Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವೈಭವ್ ಸೂರ್ಯವಂಶಿಗೆ ಅವಕಾಶ ನೀಡಿದ್ರೆ ಪ್ಯಾಂಟ್‌ ಬಿಚ್ಚಿ ಕೈಗೆ ನೀಡುತ್ತಿದ್ದ; ರವಿ ಶಾಸ್ತ್ರಿ ಹೇಳಿಕೆ ವೈರಲ್

ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಐರ್ಲೆಂಡ್‌ನಲ್ಲಿ ಸರಣಿ ಸೋಲಿನ ಕಹಿಯನ್ನು ಅನುಭವಿಸಿರುವ, ಟೀಮ್ ಇಂಡಿಯಾ ಮತ್ತೊಂದು ಅಗ್ನಿ ಪರೀಕ್ಷೆಗೆ ಸಿದ್ಧವಾಗುತ್ತಿದೆ. ಬುಧವಾರ ಇಂಗ್ಲೆಂಡ್ ಪ್ರವಾಸದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ 190 ರನ್‌ಗಳ ಗುರಿಯನ್ನು ಆತಿಥೇಯ ತಂಡಕ್ಕೆ ನೀಡಿತ್ತು. ಆದರೆ ಮಳೆಯಿಂದಾಗಿ ಪಂದ್ಯ ರದ್ದಾಯಿತು. ಈ ಪಂದ್ಯದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ನೀಡಬಹುದು ಎಂದು ಎಲ್ಲರೂ ಅಂದಾಜಿಸಿದ್ದರು. ಆದರೆ ಆ ಆಸೆ ಮಣ್ಣು ಪಾಲಾಗಿದೆ.

ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಆಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಆದರೆ ಟೀಮ್ ಮ್ಯಾನೇಜ್ಮೆಂಟ್‌ ಇನ್ನು ಅವರಿಗೆ ಅವಕಾಶ ನೀಡುತ್ತಿಲ್ಲ. ಅನುಭವಿ ಬ್ಯಾಟರ್‌ಗಳ ಬೆಂಬಲಕ್ಕೆ ನಿಲ್ಲುತ್ತಿರುವುದು ಅಭಿಮಾನಿಗಳನ್ನು ಕೆರಳಿಸಿದೆ. ಇನ್ನು ಟೀಮ್ ಇಂಡಿಯಾದ ಮಾಜಿ ಆಟಗಾರರು ಸಹ ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ನೀಡಿ ಎಂದು ತಮ್ಮದೇ ಧಾಟಿಯಲ್ಲಿ ಹೇಳುತ್ತಿದ್ದಾರೆ.

He d Have Taken Their Pants Off

ರವಿ ಶಾಸ್ತ್ರೀ ಅವರು ವೈಭವ್ ಸೂರ್ಯವಂಶಿ ಅವರ ಬಗ್ಗೆ ನೀಡಿದ ಹೇಳಿಕೆ ಈಗ ಸಖತ್ ವೈರಲ್ ಆಗುತ್ತಿದೆ. ಸೋನಿ ನೆಟ್‌ವರ್ಕ್‌ನ ಸಂದರ್ಶನದಲ್ಲಿ ಇಂಗ್ಲೆಂಡ್‌ನಲ್ಲಿ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಬಹುದಾ ಎಂಬ ಪ್ರಶ್ನೆಯನ್ನು ನಿರೂಪಕರು ಕೇಳಿದರು.

ರವಿ ಶಾಸ್ತ್ರಿ ಹೇಳಿಕೆ ವೈರಲ್

ಆಗ ರವಿ ಶಾಸ್ತ್ರಿ ತನ್ನದೇ ಧಾಟಿಯಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಅವರು ಇಂಗ್ಲೆಂಡ್ ವಿರುದ್ಧ ಆಡುತ್ತಾರೋ ಇಲ್ಲವೋ ನನಗೆ ಖಚಿತವಿಲ್ಲ. ಆದರೆ ವೈಭವ್ ಸೂರ್ಯವಂಶಿ ಐರ್ಲೆಂಡ್‌ನಲ್ಲೇ ಆಡಬೇಕಿತ್ತು. ಅಲ್ಲಿನ ಮೈದಾನಗಳು ಚಿಕ್ಕದಾಗಿದ್ದವು. ಸ್ಲೋ ಟ್ರ್ಯಾಕ್‌, ಸ್ಪಂಜಿ ಟ್ರ್ಯಾಕ್‌ನಲ್ಲಿ ಅವರು ಆಡಿದ್ದರೆ ಚೆಂಡನ್ನು ಕ್ರೀಡಾಂಗಣದ ಛಾವಣಿಗೆ ಕಳುಹಿಸುತ್ತಿದ್ದರು. ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ನೀಡಿದ್ರೆ, ಪ್ಯಾಂಟ್ ಅನ್ನು ತೆಗೆದು ಕೈಯಲ್ಲಿ ಕೊಡುತ್ತಿದ್ದರು. ಅವರಿಗೆ ಅಲ್ಲಿ ಆಡಲು ಅವಕಾಶ ನೀಡಬೇಕಿತ್ತು ಎಂದಿದ್ದಾರೆ. ಈ ಹೇಳಿಕೆ ಈಗ ಸಖತ್ ವೈರಲ್ ಆಗಿದೆ.

ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟಿ20 ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಾದ್ರೂ ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ಲಭಿಸುತ್ತದಾ ಎಂಬ ಪ್ರಶ್ನೆ ಉದ್ಭವಿಸಿದೆ.

ವೈಭವ್ ಸಾಧನೆ

14ನೇ ವಯಸ್ಸಿನಲ್ಲಿ ವೈಭವ್ ಸೂರ್ಯವಂಶಿ ಐಪಿಎಲ್‌ಗೆ ಪದಾರ್ಪಣೆ ಮಾಡಿದರು. ಈ ಬಾರಿಯೇ ವೈಭವ್ ಪೂರ್ತಿ ಆವೃತ್ತಿಯ ಐಪಿಎಲ್‌ ಆಡಿದ್ದಾರೆ. ಇನ್ನು 19ನೇ ಆವೃತ್ತಿಯ ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಅಭಿಮಾನಿಗಳ ಮನ ಗೆದ್ದಿದ್ದಾರೆ. ಈ ಆವೃತ್ತಿಯಲ್ಲಿ ವೈಭವ್ ಸೂರ್ಯವಂಶಿ ಆಡಿದ 16 ಪಂದ್ಯಗಳಲ್ಲಿ 776 ರನ್‌ ಸಿಡಿಸಿದ್ದಾರೆ. ಈ ವೇಳೆ ಇವರು 72 ಸಿಕ್ಸರ್ ಬಾರಿಸಿ ದಾಖಲೆ ಸೃಷ್ಟಿಸಿದ್ದಾರೆ.

Story first published: Thursday, July 2, 2026, 16:01 [IST]
Other articles published on Jul 2, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+