Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Historic Win: ತವರಿನಲ್ಲಿ ಇತಿಹಾಸ ನಿರ್ಮಿಸಿದ ಸೂರ್ಯ ಪಡೆ: ಮೂರನೇ ಬಾರಿ ಟಿ20 ವಿಶ್ವಕಪ್‌ ಗೆದ್ದ ಭಾರತ

ಅಹಮದಾಬಾದ್‌: ನಿರೀಕ್ಷೆಯಂತೆ ಟೀಮ್ ಇಂಡಿಯಾ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ನೀಡಿದ್ದ ಸವಾಲಿನ ಮೊತ್ತವನ್ನು ಮೆಟ್ಟಿನಿಲ್ಲುವಲ್ಲಿ ವಿಫಲರಾದ ನ್ಯೂಜಿಲೆಂಡ್‌ ಚೊಚ್ಚಲ ಪ್ರಶಸ್ತಿ ಗೆಲ್ಲುವ ಕನಸಿಗೆ ಪೆಟ್ಟು ಬಿದಿದೆ. ಟೀಮ್ ಇಂಡಿಯಾ ತವರಿನಲ್ಲಿ ಟಿ20 ವಿಶ್ವಕಪ್‌ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ಆತಿಥ್ಯ ವಹಿಸಿದ್ದ ತಂಡ ಚಾಂಪಿಯನ್ ಪಟ್ಟಕ್ಕೆ ಏರಿದೆ. ಅಲ್ಲದೆ ಒಟ್ಟಾರೆ ಮೂರನೇ ಬಾರಿಗೆ ಭಾರತ ಟಿ20 ವಿಶ್ವಕಪ್‌ ಗೆದ್ದು ಇತಿಹಾಸ ನಿರ್ಮಿಸಿದೆ.

ಟೀಮ್ ಇಂಡಿಯಾ ಮಹತ್ವದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶವನ್ನು ಪಡೆದರು. ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್‌ ಬೌಲಿಂಗ್ ಮಾಡುವ ಅವಕಾಶವನ್ನು ಮಾಡಿತು. ಮಿಚೆಲ್ ಸ್ಯಾಂಟ್ನರ್ ಅವರ ನಿರ್ಧಾರವನ್ನು ತಪ್ಪು ಎಂದು ಟೀಮ್ ಇಂಡಿಯಾದ ಆರಂಭಿಕರಾದ ಸಂಜು ಸ್ಯಾಮ್ಸನ್‌ ಹಾಗೂ ಅಭಿಷೇಕ್ ಶರ್ಮಾ ತಂಡಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟರು. ಈ ಜೋಡಿ ಪವರ್‌ ಪ್ಲೇನಲ್ಲಿ 92 ರನ್‌ಗಳ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು.

Historic Win

ರನ್‌ಗಳು ಬರ ಅನುಭವಿಸುತ್ತಿದ್ದ ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ನೆರವಿನಿಂದ 52 ರನ್‌ ಸಿಡಿಸಿ ತಂಡಕ್ಕೆ ಆಧಾರವಾದರು. ಮೊದಲ ವಿಕೆಟ್‌ಗೆ ಅಭಿಷೇಕ್ ಹಾಗೂ ಸಂಜು 7.1 ಓವರ್‌ಗಳಲ್ಲಿ 98 ರನ್‌ಗಳ ಜೊತೆಯಾಟವನ್ನು ನೀಡಿದರು.

ಇಶಾನ್‌, ಸಂಜು ಅರ್ಧಶತಕದ ಬಲ

ಎರಡನೇ ವಿಕೆಟ್‌ಗೆ ಇಶಾನ್‌ ಕಿಶನ್‌ ಹಾಗೂ ಸಂಜು ಸ್ಯಾಮ್ಸನ್‌ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 48 ಎಸೆತಗಳಲ್ಲಿ 105 ರನ್‌ ಸೇರಿಸಿ ಅಬ್ಬರಿಸಿತು. ಈ ಅವಧಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದ ಸಂಜು ಸ್ಯಾಮ್ಸನ್‌ 46 ಎಸೆತಗಳಲ್ಲಿ 5 ಬೌಂಡರಿ, 8 ಸಿಕ್ಸರ್ ಸಹಾಯದಿಂದ 89 ರನ್‌ ಬಾರಿಸಿ ಔಟ್ ಆದರು.

ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಇಶಾನ್ ಕಿಶನ್‌ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತು ಪಡಿಸಿದರು. ಇವರು 25 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್ ನೆರವಿನಿಂದ 54 ರನ್ ಸಿಡಿಸಿದರು. ಹಾರ್ದಿಕ್ ಪಾಂಡ್ಯ 18 ರನ್‌ಗಳಿಗೆ ಆಟ ಮುಗಿಸಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 255 ರನ್‌ ಸೇರಿಸಿತು.

ಬ್ಯಾಟಿಂಗ್ ಪವರ್ ಕಟ್

256 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡದ ಆರಂಭ ಸಾಧಾರಣವಾಗಿತ್ತು. ಆರಂಭಿಕ ಫಿನ್ ಅಲೆನ್‌ ಸಿಕ್ಕ ಜೀವದಾನದ ಲಾಭವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ವಿಫಲರಾದರು. ಮೊದಲ ವಿಕೆಟ್‌ಗೆ ಫಿನ್ ಅಲೆನ್‌ ಹಾಗೂ ಟಿಮ್ ಸಿಫರ್ಟ್‌ ಜೋಡಿ 31 ರನ್‌ ಸಿಡಿಸಿತು. ಟೀಮ್ ಇಂಡಿಯಾ ಪವರ್‌ ಪ್ಲೇನಲ್ಲಿ ಮೂರು ವಿಕೆಟ್‌ ಪಡೆದು ತಂಡಕ್ಕೆ ಆಧಾರವಾಯಿತು. ಭರವಸೆಯ ಆಟಗಾರರಾದ ಗ್ಲೇನ್‌ ಫಿಲಿಪ್ಸ್‌, ರಚಿನ್ ರವೀಂದ್ರ ರನ್‌ ಕಲೆ ಹಾಕುವಲ್ಲಿ ವಿಫಲರಾದರು.

ನ್ಯೂಜಿಲೆಂಡ್ ತಂಡದ ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರರಾದ ಡೇರಿಲ್ ಮಿಚೆಲ್‌, ಮಾರ್ಕ್ ಚಾಪ್‌ಮನ್‌ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಲಿಲ್ಲ.

ನ್ಯೂಜಿಲೆಂಡ್ ತಂಡದ ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರರಾದ ಡೇರಿಲ್ ಮಿಚೆಲ್‌, ಮಾರ್ಕ್ ಚಾಪ್‌ಮನ್‌ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಲಿಲ್ಲ. ಮಹತ್ವದ ಪಂದ್ಯದಲ್ಲಿ ಟೀಮ್ ಸಿಫರ್ಟ್‌ 52 ರನ್‌ ಸಿಡಿಸಿ ಬೌಟ್ ಆದರು. ಮಿಚೆಲ್ ಸ್ಯಾಂಟ್ನರ್‌ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 43 ರನ್‌ ಸಿಡಿಸಿದರು. ಅಂತಿಮವಾಗಿ ನ್ಯೂಜಿಲೆಂಡ್ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು.

ಬುಮ್ರಾ ಮ್ಯಾಜಿಕ್

ಟೀಮ್ ಇಂಡಿಯಾದ ಬೌಲರ್‌ ಜಸ್ಪ್ರೀತ್ ಬುಮ್ರಾ ಬಿಗುವಿನ ದಾಳಿ ನಡೆಸಿ ಅಬ್ಬರಿಸಿದರು. ಇವರು 4 ಓವರ್‌ ಬೌಲ್ ಮಾಡಿ 15 ರನ್‌ ನೀಡಿ 4 ವಿಕೆಟ್‌ ಪಡೆದರು. ಅಕ್ಷರ್ ಪಟೇಲ್‌ 3 ವಿಕೆಟ್‌ ಕಬಳಿಸಿದರು.

Story first published: Sunday, March 8, 2026, 22:43 [IST]
Other articles published on Mar 8, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+