Shreyas Iyer: ಆಡುವ ಹನ್ನೊಂದರೊಳಗೆ ಶ್ರೇಯಸ್ ಅಯ್ಯರ್‌ಗೆ ಅವಕಾಶ ಸಿಕ್ಕಿದ್ದೇಗೆ?
ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಗೆಲುವಿನಲ್ಲಿ ಶ್ರೇಯಸ್ ಅಯ್ಯರ್ ಪ್ರಮುಖ ಪಾತ್ರ ವಹಿಸಿದರು. ಪಂದ್ಯದ ಗೆಲುವಿಗೆ ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ 59 ರನ್ ಗಳ ಕೊಡುಗೆ ನೀಡಿದರು. ಪಂದ್ಯದ ನಂತರ ಸಂದರ್ಶನವೊಂದರಲ್ಲಿ ಶ್ರೇಯಸ್ ಅಯ್ಯರ್ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದರು. ವಿರಾಟ್ ಕೊಹ್ಲಿ ನಾಗ್ಪುರದಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಆಡಿದ್ದರೆ, ಅವರು ಪ್ಲೇಯಿಂಗ್ ಹನ್ನೊಂದರ ಭಾಗವಾಗಿರುತ್ತಿರಲಿಲ್ಲ ಎಂದು ಶ್ರೇಯಸ್ ಅಯ್ಯರ್ ಹೇಳಿದರು.
ಬಲ ಮೊಣಕಾಲಿನ ಊತದಿಂದಾಗಿ ವಿರಾಟ್ ಕೊಹ್ಲಿ ನಾಗ್ಪುರ ಏಕದಿನ ಪಂದ್ಯದಲ್ಲಿ ಆಡಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಶ್ರೇಯಸ್ ಅಯ್ಯರ್ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಲು ಅವಕಾಶ ಸಿಕ್ಕಿತು. ಆದರೆ, ಅಯ್ಯರ್ ಅವರಿಗೆ ಈ ಅವಕಾಶ ಸಿಕ್ಕಿದ್ದು ರೋಮಾಂಚಕಾರಿಯಾಗಿದೆ.

ನಾಗ್ಪುರ ಏಕದಿನ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅವರಿಗೆ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಆದರೆ ಉಪನಾಯಕ ಶುಭಮನ್ ಗಿಲ್ 3ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬಂದರು. ಹೀಗಾಗಿ ಶ್ರೇಯಸ್ ಅಯ್ಯರ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾಗಿತ್ತು. ಸಿಕ್ಕ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡ ಅಯ್ಯರ್ ಅಬ್ಬರದ ಬ್ಯಾಟಿಂಗ್ ಮಾಡಿದರು.
ಕೈ ಹಿಡಿದ ಅದೃಷ್ಟ
ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಯಶಸ್ವಿ ಜೈಸ್ವಾಲ್ ಆಡಲಿದ್ದಾರೆ ಎಂದು ಹಲವರು ಊಹಿಸಿದ್ದರು. ಆದರೆ ಶ್ರೇಯಸ್ ಅಯ್ಯರ್ ಕಣಕ್ಕಿಳಿದಿದ್ದರು. ಟೀಮ್ ಮ್ಯಾನೇಜ್ಮೆಂಟ್ ಯಶಸ್ವಿ ಜೈಸ್ವಾಲ್ ಅವರನ್ನು ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುವಂತೆ ಬಯಸಿತ್ತು. ಆದರೆ ಶ್ರೇಯಸ್ ಅಯ್ಯರ್ ಅವರನ್ನು ಬೆಂಚ್ ಮೇಲೆ ಕೂರಿಸುವುದು ಖಚಿತವಾಗಿತ್ತು.
ಅವಕಾಶ ಸಿಕ್ಕಿದ್ದೇಗೆ?
ಪಂದ್ಯದ ಹಿಂದಿನ ರಾತ್ರಿ ನಾನು ಸಿನಿಮಾ ನೋಡುತ್ತಿದ್ದೆ, ಈ ಸಂದರ್ಭದಲ್ಲಿ ತಡವಾಗಿ ಮಲಗಬಹುದು ಯೋಚಿಸುತ್ತಿದ್ದೆ, ಆದರೆ ನಾಯಕ ರೋಹಿತ್ ಶರ್ಮಾ ನನಗೆ ಕರೆ ಮಾಡ ವಿರಾಟ್ ಅವರ ಮೊಣಕಾಲು ಊದಿಕೊಂಡಿರುವುದರಿಂದ ನೀನು ನಾಳೆ ಆಡಬಹುದು ಎಂದರು. ಹೀಗಾಗಿ ನಾನು ಬೇಗನೆ ಕೋಣೆಗೆ ಹಿಂತಿರುಗಿ ತಕ್ಷಣ ನಿದ್ರೆಗೆ ಜಾರಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಅಯ್ಯರ್ ಭಾರತ ಏಕದಿನ ತಂಡದಲ್ಲಿ ನಾಲ್ಕನೇ ಕ್ರಮಾಂಕದ ಬ್ಯಾಟರ್ ಆಗಿದ್ದಾರೆ. 2023ರ ವಿಶ್ವಕಪ್‌ನಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಆರಂಭವಾಗಲಿದ್ದು, ಇಂಗ್ಲೆಂಡ್ ವಿರುದ್ಧದ ಈ ಏಕದಿನ ಸರಣಿಯು ಭಾರತಕ್ಕೆ ತನ್ನ ಸಂಯೋಜನೆಯನ್ನು ಸುಧಾರಿಸಿಕೊಳ್ಳಲು ಕೊನೆಯ ಅವಕಾಶವಾಗಿದೆ. ಯಶಸ್ವಿ ಜೈಸ್ವಾಲ್ ಅವರನ್ನು ಬ್ಯಾಕಪ್ ಓಪನರ್ ಆಗಿ ಸಿದ್ಧವಾಗಿಡಲು ಭಾರತ ಮುಂದಾಗಿದೆ. ಆದರೆ ಶುಭಮನ್ ಗಿಲ್ ಕೂಡ ಮಧ್ಯಮ ಕ್ರಮಾಂಕದಲ್ಲಿ ಪರೀಕ್ಷೆಗೆ ಒಳಗಾಗುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications