದಿನೇಶ್ ಕಾರ್ತಿಕ್ ಸೂರ್ಯಕುಮಾರ್ ಯಾದವ್‌ಗೆ ಮತ್ತಷ್ಟು ಹೆಚ್ಚಿನ ಅವಕಾಶವನ್ನು ನೀಡುವ ಅಗತ್ಯವಿದೆ ಎಂದಿದ್ದಾರೆ.

6 ಎಸೆತಗಳಲ್ಲಿ 28 ರನ್, 1 ರನ್‌ನಿಂದ ಇಂಗ್ಲೆಂಡ್‌ಗೆ ಮಣಿದ ವಿಂಡೀಸ್: ರೋಚಕ ಟಿ20 ಪಂದ್ಯಕ್ಕೆ ಸಾಕ್ಷಿಯಾದ ಕ್ರಿಕೆಟ್ ಜಗತ್ತು6 ಎಸೆತಗಳಲ್ಲಿ 28 ರನ್, 1 ರನ್‌ನಿಂದ ಇಂಗ್ಲೆಂಡ್‌ಗೆ ಮಣಿದ ವಿಂಡೀಸ್: ರೋಚಕ ಟಿ20 ಪಂದ್ಯಕ್ಕೆ ಸಾಕ್ಷಿಯಾದ ಕ್ರಿಕೆಟ್ ಜಗತ್ತು

ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಆಡುವ ಬಳಗದಿಂದ ಹೊರಗುಳಿದಿದ್ದ ಸೂರ್ಯಕುಮಾರ್ ಯಾದವ್ ಅಂತಿಮ ಪಂದ್ಯದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದರು. ಕೇಪ್‌ಟೌನ್‌ನ್ಲಲಿ ನಡೆದ ಈ ಪಂದ್ಯದಲ್ಲಿ 288 ರನ್‌ಗಳ ಗುರಿ ಬೆನ್ನಟ್ಟುವ ಸವಾಲು ಪಡೆದಿತ್ತು ಭಾರತ, ಈ ಸಂದರ್ಭದಲ್ಲಿ ಸೂಕರ್ಯಕುಮಾರ್ ಯಾದವ್ 39 ರನ್‌ಗಳ ಕೊಡುಗೆ ನೀಡಿದ್ದರು. ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಪರವಾಗಿ ಈವರೆಗೆ 11 ಟಿ20 ಪಂದ್ಯಗಳಲ್ಲಿ ಆಡಿದ್ದು 4 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಐಪಿಎಲ್‌ನಲ್ಲಿ 15ನೇ ಆವೃತ್ತಿಗೂ ಮುನ್ನ ಮುಂಬೈ ಇಂಡಿಯನ್ಸ್ ಸೂರ್ಯಕುಮಾರ್ ಯಾದವ್ ಅವರನ್ನು ರೀಟೈನ್ ಮಾಡಿಕೊಂಡಿದೆ.

"ಸೂರ್ಯಕುಮಾರ್ ಯಾದವ್ ವಿಭಿನ್ನವಾಗಿ ಬ್ಯಾಟಿಂಗ್ ಮಾಡಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ಆತನ ಬತ್ತಳಿಕೆಯಲ್ಲಿರುವ ಹೊಡೆತಗಳು, ಆತನ ಸ್ಥಾನ ಹಾಗೂ ಪ್ರದರ್ಶನ ನೀಜಕ್ಕೂ ಅದ್ಭುಯವಾಗಿದೆ. ಆ ಸಂದರ್ಭದಲ್ಲಿ ಇರುವುದಕ್ಕಿಂತಲೂ ಸುಲಭವಾಗಿದೆ ಎನ್ನುವಂತೆ ಆರ ಸರಾಗವಾಗಿ ಬ್ಯಾಟ್ ಬೀಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ಆತನಿಗಾಗಿ ಹೆಚ್ಚಿನ ಅವಕಾಶವನ್ನು ನೀಡಬೇಕಿದೆ. ಖಂಡಿತಾ ಆತ ಭಾರತದ ಪರವಾಗಿ ಅಚ್ಚರಿಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ನಾನು ನಂಬಿದ್ದೇನೆ" ಎಂದು ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾದ ಬ್ಯಾಟರ್ ಬಗ್ಗೆ ವಿಶ್ವಾಸದ ಮಾತುಗಳನ್ನು ಆಡಿದ್ದಾರೆ.

ಮುಂದುವರಿದು ಮಾತನಾಡಿದ ದಿನೇಶ್ ಕಾರ್ತಿಕ್ "ಆತನಿಗಾಗಿ ಹೆಚ್ಚಿನ ಅವಕಾಶವನ್ನು ನೀಡಬೇಕಿದೆ. ಪ್ರತಿ ಬಾರಿ ಸೂರ್ಯಕುಮಾರ್ ಯಾದವ್ ಕ್ರೀಸ್‌ಗೆ ಬರುವಾಗಲೂ ಮೇಲಿನ ಕ್ರಮಾಂಕದ ಆಟಗಾರರಿಂದಾಗಿ ಹಾಗೂ ಕೆಳಗಿನ ಕ್ರಮಾಂಕದ ಆಟಗಾರರಿಂದಾಗಿ ಹೆಚ್ಚಿನ ಒತ್ತಡಗಳನ್ನು ಹೊಂದಿದ್ದಾರೆ. ಹೀಗಾಗಿ ಆತ ಕ್ರೀಸ್‌ಗೆ ಹೊಂದಿಕೊಳ್ಳುವುದು ಕಷ್ಟವಾಗುತ್ತದೆ" ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

4 ಪಂದ್ಯಗಳಲ್ಲಿ ಹೀನಾಯ ಸೋಲು: ರಾಹುಲ್‌ ನಾಯಕತ್ವದ ಬಗ್ಗೆ ತುಟಿಬಿಚ್ಚಿದ ಕೋಚ್ ದ್ರಾವಿಡ್ ಹೇಳಿದ್ದಿಷ್ಟು4 ಪಂದ್ಯಗಳಲ್ಲಿ ಹೀನಾಯ ಸೋಲು: ರಾಹುಲ್‌ ನಾಯಕತ್ವದ ಬಗ್ಗೆ ತುಟಿಬಿಚ್ಚಿದ ಕೋಚ್ ದ್ರಾವಿಡ್ ಹೇಳಿದ್ದಿಷ್ಟು

"ಸೂರ್ಯಕುಮಾರ್ ಯಾದವ್ ಯಾವುದೇ ಕ್ರಮಾಂಕದಲ್ಲಿಯಾದರೂ ಒಂದೇ ರೀತಿಯ ವೇಗವನ್ನು ಹೊಂದಿದ್ದಾರೆ. ಮುಂಬೈ ಇಂಡಿಯನ್ಸ್ ಪರವಾಗಿಯೂ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದು ಅದೇ ರೀತಿಯ ಪ್ರದರ್ಶನ ನೀಡುತ್ತಾರೆ. ಆತ ನಾಲ್ಕು ಅಥವಾ ಐದನೇ ಕ್ರಮಾಂಕದಲ್ಲಿ ಆಡಿದರೆ ಉತ್ತಮ ಪ್ರಮಾಣದ ರನ್‌ಗಳನ್ನು ಆತನಿಂದ ನಿರೀಕ್ಷಿಸಬಹುದಾಗಿದೆ. ಆದರೆ ನಾನು ಏಕದಿನ ಕ್ರಿಕೆಟ್‌ನಲ್ಲಿ ಆತ ಐದು ಅಥವಾ ಆರನೇ ಕ್ರಮಾಂಕದಲ್ಲಿ ಆಡುವುದನ್ನು ಬಯಸುತ್ತೇನೆ. ಯಾಕೆಂದರೆ ಆತ ಪಂದ್ಯವನ್ನು ಶೀಘ್ರವಾಗಿ ತನ್ನ ತಂಡದತ್ತ ತಿರುಗಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ" ಎಂದು ದಿನೇಶ್ ಕಾರ್ತಿಕ್ ಸೂರ್ಯಕುಮಾರ್ ಯಾದವ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

Team India ಕಳೆದ ಸರಣಿಯ ಬೆಸ್ಟ್ ಕ್ಷಣಗಳು | Oneindia Kannada

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, January 24, 2022, 21:30 [IST]
Other articles published on Jan 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X