ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಹುಬ್ಬಳ್ಳಿಯಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿದ ಹಿಟ್‌ಮ್ಯಾನ್‌ ರೋಹಿತ್

By ಹುಬ್ಬಳ್ಳಿ ಪ್ರತಿನಿಧಿ
Hitman Rohit Sharma inaugurated a indore stadium in hubli

ಹುಬ್ಬಳ್ಳಿ, ಅಕ್ಟೋಬರ್ 25: ಶ್ರೀದುರ್ಗಾ ಸ್ಪೋರ್ಟ್ಸ್ ಅಕಾಡೆಮಿ ಮತ್ತು ಕ್ರಿಕ್‌ ಕಿಂಗ್ಡಂ ಸಹಯೋಗದಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಒಳಾಂಗಣ ಕ್ರೀಡಾಂಗಣವನ್ನು ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಶುಕ್ರವಾರ (ಅಕ್ಟೋಬರ್ 25) ಉದ್ಘಾಟಿಸಿದರು.

ತಮಿಳುನಾಡು ಮಣಿಸಿ 4ನೇ ಬಾರಿಗೆ ವಿಜಯ್ ಹಜಾರೆ ಕಪ್‌ ಗೆದ್ದ ಕರ್ನಾಟಕ!ತಮಿಳುನಾಡು ಮಣಿಸಿ 4ನೇ ಬಾರಿಗೆ ವಿಜಯ್ ಹಜಾರೆ ಕಪ್‌ ಗೆದ್ದ ಕರ್ನಾಟಕ!

ಚೊಚ್ಚಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ್ದ ಹಿಟ್‌ಮ್ಯಾನ್‌ ರೋಹಿತ್‌ ಅವರನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್‌ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಸ್ಟಾರ್ ಆಟಗಾರನ ಆಗಮನದಿಂದ ಶ್ರೀದುರ್ಗಾ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣ ಉದ್ಘಾಟನೆ ಕಾರ್ಯಕ್ರಮ ಕಳೆಗುಟ್ಟಿತ್ತು.

ಒಳಾಂಗಣ ಕ್ರೀಡಾಂಗಣ ಲೋಕಾರ್ಪಣೆ ಗೊಳಿಸಿದ ಬಳಿಕ, ಅಭಿಮಾನಿಗಳನ್ನುದ್ದೇಶಿ ಮಾತನಾಡಿದ್ದ ಶರ್ಮಾ, 'ನಾನು ಇದೇ ಮೊದಲ ಬಾರಿಗೆ ಹುಬ್ಬಳ್ಳಿಗೆ ಬಂದಿದ್ದೇನೆ. ಭಾರತ ಕ್ರಿಕೆಟ್‌ ತಂಡಕ್ಕೆ ಕರ್ನಾಟಕದ ಕೊಡುಗೆ ಸಾಕಷ್ಟಿದೆ. ಹುಬ್ಬಳ್ಳಿಗೆ ಬಂದಿರೋದು ಖುಷಿ ನೀಡಿದೆ,' ಎಂದರು.

ICC Rankingನಲ್ಲಿ ಈ ಸಾಧನೆ ಮೆರೆದ 3ನೇ ಭಾರತೀಯ ರೋಹಿತ್ ಶರ್ಮಾ!ICC Rankingನಲ್ಲಿ ಈ ಸಾಧನೆ ಮೆರೆದ 3ನೇ ಭಾರತೀಯ ರೋಹಿತ್ ಶರ್ಮಾ!

ಮಾತು ಮುಂದುವರೆಸಿದ ರೋಹಿತ್, 'ಮತ್ತೆ ಮತ್ತೆ ಹುಬ್ಬಳ್ಳಿಗೆ ಬರುತ್ತಿರುತ್ತೇನೆ. ನಿಮ್ಮ ಪ್ರೀತಿ-ಅಭಿಮಾನಕ್ಕೆ ನಾನು ಸದಾ ಋಣಿ ಎಂದು ಅಭಿಮಾನಿಗಳತ್ತ ಕೈಬೀಸಿದರು. ಬಳಿಕ ಸೆಲ್ಫಿಗಾಗಿ ಮುಗಿಬಿದ್ದ ನೂರಾರು ಅಭಿಮಾನಿಗಳ ಜೊತೆ ಸೆಲ್ಫಿ ಕ್ಲಿಕ್ಕಿಸಿ ಖುಷಿಪಟ್ಟರು.

ಹುಟ್ಟು ಹಬ್ಬದ ದಿನವೇ ಹ್ಯಾಟ್ರಿಕ್ ವಿಕೆಟ್ ಪಡೆದ ಕನ್ನಡಿಗ ಅಭಿಮನ್ಯು ಮಿಥುನ್!ಹುಟ್ಟು ಹಬ್ಬದ ದಿನವೇ ಹ್ಯಾಟ್ರಿಕ್ ವಿಕೆಟ್ ಪಡೆದ ಕನ್ನಡಿಗ ಅಭಿಮನ್ಯು ಮಿಥುನ್!

ಭಾರತಕ್ಕೆ ಪ್ರವಾಸ ಕೈಗೊಂಡಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಚೊಚ್ಚಲ ಬಾರಿಗೆ (ಟೆಸ್ಟ್‌ನಲ್ಲಿ) ಆರಂಭಿಕರಾಗಿ ಬ್ಯಾಟಿಂಗ್ ಮಾಡಿದ್ದ ರೋಹಿತ್ 2 ಶತಕ, 1 ದ್ವಿಶತಕ ಬಾರಿಸಿದ್ದರು. ಅಲ್ಲದೆ ಒಂದೇ ಟೆಸ್ಟ್ ಸರಣಿಯಲ್ಲಿ 529 ರನ್ ಗಳಿಸಿ, ಒಂದಿಷ್ಟು ಅಪರೂಪದ ದಾಖಲೆಗಳನ್ನು ಬರೆದಿದ್ದರು.

Story first published: Friday, October 25, 2019, 20:04 [IST]
Other articles published on Oct 25, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X