ಆಗಸ್ಟ್ 30ರಿಂದ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯುವ 2023ರ ಏಷ್ಯಾ ಕಪ್ ಪಂದ್ಯಾವಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೊನೆಗೂ ಭಾರತ ತಂಡವನ್ನು ಪ್ರಕಟಿಸಿದೆ.
ರೋಹಿತ್ ಶರ್ಮಾ ನಾಯಕತ್ವದ 17 ಸದಸ್ಯರ ತಂಡವನ್ನು ಸೋಮವಾರ, ಆಗಸ್ಟ್ 21ರಂದು ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಘೋಷಿಸಿದರು. ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ತಮ್ಮ ಸುದೀರ್ಘ ಗಾಯದ ವಿಶ್ರಾಂತಿಯಿಂದ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ಭಾರತ ತಂಡಕ್ಕೆ ಮರಳಿದ್ದು, ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಶಕ್ತಿ ತುಂಬಲಿದ್ದಾರೆ.
ಈ ಬಾರಿಯ ಪಂದ್ಯಾವಳಿಯನ್ನು ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿದ್ದು, ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಗಸ್ಟ್ 30ರಂದು ಪಾಕಿಸ್ತಾನ ಮತ್ತು ನೇಪಾಳ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಸೆಣಸಾಡಲಿವೆ.

ಇನ್ನು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ತನ್ನ ಅಭಿಯಾನದ ಮೊದಲ ಪಂದ್ಯವನ್ನು ಸೆಪ್ಟೆಂಬರ್ 2ರಂದು ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಆಡಲಿದೆ.
ಇನ್ನು ಏಷ್ಯಾ ಕಪ್‌ಗೆ ಹೊಸಮುಖವಾಗಿ ಯುವ ಬ್ಯಾಟರ್ ತಿಲಕ್ ವರ್ಮಾ ಏಷ್ಯಾ ಕಪ್‌ಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. ಕೆಎಲ್ ರಾಹುಲ್ ಇನ್ನೂ ಸಂಪೂರ್ಣ ಫಿಟ್‌ನೆಸ್ ಹೊಂದಿರುವ ಅನುಮಾನದಲ್ಲಿ ಇಶಾನ್ ಕಿಶನ್ ಎರಡನೇ ವಿಕೆಟ್‌ಕೀಪರ್ ಆಗಿ ಆಯ್ಕೆಯಾಗಿದ್ದರೆ, ಸಂಜು ಸ್ಯಾಮ್ಸನ್ ಅವರನ್ನು ಬ್ಯಾಕ್ಅಪ್ ಆಟಗಾರ ಎಂದು ಹೆಸರಿಸಲಾಗಿದೆ.

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಪ್ರಯಾಣದ ಮೀಸಲು ಆಟಗಾರ).
ಇನ್ನು 2023ರ ಏಷ್ಯಾ ಕಪ್ ಪಂದ್ಯಾವಳಿಗೆ ಆರ್‌ಸಿಬಿ ತಂಡದಿಂದ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಸ್ಥಾನ ಪಡೆದಿದ್ದಾರೆ. ಇದರಲ್ಲಿ ಮುಂಬೈ ಇಂಡಿಯನ್ಸ್ ತಂಡ ಬಹುಪಾಲು ಹೊಂದಿದೆ.
ಮುಂಬೈ ಇಂಡಿಯನ್ಸ್ (4) - ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಜಸ್ಪ್ರೀತ್ ಬುಮ್ರಾ
ಗುಜರಾತ್ ಟೈಟನ್ಸ್ (3) - ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು (2) - ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್
ಕೋಲ್ಕತ್ತಾ ನೈಟ್ ರೈಡರ್ಸ್ (2) - ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್
ಡೆಲ್ಲಿ ಕ್ಯಾಪಿಟಲ್ಸ್ (2) - ಅಕ್ಷರ್ ಪಟೇಲ್, ಕುಲದೀಪ್ ಯಾದವ್
ಲಕ್ನೋ ಸೂಪರ್ ಜೈಂಟ್ಸ್ (1) - ಕೆಎಲ್ ರಾಹುಲ್
ಚೆನ್ನೈ ಸೂಪರ್ ಕಿಂಗ್ಸ್ (1) - ರವೀಂದ್ರ ಜಡೇಜಾ
ರಾಜಸ್ಥಾನ ರಾಯಲ್ಸ್ (2) - ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಪ್ರಯಾಣದ ಮೀಸಲು ಆಟಗಾರ).
ಪಂಜಾಬ್ ಕಿಂಗ್ಸ್ - ಯಾವುದೇ ಆಟಗಾರನಿಲ್ಲ
ಸನ್‌ರೈಸರ್ಸ್ ಹೈದರಾಬಾದ್ - ಯಾವುದೇ ಆಟಗಾರನಿಲ್ಲ