ಟಿ20 ಪಂದ್ಯವೊಂದರಲ್ಲಿ ಅತಿ ಹೆಚ್ಚು ಹಾಜರಾತಿ; ಗಿನ್ನೆಸ್ ವಿಶ್ವದಾಖಲೆ ಬರೆದ ಭಾರತ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಟಿ20 ಪಂದ್ಯವೊಂದರಲ್ಲಿ ಅತಿ ಹೆಚ್ಚು ಹಾಜರಾತಿಗಾಗಿ ಭಾರತಕ್ಕೆ 'ಗಿನ್ನಿಸ್ ವರ್ಲ್ಡ್ ರೆಕಾರ್ಡ್' ಪ್ರಶಸ್ತಿ ನೀಡಲಾಗಿದೆ ಎಂದು ಭಾನುವಾರ ಘೋಷಿಸಿದ್ದಾರೆ.

ಮೇ 29ರಂದು ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯವು ಗಿನ್ನೆಸ್ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

IND vs NZ: 2023ರ ವಿಶ್ವಕಪ್‌ಗೆ ಆಯ್ಕೆಯಾಗುವ ಬಗ್ಗೆ ಶುಭಮನ್ ಗಿಲ್ ಹೇಳಿದ್ದೇನು?IND vs NZ: 2023ರ ವಿಶ್ವಕಪ್‌ಗೆ ಆಯ್ಕೆಯಾಗುವ ಬಗ್ಗೆ ಶುಭಮನ್ ಗಿಲ್ ಹೇಳಿದ್ದೇನು?

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯಕ್ಕೆ 101,566 ಮಂದಿ ಹಾಜರಾಗಿದ್ದರು, ಇದು ಟಿ20 ಕ್ರಿಕೆಟ್‌ನ ಇತಿಹಾಸದಲ್ಲೇ ಅತಿ ದೊಡ್ಡ ಹಾಜರಾತಿಯಾಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ನವೆಂಬರ್ 27ರ ಭಾನುವಾರದಂದು ಘೋಷಣೆ ಮಾಡಿದೆ.

ಐಪಿಎಲ್ 2022ರ ಫೈನಲ್‌ಗೆ 1,01,566 ಜನರು ಸಾಕ್ಷಿ

ಬಿಸಿಸಿಐ ಟ್ವಿಟರ್‌ನಲ್ಲಿ "ಭಾರತವು ಗಿನ್ನೆಸ್ ವಿಶ್ವ ದಾಖಲೆಯನ್ನು ನಿರ್ಮಿಸಿರುವುದರಿಂದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ. ಇದು ನಮ್ಮ ಎಲ್ಲಾ ಅಭಿಮಾನಿಗಳಿಗೆ ಅವರ ಸಾಟಿಯಿಲ್ಲದ ಉತ್ಸಾಹ ಮತ್ತು ಅಚಲ ಬೆಂಬಲಕ್ಕಾಗಿ. ಮೊಟೆರಾ ಕ್ರೀಡಾಂಗಣ ಮತ್ತು ಐಪಿಎಲ್‌ಗೆ ಅಭಿನಂದನೆಗಳು," ಎಂದು ಬರೆದುಕೊಂಡಿದೆ.

"ಮೇ 29ರಂದು ಗುಜರಾತ್‌ನ ಮೊಟೆರಾದ ಅತಿದೊಡ್ಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 101,566 ಜನರು ಐಪಿಎಲ್ 2022ರ ಫೈನಲ್‌ಗೆ 101,566 ಜನರು ಟಿ20 ಪಂದ್ಯಕ್ಕೆ ಸಾಕ್ಷಿಯಾಗಿ ಅತಿ ಹೆಚ್ಚು ಹಾಜರಾತಿಗಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ವೀಕರಿಸಲು ತುಂಬಾ ಸಂತೋಷವಾಗಿದೆ ಮತ್ತು ಹೆಮ್ಮೆಪಡುತ್ತೇನೆ. ಇದನ್ನು ಸಾಧ್ಯವಾಗಿಸಿದ್ದಕ್ಕಾಗಿ ನಮ್ಮ ಅಭಿಮಾನಿಗಳಿಗೆ ದೊಡ್ಡ ಧನ್ಯವಾದಗಳು," ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು

ಹಾರ್ದಿಕ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು

ಇನ್ನು ಆ ಫೈನಲ್ ಪಂದ್ಯದ ಬಗ್ಗೆ ಹೇಳುವುದಾದರೆ, ಚೊಚ್ಚಲ ಬಾರಿಗೆ ಟೂರ್ನಿಯಲ್ಲಿ ಭಾಗವಹಿಸಿದ ಗುಜರಾತ್ ಟೈಟನ್ಸ್ ಚಾಂಪಿಯನ್ ಆಯಿತು ಮತ್ತು ಫೈನಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಏಳು ವಿಕೆಟ್‌ಗಳಿಂದ ಸೋತು ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತು.

ಮಹತ್ವದ ಪಂದ್ಯದಲ್ಲಿ 30 ಎಸೆತಗಳಲ್ಲಿ 34 ರನ್ ಗಳಿಸಿ, ಬೌಲಿಂಗ್‌ನಲ್ಲಿ ಪ್ರಮುಖ ಮೂರು ವಿಕೆಟ್ ಕಬಳಿಸಿದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಸಾಧಾರಣ ಮೊತ್ತ ಬೆನ್ನತ್ತಿ ಗೆದ್ದಿದ್ದ ಗುಜರಾತ್ ಟೈಟನ್ಸ್

ಸಾಧಾರಣ ಮೊತ್ತ ಬೆನ್ನತ್ತಿ ಗೆದ್ದಿದ್ದ ಗುಜರಾತ್ ಟೈಟನ್ಸ್

ಜೋಸ್ ಬಟ್ಲರ್ 35 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 39 ರನ್ ಗಳಿಸಿದರ ಸಹಾಯದಿಂದ ರಾಜಸ್ಥಾನ ರಾಯಲ್ಸ್ ತಂಡ ಒಂಬತ್ತು ವಿಕೆಟ್ ನಷ್ಟಕ್ಕೆ ಕೇವಲ 130 ರನ್ ಗಳಿಸಲಷ್ಟೇ ಶಕ್ತವಾಯಿತು. ಸಾಧಾರಣ ಮೊತ್ತ ಬೆನ್ನತ್ತಿದ ಗುಜರಾತ್ ಟೈಟನ್ಸ್ 18.1 ಓವರ್‌ಗಳಲ್ಲಿ 11 ಎಸೆತಗಳು ಬಾಕಿ ಇರುವಂತೆಯೇ ಯಶಸ್ವಿಯಾಗಿ ಗುರಿ ತಲುಪಿತು.

ಗುಜರಾತ್ ಟೈಟನ್ಸ್ ಪರ ಶುಭಮನ್ ಗಿಲ್ ಅಜೇಯ 43 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 45 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿದರು.

ಅತ್ಯಧಿಕ ಹಾಜರಾತಿಗಾಗಿ ಗಿನ್ನಿಸ್ ವಿಶ್ವ ದಾಖಲೆ

ಅತ್ಯಧಿಕ ಹಾಜರಾತಿಗಾಗಿ ಗಿನ್ನಿಸ್ ವಿಶ್ವ ದಾಖಲೆ

ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಅತ್ಯಧಿಕ ಹಾಜರಾತಿಗಾಗಿ ಗಿನ್ನಿಸ್ ವಿಶ್ವ ದಾಖಲೆಯೊಂದಿಗೆ ಗೌರವ ಸಲ್ಲಿಸಿರುವುದು ಇಡೀ ದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ. ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣವನ್ನು 2021ರಲ್ಲಿ ನವೀಕರಿಸಲಾಯಿತು.

ಮೊದಲು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ​​(GCA) ಸ್ಟೇಡಿಯಂ ಎಂದು ಕರೆಯಲ್ಪಡುತ್ತಿದ್ದ ಮೊಟೆರಾ ಕ್ರೀಡಾಂಗಣವು 110,000 ಸಾಮರ್ಥ್ಯದ ಆಸನಗಳನ್ನು ಹೊಂದಿದೆ. ಇದು 100,024 ಸಾಮರ್ಥ್ಯವಿರುವ ಮೆಲ್ಬೋರ್ನ್ ಕ್ರಿಕೆಟ್ ಮೈದಾನಕ್ಕಿಂತ ಸುಮಾರು 10,000 ಹೆಚ್ಚು ಆಸನ ಹೊಂದಿದೆ.

For Quick Alerts
ALLOW NOTIFICATIONS
For Daily Alerts
Story first published: Sunday, November 27, 2022, 19:32 [IST]
Other articles published on Nov 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X