ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಶತಕ ಸಿಡಿಸಿ ಸಚಿನ್, ದ್ರಾವಿಡ್ ದಾಖಲೆ ಹಿಂದಿಕ್ಕಿದ ಜೋ ರೂಟ್

Headingley Test: Joe Root surpasses Sachin Tendulkar, Rahul Dravid record with hundred

ಲೀಡ್ಸ್, ಆಗಸ್ಟ್ 26: ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಮತ್ತೊಂದು ಭರ್ಜರಿ ಶತಕವನ್ನು ಸಿಡಿಸಿದ್ದಾರೆ. ಈ ಮೂಲಕ ತಮ್ಮ ಅಮೋಘ ಫಾರ್ಮ್‌ಅನ್ನು ರೂಟ್ ಮುಂದುವರಿಸಿದ್ದಾರೆ. ಈ ಸರಣಿಯ ಮೂರು ಪಂದ್ಯಗಳಲ್ಲಿಯೂ ರೂಟ್ ಶತಕವನ್ನು ಸಿಡಿಸಿದಂತಾಗಿದೆ. ಈ ಶತಕದ ಸಾಧನೆಯೊಂದಿಗೆ ಜೋ ರೂಟ್ ದಿಗ್ಗಜ ಕ್ರಿಕೆಟಿಗರ ದಾಖಲೆಯನ್ನು ಮುರಿದಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಯನ್ನು ಈಗ ಜೋ ರೂಟ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ದಿಗ್ಗಜ ಆಟಗಾರರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಹಾಗೂ ಆಲೆಸ್ಟರ್ ಕುಕ್ ದಾಖಲೆಯನ್ನು ಮೀರಿ ನಿಂತಿದ್ದಾರೆ ಜೋ ರೂಟ್. ಈ ಪಂದ್ಯದಲ್ಲಿ ಆರಂಭದಿಂದಲೇ ಉತ್ತಮ ಲಯವನ್ನು ಕಂಡುಕೊಳ್ಳಲು ಸಫಲವಾಗಿದ್ದ ಜೋ ರೂಟ್ ತಮ್ಮ 51ನೇ ಅರ್ಧ ಶತಕವನ್ನು ಕೇವಲ 57 ಎಸೆತಗಳಲ್ಲಿ ಪೂರ್ಣಗೊಳಿಸಿದ್ದರು.

ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ತಾನು ಮಾಡಿದ ತಪ್ಪಿನ ಕುರಿತು ಮಾತನಾಡಿದ ರಿಷಭ್ ಪಂತ್ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ತಾನು ಮಾಡಿದ ತಪ್ಪಿನ ಕುರಿತು ಮಾತನಾಡಿದ ರಿಷಭ್ ಪಂತ್

ಸಚಿನ್, ದ್ರಾವಿಡ್ ದಾಖಲೆ ಮುರಿದ ರೂಟ್

ಸಚಿನ್, ದ್ರಾವಿಡ್ ದಾಖಲೆ ಮುರಿದ ರೂಟ್

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಜೋ ರೂಟ್ 41 ಇನ್ನಿಂಗ್ಸ್‌ಗಳಲ್ಲಿ 8 ಶತಕಗಳನ್ನು ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಈಗ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಮಾಜಿ ಆಟಗಾರರಾದ ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್ ಹಾಗೂ ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಲೆಸ್ಟರ್ ಕುಕ್ ತಲಾ 7 ಶತಕಗಳನ್ನು ಸಿಡಿಸಿದ್ದು ಈ ಪಟ್ಟಿಯಲ್ಲಿ ಜಂಟಿಯಾಗಿ ಎರಡನೇ ಸ್ಥಾನದಲ್ಲಿದ್ದಾರೆ.

ವಿಶೇಷ ದಾಖಲೆ ಬರೆದ ಇಂಗ್ಲೆಂಡ್ ನಾಯಕ

ವಿಶೇಷ ದಾಖಲೆ ಬರೆದ ಇಂಗ್ಲೆಂಡ್ ನಾಯಕ

ಇನ್ನು ಈ ಶತಕದ ಮೂಲಕ ಜೋ ರೂಟ್ ಮತ್ತೊಂದು ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಸತತ 3 ಪಂದ್ಯಗಳಲ್ಲಿ ಶತಕ ಸಿಡಿಸಿದ ಪ್ರಥಮ ಆಟಗಾರ ಎನಿಸಿದ್ದಾರೆ. ಇದಕ್ಕೂ ಮುನ್ನ ನಾಟಿಂಗ್‌ಹ್ಯಾಮ್ ಟೆಸ್ಟ್‌ನಲ್ಲಿ ಹಾಗೂ ಲಾರ್ಡ್ಸ್ ಟೆಸ್ಟ್‌ನಲ್ಲಿಯೂ ಜೋ ರೂಟ್ ಶತಕ ಸಿಡಿಸಿ ಮಿಂಚಿದ್ದರು.

ಮತ್ತೊಂದು ಅಪರೂಪದ ದಾಖಲೆ

ಮತ್ತೊಂದು ಅಪರೂಪದ ದಾಖಲೆ

ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಈ ಪಂದ್ಯದಲ್ಲಿ ಮತ್ತೊಂದು ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿಪಕ್ಷೀಯ ಸರಣಿಯ ಸಂದರ್ಭದಲ್ಲಿ ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು 50+ ರನ್‌ಗಳನ್ನು ಬಾರಿಸಿದ ನಾಯಕ ಎನಿಸಿದ್ದಾರೆ. ಈ ದಾಖಲೆಯಲ್ಲಿ ಅವರು ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ಸರಿಗಟ್ಟಿದ್ದಾರೆ. ಆರು ಬಾರಿ 50ಕ್ಕೂ ಅಧಿಕ ರನ್‌ಗಳನ್ನು ಇಂಗ್ಲೆಂಡ್ ನೆಲದಲ್ಲಿ ಈ ಎರಡು ತಂಡಗಳ ಮುಖಾಮುಖಿಯ ಸಂದರ್ಭದಲ್ಲಿ ಸಿಡಿಸಿದ್ದಾರೆ ಜೋ ರೂಟ್.

ಮಿಂಚಿದ ಮಲನ್

ಮಿಂಚಿದ ಮಲನ್

ಈ ಪಂದ್ಯದ ಮೂಲಕ ಮೂರು ವರ್ಷಗಳ ಬಳಿಕ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಮರಳಿದ ಡೇವಿಡ್ ಮಲನ್ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ನಾಯಕ ಜೋ ರುಟ್ ಜೊತೆ ಸೇರಿ ಶತಕದ ಜೊತೆಯಾಟವನ್ನು ನೀಡಿದರು ಡೇವಿಡ್ ಮಲನ್. ಡೇವಿಡ್ ಮಲನ್ ಕೆಲ ಅದ್ಭುತ ಹೊಡೆತಗಳನ್ನು ಬಾರಿಸುವ ಮೂಲಕ ಭಾರತೀಯ ಬೌಲರ್‌ಗಳನ್ನು ಕಂಗೆಡಿಸುವಲ್ಲಿ ಯಶಸ್ವಿಯಾಗಿದ್ದರು. 128 ಎಸೆತ ಎದುರಿಸಿದ ಅವರು 70 ರನ್‌ಗಳನ್ನು ಗಳಿಸಿ ಬಳಿಕ ಮೊಹಮ್ಮದ್ ಸಿರಾಜ್‌ಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡರು. ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಎರಡು ದಿನಗಳಲ್ಲಿಯೂ ಸರ್ವಾಂಗೀನ ಪ್ರದರ್ಶನ ನೀಡಿದ್ದು ಪಮದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿದೆ. ಈ ಮೂಲಕ ಹೆಡಿಂಗ್ಲೆ ಟೆಸ್ಟ್ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ ಆತಿಥೆಯ ಇಂಗ್ಲೆಂಡ್

ಟೀಮ್ ಇಂಡಿಯಾ ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ

ರೋಹಿತ್ ಮಾಡಿದ ಇಂಥಾ ಎಡವಟ್ಟಿನಿಂದಲೇ ಟೀಮ್ ಇಂಡಿಯಾಗೆ ಸಂಕಷ್ಟ | Oneindia Kannada

ಇಂಗ್ಲೆಂಡ್ ಆಡುವ ಬಳಗ: ಜೋ ರೂಟ್ (ನಾಯಕ), ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೊವ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್, ಕ್ರೇಗ್ ಓವರ್‌ಟನ್

Story first published: Friday, August 27, 2021, 10:18 [IST]
Other articles published on Aug 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X