ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಈ ಬಲಿಷ್ಠ ತಂಡ ವಿಫಲವಾಗಲಿದೆ ಎಂದು ಭವಿಷ್ಯ ನುಡಿದ ಹರ್ಷೆಲ್ ಗಿಬ್ಸ್!

Herschelle Gibbs reveals 3 teams as strong favourites to win T20 World Cup 2021

ಅಕ್ಟೋಬರ್ 17ರಿಂದ ಯುಎಇಯಲ್ಲಿ ಬಹು ನಿರೀಕ್ಷಿತ ಕ್ರಿಕೆಟ್ ಟೂರ್ನಿ ಟಿ ಟ್ವೆಂಟಿ ವಿಶ್ವಕಪ್ ಆರಂಭವಾಗಲಿದೆ. ಕಳೆದ ವರ್ಷವೇ ಭಾರತದಲ್ಲಿ ನಡೆಯಬೇಕಿದ್ದ ಈ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಕೊರೊನಾ ವೈರಸ್ ಹಾವಳಿಯ ಕಾರಣದಿಂದಾಗಿ ಆರಂಭದ ವಿಳಂಬವಾಗಿತ್ತು. ಹೀಗೆ ಭಾರತದ ನೆಲದಲ್ಲಿ ವಿಳಂಬವಾಗಿದ್ದ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದ್ದು ಅಕ್ಟೋಬರ್ 17ರಿಂದ ನವೆಂಬರ್‌ 14ರವರೆಗೆ ಟೂರ್ನಿ ನಡೆಯಲಿದೆ.

ಈ ಕಾರಣದಿಂದಲೇ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ ಎಂದ ಇನ್ಜಮಾಮ್ ಉಲ್ ಹಕ್ಈ ಕಾರಣದಿಂದಲೇ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ ಎಂದ ಇನ್ಜಮಾಮ್ ಉಲ್ ಹಕ್

ಸದ್ಯ ಭಾರತ ಮತ್ತು ಇಂಗ್ಲೆಂಡ್ ತಂಡಗಳು 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಿರತವಾಗಿವೆ, ಇನ್ನುಳಿದ ತಂಡಗಳೂ ಸಹ ಮುಂದಿನ 2 ತಿಂಗಳು ವಿವಿಧ ಸರಣಿಗಳಲ್ಲಿ ಭಾಗವಹಿಸಲಿವೆ. ಹಾಗೂ ಸೆಪ್ಟೆಂಬರ್‌ 19ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯುಎಇಯಲ್ಲಿ ಮುಂದುವರಿಯಲಿದ್ದು ವಿವಿಧ ತಂಡಗಳ ಆಟಗಾರರು ಇದರಲ್ಲಿ ಭಾಗವಹಿಸಲಿದ್ದಾರೆ.

ಭಾರತ vs ಇಂಗ್ಲೆಂಡ್: ಕೆಎಲ್ ರಾಹುಲ್ ಬಾರಿಸಿದ ಒಂದು ಶತಕದಿಂದ ನಿರ್ಮಾಣವಾದ ದಾಖಲೆಗಳು ಅಷ್ಟಿಷ್ಟಲ್ಲ!ಭಾರತ vs ಇಂಗ್ಲೆಂಡ್: ಕೆಎಲ್ ರಾಹುಲ್ ಬಾರಿಸಿದ ಒಂದು ಶತಕದಿಂದ ನಿರ್ಮಾಣವಾದ ದಾಖಲೆಗಳು ಅಷ್ಟಿಷ್ಟಲ್ಲ!

ಅಕ್ಟೋಬರ್ 17ರಿಂದ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಕುರಿತು ಈಗಾಗಲೇ ಸಾಕಷ್ಟು ಆಟಗಾರರು ಮತ್ತು ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಇದೀಗ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹರ್ಷೆಲ್ ಗಿಬ್ಸ್ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಕುರಿತು ಮಾತನಾಡಿದ್ದು ಟಿ ಟ್ವೆಂಟಿ ವಿಶ್ವಕಪ್ ಗೆಲ್ಲುವ ಸಂಭವವಿರುವಂತಹ ಬಲಿಷ್ಠ 3 ತಂಡಗಳನ್ನು ಹೆಸರಿಸಿದ್ದಾರೆ ಹಾಗೂ ಬಲಿಷ್ಠ ತಂಡವೊಂದು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡುವುದಿಲ್ಲ ಎಂದೂ ಸಹ ಹರ್ಷೆಲ್ ಗಿಬ್ಸ್ ಭವಿಷ್ಯ ನುಡಿದಿದ್ದಾರೆ. ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಕುರಿತು ಮಾತನಾಡಿರುವ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹರ್ಷೆಲ್ ಗಿಬ್ಸ್ ಈ ಕೆಳಕಂಡಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ, ಇಂಗ್ಲೆಂಡ್ ಮತ್ತು ಪಾಕಿಸ್ತಾನ ಗೆಲ್ಲುವ ಸಾಧ್ಯತೆ

ಭಾರತ, ಇಂಗ್ಲೆಂಡ್ ಮತ್ತು ಪಾಕಿಸ್ತಾನ ಗೆಲ್ಲುವ ಸಾಧ್ಯತೆ

ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಕುರಿತಾಗಿ ಮಾತನಾಡಿರುವ ಹರ್ಷೆಲ್ ಗಿಬ್ಸ್ ಭಾರತ, ಇಂಗ್ಲೆಂಡ್ ಅಥವಾ ಪಾಕಿಸ್ತಾನ ಈ 3 ತಂಡಗಳಲ್ಲಿ ಯಾವುದಾದರೊಂದು ತಂಡ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಗೆಲ್ಲಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅದರಲ್ಲಿಯೂ ಭಾರತ ಮತ್ತು ಇಂಗ್ಲೆಂಡ್ ತಂಡಗಳು ತುಂಬ ಬಲಿಷ್ಠವಾಗಿದ್ದು ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಹರ್ಷೆಲ್ ಗಿಬ್ಸ್ ಹೇಳಿದ್ದಾರೆ.

ಈ ಬಲಿಷ್ಠ ತಂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವುದಿಲ್ಲ!

ಈ ಬಲಿಷ್ಠ ತಂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವುದಿಲ್ಲ!

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಜಯ ಗಳಿಸಬಹುದಾದ 3 ತಂಡಗಳನ್ನು ಹೆಸರಿಸಿದ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹರ್ಷೆಲ್ ಗಿಬ್ಸ್ ಈ ಬಾರಿ ಕಳಪೆ ಪ್ರದರ್ಶನ ನೀಡಲಿರುವ ಬಲಿಷ್ಠ ತಂಡವನ್ನೂ ಸಹ ಹೆಸರಿಸಿದ್ದಾರೆ. ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ತಂಡವಾದ ವೆಸ್ಟ್ ಇಂಡೀಸ್ ಹೇಳಿಕೊಳ್ಳುವಂತಹ ಪ್ರದರ್ಶ ವನ್ನು ನೀಡದೆ ನಿರಾಸೆ ಮೂಡಿಸಲಿದೆ ಎಂದು ಹರ್ಷೆಲ್ ಗಿಬ್ಸ್ ಭವಿಷ್ಯ ನುಡಿದಿದ್ದಾರೆ. ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಯುಎಇಯಲ್ಲಿ ನಡೆಯಲಿದ್ದು ಅಲ್ಲಿನ ಪಿಚ್‌ಗಳಲ್ಲಿ ಬ್ಯಾಟಿಂಗ್‌ಗಿಂತ ಬೌಲಿಂಗ್ ವಿಭಾಗ ಹೆಚ್ಚು ಶಕ್ತಿಶಾಲಿಯಾಗಿರಬೇಕು, ಹೀಗಾಗಿ ವೆಸ್ಟ್ ಇಂಡೀಸ್ ತಂಡ ಈ ಬಾರಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವುದು ಅನುಮಾನ ಎಂದು ಹರ್ಷೆಲ್ ಗಿಬ್ಸ್ ಅಭಿಪ್ರಾಯಪಟ್ಟಿದ್ದಾರೆ.

ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ಭಾರಿ ಬೇಡಿಕೆ | Oneindia Kannada
ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳನ್ನು ಹೆಸರಿಸಿದ ಹರ್ಷೆಲ್ ಗಿಬ್ಸ್

ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳನ್ನು ಹೆಸರಿಸಿದ ಹರ್ಷೆಲ್ ಗಿಬ್ಸ್


ಇನ್ನೂ ಮುಂದುವರಿದು ಮಾತನಾಡಿರುವ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹರ್ಷೆಲ್ ಗಿಬ್ಸ್ ಪ್ರಸ್ತುತ ಕ್ರಿಕೆಟ್ ಜಗತ್ತಿನಲ್ಲಿ ಅತ್ಯುತ್ತಮ ಟಿ ಟ್ವೆಂಟಿ ಬ್ಯಾಟ್ಸ್‌ಮನ್‌ಗಳು ಯಾರು ಎಂಬುದನ್ನು ಹೆಸರಿಸಿದ್ದಾರೆ. 'ಪ್ರಸ್ತುತ ವಿಶ್ವ ಕ್ರಿಕೆಟ್‍ನಲ್ಲಿ ಅತ್ಯುತ್ತಮವಾದ ಟಿ ಟ್ವೆಂಟಿ ಬ್ಯಾಟ್ಸ್‌ಮನ್‌ಗಳು ತುಂಬಾ ಜನ ಇದ್ದಾರೆ. ಅದರಲ್ಲಿ ಪ್ರಮುಖವಾಗಿ ವಿರಾಟ್ ಕೊಹ್ಲಿ, ಬಾಬರ್ ಅಜಮ್, ಸ್ಟೀವ್ ಸ್ಮಿತ್, ಎಬಿ ಡಿವಿಲಿಯರ್ಸ್ ಹಾಗೂ ಜೋಸ್ ಬಟ್ಲರ್ ಪ್ರಸ್ತುತ ಅತ್ಯುತ್ತಮ ಟಿ ಟ್ವೆಂಟಿ ಬ್ಯಾಟ್ಸ್‌ಮನ್‌ಗಳು' ಎಂದು ಹರ್ಷೆಲ್ ಗಿಬ್ಸ್ ಹೇಳಿದ್ದಾರೆ.

Story first published: Friday, August 13, 2021, 18:02 [IST]
Other articles published on Aug 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X