For Quick Alerts
ALLOW NOTIFICATIONS  
For Daily Alerts
 

T20 World Cup: ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ: ಜಯ್‌ ಶಾ

ಈ ವರ್ಷ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರು ಟಿ20 ವಿಶ್ವಕಪ್‌ಗೆ ರೋಹಿತ್ ಶರ್ಮಾ ಅವರನ್ನು ನಾಯಕ ಎಂದು ಘೋಷಿಸಿದ್ದಾರೆ. ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ತಂಡ ಖಂಡಿತವಾಗಿಯೂ ಯಶಸ್ವಿಯಾಗಲಿದೆ ಎಂದು ಜಯ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ.

ಬಹುದಿನಗಳಿಂದ ಭಾರೀ ಕುತೂಹಲವನ್ನು ಮೂಡಿಸಿದ್ದ ಒಂದು ಪ್ರಶ್ನೆ ಎಂದರೆ, ಟೀಮ್ ಇಂಡಿಯಾದ ಹಿರಿಯ ಆಟಗಾರರು ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಆಡುತ್ತಾರೋ, ಇಲ್ಲವೋ ಎಂಬ ಪ್ರಶ್ನೆ ಹರಿದಾಡುತ್ತಿತ್ತು. ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕದೆ. ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ನಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತಿಳಿಸಿದ್ದಾರೆ.

Hitman Rohit Sharma to captain India at T20 World Cup 2024

ಈ ವರ್ಷ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಟಿ20 ವಿಶ್ವಕಪ್‌ಗೆ ರೋಹಿತ್ ಶರ್ಮಾ ಅವರನ್ನು ನಾಯಕ ಎಂದು ಘೋಷಿಸಿದ್ದಾರೆ. ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ತಂಡ ಖಂಡಿತವಾಗಿಯೂ ಯಶಸ್ವಿಯಾಗಲಿದೆ ಎಂದು ಜಯ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ.

ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ತಂಡ ಖಂಡಿತವಾಗಿಯೂ ಯಶಸ್ವಿಯಾಗಲಿದ್ದಾರೆ ಎಂದು ಜಯ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷದ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪ್ರದರ್ಶನದ ಬಗ್ಗೆ ಜಯ್ ಶಾ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ, ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಬೇಕಾಯಿತು.

ನಾಯಕನ ಬಗ್ಗೆ ಪ್ರಶ್ನೆ ಇತ್ತು

ನ್ಯೂಸ್ 18 ಗೆ ನೀಡಿದ ಸಂದರ್ಶನದಲ್ಲಿ, ಟಿ 20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕರಾಗುತ್ತಾರೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ. ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ಗೂ ಮುನ್ನ ಮಾತನಾಡಿದ ಜಯ್ ಶಾ, ''2023ರ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ನಮ್ಮ ತಂಡ ಸೋಲು ಕಂಡಿದೆ. ಆದರೆ, ಟೂರ್ನಿಯಲ್ಲಿ ನೀಡಿದ ಪ್ರದರ್ಶನ ಟೀಂ ಇಂಡಿಯಾ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಭಾರತ ಸತತ 10 ಪಂದ್ಯಗಳನ್ನು ಗೆದ್ದಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಬಾರಿಯ ಟಿ20 ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

Hitman Rohit Sharma to captain India at T20 World Cup 2024

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ನಾಯಕ ಯಾರು ಎಂಬ ಪ್ರಶ್ನೆ ಇಲ್ಲಿಯವರೆಗೂ ಉಳಿದಿತ್ತು. 2022ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಕೊನೆಗೊಳಿಸಿತ್ತು. ಇದಾದ ಬಳಿಕ ರಾಷ್ಟ್ರೀಯ ತಂಡದ ಪರ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ ಆಡಿರಲಿಲ್ಲ. ಆದರೆ, ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ತಾವು ಟಿ20 ವಿಶ್ವಕಪ್‌ ಆಡಲು ಉತ್ಸುಕರಿರುವುದಾಗಿ ತಿಳಿಸಿದ್ದರು. ಅದರಂತೆ ತವರಿನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಸರಣಿಗೂ ರೋಹಿತ್ ಶರ್ಮಾ ಅವರನ್ನು ನಾಯಕರನ್ನಾಗಿ ಮಾಡಲಾಯಿತು.

ಕಳೆದ ಟಿ20 ವಿಶ್ವಕಪ್‌ ಸೋಲಿನ ಬಳಿಕ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಿದ್ದರು. ಆದರೆ ಜನವರಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 14 ತಿಂಗಳ ನಂತರ ಟಿ20 ತಂಡಕ್ಕೆ ಮರಳಿದರು. ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲೂ ರೋಹಿತ್ ಶರ್ಮಾ ಶತಕ ಸಿಡಿಸಿದ್ದರು. ಅಂದಿನಿಂದ ಈ ವರ್ಷದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು.

Story first published: Wednesday, February 14, 2024, 22:20 [IST]
Other articles published on Feb 14, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+