ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮುಂದಿನ ಐಪಿಎಲ್ ಹರಾಜಿನಲ್ಲಿ ಇಶಾನ್ ಕಿಶನ್‌ರನ್ನು ಖರೀದಿಸಬಹುದಾದ 3 ತಂಡಗಳಿವು

 Here is the list of 3 Teams Which Can Target Ishan Kishan In IPL 2022 Auction

ಇಶಾನ್ ಕಿಶನ್ ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವಿತ ಆಟಗಾರ. ಕಳೆದ ಐಪಿಎಲ್ ಆವೃತ್ತಿಯ 14 ಪಂದ್ಯಗಳಲ್ಲಿ ಆಡಿದ್ದ ಇಶಾನ್ ಕಿಶನ್ 516 ರನ್ ಗಳಿಸಿ ಆ ಆವೃತ್ತಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದುಕೊಂಡಿದ್ದರು. ಹಾಗೂ ಮುಂಬೈ ಇಂಡಿಯನ್ಸ್ ತಂಡದ ಪರ ಆ ಆವೃತ್ತಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೂ ಪಾತ್ರರಾಗಿದ್ದರು.

ಒಂದು ಔಷಧಿಗೆ 16 ಕೋಟಿ; ಮುಗ್ಧ ಮಗುವಿನ ಜೀವ ಉಳಿಸಿ ಮಾನವೀಯತೆ ಮೆರೆದ ಕಿಂಗ್ ಕೊಹ್ಲಿಒಂದು ಔಷಧಿಗೆ 16 ಕೋಟಿ; ಮುಗ್ಧ ಮಗುವಿನ ಜೀವ ಉಳಿಸಿ ಮಾನವೀಯತೆ ಮೆರೆದ ಕಿಂಗ್ ಕೊಹ್ಲಿ

ಹಾಗೂ ಇದೇ ವರ್ಷ ಇಂಗ್ಲೆಂಡ್ ವಿರುದ್ಧ ನಡೆದ ಟಿ ಟ್ವೆಂಟಿ ಸರಣಿಯಲ್ಲಿ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಮೊದಲನೇ ಪಂದ್ಯದಲ್ಲಿಯೇ 28 ಎಸೆತಗಳಲ್ಲಿ ಅರ್ಧಶತಕ ಬಾರಿಸುವುದರ ಮೂಲಕ ಇಶಾನ್ ಕಿಶನ್ ಪದಾರ್ಪಣೆ ಮಾಡಿದ ಮೊದಲನೇ ಪಂದ್ಯದಲ್ಲಿಯೇ ಅರ್ಧಶತಕ ಬಾರಿಸಿದ ಎರಡನೇ ಭಾರತೀಯ ಎನಿಸಿಕೊಂಡರು.

WTC ಫೈನಲ್‌ನಲ್ಲಿ ಗೆಲ್ಲುವ ತಂಡ ಹೆಸರಿಸಿದ ದಂತಕತೆ ರಿಚರ್ಡ್ ಹ್ಯಾಡ್ಲೀWTC ಫೈನಲ್‌ನಲ್ಲಿ ಗೆಲ್ಲುವ ತಂಡ ಹೆಸರಿಸಿದ ದಂತಕತೆ ರಿಚರ್ಡ್ ಹ್ಯಾಡ್ಲೀ

ಹೀಗೆ ಕಳೆದ ಬಾರಿಯ ಐಪಿಎಲ್ ಟೂರ್ನಿ ಮತ್ತು ಈ ವರ್ಷ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡಲಿಲ್ಲ. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ 5 ಪಂದ್ಯಗಳನ್ನು ಆಡುವ ಅವಕಾಶ ಪಡೆದ ಇಶಾನ್ ಕಿಶನ್ ಗಳಿಸಿದ್ದು ಕೇವಲ 73 ರನ್. ಅಷ್ಟೇ ಅಲ್ಲದೆ ಉತ್ತಮ ಪ್ರದರ್ಶನ ನೀಡದ ಕಾರಣ ಟೂರ್ನಿಯ ಒಂದು ಪಂದ್ಯದಲ್ಲಿ ಇಶಾನ್ ಕಿಶನ್‌ರನ್ನು ತಂಡದಿಂದ ಕೈಬಿಡಲಾಗಿತ್ತು, ಹೀಗಾಗಿ ಮುಂದಿನ ವರ್ಷದ ಐಪಿಎಲ್ ಹರಾಜಿನಲ್ಲಿ ಮುಂಬೈ ತಂಡ ಇಶಾನ್ ಕಿಶನ್‌ರನ್ನು ಉಳಿಸಿಕೊಳ್ಳುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದ್ದು ಈ ಕೆಳಗಿನ 3ತಂಡಗಳು ಇಶಾನ್ ಕಿಶನ್ ಖರೀದಿಗೆ ಮುಂದಾಗಬಹುದು.

1. ಚೆನ್ನೈ ಸೂಪರ್ ಕಿಂಗ್ಸ್

1. ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಮುಂದಿನ ಐಪಿಎಲ್ ಆವೃತ್ತಿಯ ನಂತರ ನಿವೃತ್ತಿ ಹೊಂದುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದ್ದು, ಧೋನಿ ತಂಡದಿಂದ ಹೊರ ಹೋದರೆ ಖಂಡಿತವಾಗಿಯೂ ಒಬ್ಬ ಪ್ರತಿಭಾನ್ವಿತ ವಿಕೆಟ್ ಕೀಪರ್‌ನ ಅಗತ್ಯ ಬೀಳಲಿದೆ. ಹೀಗಾಗಿ ಯುವ ಆಟಗಾರನಾಗಿರುವ ಇಶಾನ್ ಕಿಶನ್‌ನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಖರೀದಿಸುವ ಸಾಧ್ಯತೆಗಳಿವೆ.

2. ಸನ್ ರೈಸರ್ಸ್ ಹೈದರಾಬಾದ್

2. ಸನ್ ರೈಸರ್ಸ್ ಹೈದರಾಬಾದ್

ಸನ್ ರೈಸರ್ಸ್ ಹೈದರಾಬಾದ್ ತಂಡದ ಭಾರತೀಯ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹ ತಂಡಕ್ಕೆ ಹೇಳಿಕೊಳ್ಳುವಂತಹ ಕೊಡುಗೆಯನ್ನೇನೂ ನೀಡಿಲ್ಲ. ಹೀಗಾಗಿ ಮುಂದಿನ ಐಪಿಎಲ್ ಮೆಗಾ ಹರಾಜಿನಲ್ಲಿ ವೃದ್ಧಿಮಾನ್ ಸಾಹ ಜಾಗಕ್ಕೆ ಇಶಾನ್ ಕಿಶನ್‌ರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಕರೆತರಬಹುದು.

3. ಕೊಲ್ಕತ್ತಾ ನೈಟ್ ರೈಡರ್ಸ್

3. ಕೊಲ್ಕತ್ತಾ ನೈಟ್ ರೈಡರ್ಸ್

ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಳೆದ ಕೆಲ ಆವೃತ್ತಿಗಳಿಂದ ಉತ್ತಮ ಮೇಲಿನ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಿಲ್ಲದೇ ಪರದಾಡುತ್ತಿದೆ. ಹೀಗಾಗಿ ಮುಂದಿನ ಬಾರಿಯ ಹರಾಜಿನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನಿತೀಶ್ ರಾಣಾ ಅಥವಾ ರಾಹುಲ್ ತ್ರಿಪಾಠಿ ಇಬ್ಬರಲ್ಲೊಬ್ಬರನ್ನು ಕೈಬಿಟ್ಟು ಇಶಾನ್ ಕಿಶನ್‌ರನ್ನು ಖರೀದಿಸುವ ಸಾಧ್ಯತೆಗಳಿವೆ.

Story first published: Wednesday, May 26, 2021, 11:08 [IST]
Other articles published on May 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X