ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ ಟ್ವೆಂಟಿಯಲ್ಲಿ ಅತಿಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿ

Here is the list of players with most no of MOS in T20I

ಪ್ರಸ್ತುತ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ನಡುವೆ ಭಾರೀ ಪೈಪೋಟಿ ಏರ್ಪಟ್ಟಂತೆ ಕಾಣುತ್ತಿದೆ. ವಿರಾಟ್ ಕೊಹ್ಲಿ ಅವರನ್ನು ಈ ತಲೆಮಾರಿನ ಯಾವ ಆಟಗಾರರೂ ಸಹ ಮೀರಿಸಲು ಆಗುವುದಿಲ್ಲ ಎಂದು ಹೇಳಲಾಗುತ್ತಿತ್ತು, ಆದರೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿರಾಟ್ ಕೊಹ್ಲಿ ಮತ್ತು ಬಾಬರ್ ಅಜಂ ನಡುವೆ ಹೋಲಿಕೆ ಮಾಡಿ ಮಾತನಾಡುವ ಮಂದಿ ಹೆಚ್ಚಾಗಿದ್ದಾರೆ.

ಬಾಬರ್ ಅಜಂ ಕೂಡ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದು ದಾಖಲೆಗಳ ಮೇಲೆ ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಐಸಿಸಿ ಬಿಡುಗಡೆ ಮಾಡಿದ ಹೊಸ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಬಾಬರ್ ಅಜಂ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ಬರೋಬ್ಬರಿ 1258 ದಿನಗಳಿಂದ ಏಕದಿನ ಕ್ರಿಕೆಟ್‌ನ ಅತ್ಯುತ್ತಮ ಆಟಗಾರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ರಾರಾಜಿಸುತ್ತಿದ್ದ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಬಾಬರ್ ಅಜಂ ಅಗ್ರಸ್ಥಾನಕ್ಕೇರಿದಾಗಿನಿಂದ ವಿರಾಟ್ ಕೊಹ್ಲಿ ಮತ್ತು ಬಾಬರ್ ಅಜಂರನ್ನು ಹೋಲಿಕೆ ಮಾಡಿ ಮಾತನಾಡುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ.

ಅತ್ಯುತ್ತಮ ಏಕದಿನ ಆಟಗಾರ ಶ್ರೇಯಾಂಕದ ಕುರಿತು ಚರ್ಚೆಗಳಾದ ಬೆನ್ನಲ್ಲೇ ಇದೀಗ ಮತ್ತೊಂದು ದಾಖಲೆಯ ಕುರಿತ ಚರ್ಚೆಯಲ್ಲಿ ವಿರಾಟ್ ಕೊಹ್ಲಿ ಮತ್ತು ಬಾಬರ್ ಅಜಂ ಹೆಸರು ಕೇಳಿ ಬರುತ್ತಿದೆ. ಹೌದು ಅಂತಾರಾಷ್ಟ್ರೀಯ ಟಿ ಟ್ವೆಂಟಿ ಸರಣಿಗಳಲ್ಲಿ ಅತಿಹೆಚ್ಚು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಅಜಂ ಎರಡನೇ ಸ್ಥಾನಕ್ಕೇರಿದ್ದು ಮುಂದಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಅವರ ಈ ದಾಖಲೆಯನ್ನು ಮುರಿಯಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಸೌತ್ಆಫ್ರಿಕಾ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಬಾಬರ್ ಅಜಂ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗುವ ಮೂಲಕ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಸರಣಿಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಅಂತಾರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಟಾಪ್ 4 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ ನೋಡಿ.

1. ವಿರಾಟ್ ಕೊಹ್ಲಿ

1. ವಿರಾಟ್ ಕೊಹ್ಲಿ

ಅಂತಾರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಸರಣಿಶ್ರೇಷ್ಠ ಪ್ರಶಸ್ತಿ ಹೊಂದಿರುವ ಪಟ್ಟಿಯಲ್ಲಿ ವಿರಾಟ್ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೂ 7 ಬಾರಿ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2. ಬಾಬರ್ ಅಜಂ

2. ಬಾಬರ್ ಅಜಂ

ಸದ್ಯ ಸಾಕಷ್ಟು ಸುದ್ದಿಯಲ್ಲಿರುವ ಪಾಕಿಸ್ತಾನದ ಆಟಗಾರ ಬಾಬರ್ ಅಜಂ 5 ಬಾರಿ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಳ್ಳುವುದರ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

3. ಮೊಹಮ್ಮದ್ ಹಫೀಜ್

3. ಮೊಹಮ್ಮದ್ ಹಫೀಜ್

ಮತ್ತೊಬ್ಬ ಪಾಕಿಸ್ತಾನಿ ಕ್ರಿಕೆಟಿಗ ಅತಿ ಹೆಚ್ಚು ಬಾರಿ ಟಿ ಟ್ವೆಂಟಿ ಸರಣಿಶ್ರೇಷ್ಠ ಪಡೆದುಕೊಂಡ ಟಾಪ್ 4 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಹಫೀಜ್ ಒಟ್ಟು 4 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದು, ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

4. ಶಕೀಬ್ ಅಲ್ ಹಸನ್

4. ಶಕೀಬ್ ಅಲ್ ಹಸನ್

ಬಾಂಗ್ಲಾದೇಶದ ಆಟಗಾರ ಶಕೀಬ್ ಅಲ್ ಹಸನ್ ಒಟ್ಟು 3 ಬಾರಿ ಟಿ ಟ್ವೆಂಟಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡು ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

Story first published: Saturday, April 17, 2021, 15:07 [IST]
Other articles published on Apr 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X