Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಪ್ಲೇಆಫ್‌ಗೂ ಮುನ್ನ ಆರ್‌ಸಿಬಿಗೆ ದೊಡ್ಡ ಪೆಟ್ಟು; ಜಾಕೋಬ್‌ ಬೆಥೆಲ್ ಔಟ್‌

19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ಮೊದಲ ಕ್ವಾಲಿಫೈಯರ್‌ಗೆ ಸಿದ್ಧತೆ ನಡೆಸಿದೆ. ಇದೇ ವೇಳೆ ಈಗ ಬರುತ್ತಿರುವ ಸುದ್ದಿ ನಿಜಕ್ಕೂ ಆರ್‌ಸಿಬಿ ತಂಡಕ್ಕೆ ದೊಡ್ಡ ಪೆಟ್ಟು ನೀಡಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಸ್ಟಾರ್ ಪ್ಲೇಯರ್ ಐಪಿಎಲ್‌ನ ಉಳಿದ ಪಂದ್ಯಗಳಿಂದ ಹೊರ ನಡೆದಿದ್ದಾರೆ.

ಆರ್‌ಸಿಬಿ ತಂಡದ ಆರಂಭಿಕ ಆಟಗಾರ ಇಂಗ್ಲೆಂಡ್ ತಂಡದ ಜಾಕೋಬ್ ಬೆಥೆಲ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ಇವರು ತವರಿಗೆ ಮರಳಿದ್ದಾರೆ. ಪಂಜಾಬ್‌ ಕಿಂಗ್ಸ್‌ ವಿರುದ್ಧ ಪಂದ್ಯದಲ್ಲಿ ಜಾಕೋಬ್ ಬೆಥೆಲ್‌ ಬೆರಳಿನ ಗಾಯಕ್ಕೆ ತುತ್ತಾಗಿದ್ದಾರೆ. ಆದರೆ ಇವರ ಗಾಯ ಇನ್ನು ಚೇತರಿಕೆ ಕಾಣದ ಕಾರಣ ಇವರು ತವರಿನತ್ತ ಮುಖಮಾಡಿದ್ದಾರೆ. ಅಲ್ಲದೆ ಜೂನ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಆರಂಭವಾಗಲಿರುವ ಟೆಸ್ಟ್‌ ಸರಣಿಯಲ್ಲಿ ಇವರು ಇಂಗ್ಲೆಂಡ್‌ ತಂಡದ ಪರ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.

RCB

ಜಾಕೋಬ್ ಬೆಥೆಲ್‌ಗೆ ಗಾಯ

ಜಾಕೋಬ್ ಬೆಥೆಲ್ ಅವರ ಗಾಯವು ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಎಡಗೈ ಬೆರಳಿಗೆ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿಯೇ ಇವರು ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿದಿರಲಿಲ್ಲ. ಈಗ ಇವರ ಇಂಗ್ಲೆಂಡ್ ಫ್ಲೈಟ್ ಏರಿದ್ದಾರೆ. ಇವರು ಜೂನ್‌ನಲ್ಲಿ ಆರಂಭವಾಗಲಿರುವ ಟೆಸ್ಟ್‌ ಸರಣಿಗೂ ಮುನ್ನ ಇವರು ತಂಡ ಸೇರಲಿದ್ದಾರೆ. ಆದರೆ ಇವರು ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ನಿರ್ಧಾರ ತೆಗೆದುಕೊಳ್ಳಲಿದೆ.

ಇಂಗ್ಲೆಂಡ್ ತಂಡದ ಸ್ಫೋಟಕ ಆಟಗಾರ ಫಿಲ್ ಸಾಲ್ಟ್‌ ಗಾಯಕ್ಕೆ ತುತ್ತಾದ ಬಳಿಕ ಜಾಕೋಬ್ ಬೆಥೆಲ್ ಅವರಿಗೆ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಆರಂಭಿಕರಾಗಿ ಆಡುವ ಅವಕಾಶ ನೀಡಿತು. ಇವರು ಈ ಅವಕಾಶವನ್ನು ಬಳಸಿಕೊಂಡು ತಂಡಕ್ಕೆ ಆಧಾರವಾಗಿದ್ದರು. ಈಗ ಇವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಪೆಟ್ಟು ನೀಡಿದಂತೆ ಆಗಿದೆ. ಇವರು ಆರ್‌ಸಿಬಿ ಪರ ಈ ಆವೃತ್ತಿಯಲ್ಲಿ ಆಡಿದ 7 ಪಂದ್ಯಗಳಲ್ಲಿ 13ರ ಸರಾಸರಿಯಲ್ಲಿ 96 ರನ್‌ ಸಿಡಿಸಿದ್ದಾರೆ. ಈ ವೇಳೆ ಇವರ ಬ್ಯಾಟ್‌ನಿಂದ 12 ಬೌಂಡರಿ, 3 ಸಿಕ್ಸರ್‌ಗಳು ಬಂದಿವೆ.

RCB

ಅಂಕಪಟ್ಟಿಯಲ್ಲಿ ಆರ್‌ಸಿಬಿ ಸಾಧನೆ

ಆರ್‌ಸಿಬಿ ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದೆ. ಆಡಿದ 14 ಪಂದ್ಯಗಳಲ್ಲಿ ಆರ್‌ಸಿಬಿ 9 ಜಯ, 5 ಸೋಲು ಕಂಡಿದ್ದು 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಅಲ್ಲದೆ ಮೊದಲ ಕ್ವಾಲಿಫೈಯರ್ ಆಡಲು ಅರ್ಹತೆ ಪಡೆದಿದೆ. ಮೊದಲ ಕ್ವಾಲಿಫೈಯರ್ ಪಂದ್ಯ ಮೇ 26 ರಂದು ಧರ್ಮಶಾಲಾದಲ್ಲಿ ನಡೆಯಲಿದೆ.

Story first published: Saturday, May 23, 2026, 22:43 [IST]
Other articles published on May 23, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+