ತವರಿಗೆ ಮರಳಿದ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮಿನ್ಸ್
19ನೇ ಆವೃತ್ತಿಯ ಐಪಿಎಲ್ ಆರಂಭವಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸೋಲು ಕಂಡಿದ್ದ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್), ಎರಡನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಜಯ ದಾಖಲಿಸಿತ್ತು. ಈ ಎರಡೂ ಪಂದ್ಯಗಳಲ್ಲಿ ಸನ್ ತಂಡವನ್ನು ಇಶಾನ್ ಕಿಶನ್ ಮುನ್ನಡೆಸಿದ್ದರು. ಹೈದರಾಬಾದ್ ತಂಡದ ನಿಯಮಿತ ನಾಯಕ ಪ್ಯಾಟ್ ಕಮಿನ್ಸ್ ಬೆನ್ನಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರದ ಕಾರಣ ಇವರು ಆರಂಭಿಕ ಪಂದ್ಯಗಳಿಂದ ದೂರ ಉಳಿದಿದ್ದಾರೆ.
ಕಮಿನ್ಸ್ ಗಾಯದ ಮಧ್ಯೆ ಎಸ್‌ಆರ್‌ಎಚ್ ತಂಡವನ್ನು ಸೇರಿಕೊಂಡಿದ್ದರು. ತಂಡದ ಭಾಗವಾಗದೆ ಇದ್ದರೂ ಸಹ ಅಭ್ಯಾಸದ ವೇಳೆ ಕಾಣಿಸಿಕೊಂಡಿದ್ದರು. ಆದರೆ ಈಗ ಕಮಿನ್ಸ್ ಅವರು ಮತ್ತೆ ತವರಿಗೆ ಮರಳಿದ್ದಾರೆ. ಇದು ಸನ್‌ರೈಸರ್ಸ್ ಹೈದರಾಬಾದ್ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ತವರಿಗೆ ಕಮಿನ್ಸ್
ಇಎಸ್‌ಪಿಎನ್ ಕ್ರಿಕ್‌ಇನ್ಫೊ ವರದಿಯ ಪ್ರಕಾರ, ಪ್ಯಾಟ್ ಕಮ್ಮಿನ್ಸ್ ತಮ್ಮ ಬೆನ್ನಿನ ಗಾಯಕ್ಕೆ ಸ್ಕ್ಯಾನಿಂಗ್ ಒಳಪಡಲು ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ. ಇವರ ಗಾಯದ ಮೇಲೆ ಕ್ರಿಕೆಟ್ ಆಸ್ಟ್ರೇಲಿಯಾ ನಿಗಾ ಇಟ್ಟಿದೆ. ಇವರ ಗಾಯದಿಂದ ಚೇತರಿಸಿಕೊಂಡಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದ ಬಳಿಕವೇ ಐಪಿಎಲ್ ಆಡಲು ಮೈದಾನಕ್ಕೆ ಇಳಿಯಲಿದ್ದಾರೆ. ಏಪ್ರಿಲ್ 3 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ನಂತರ ಪ್ಯಾಟ್ ಕಮ್ಮಿನ್ಸ್ ಆಸ್ಟ್ರೇಲಿಯಾಕ್ಕೆ ಮರಳಿದರು. ಸ್ಕ್ಯಾನ್ ವರದಿಗಳಲ್ಲಿ ಗಾಯ ಗುಣವಾಗಿದೆ ಎಂದು ತಿಳಿದು ಬಂದರೆ ಪ್ಯಾಟ್ ಏಪ್ರಿಲ್ 17 ರಂದು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮತ್ತೆ ಸೇರುತ್ತಾರೆ.
ಹೈದರಾಬಾದ್‌ನ ಮುಂದಿನ ಪಂದ್ಯವನ್ನು ಏಪ್ರಿಲ್ 5 ರಂದು ತಮ್ಮ ತವರು ಮೈದಾನವಾದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದಾರೆ. ಹೈದರಾಬಾದ್ ಈ ಪಂದ್ಯವನ್ನು ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಕಾಣುತ್ತಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ ಅವರ ಮೇಲೆ ನೆಟ್ಟಿರಲಿವೆ. ಈ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡುವ ಇರಾದೆ ಇಶಾನ್ ಪಡೆಯದ್ದಾಗಿದೆ. ಅಲ್ಲದೆ ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಆರ್ಭಟ ನಡೆಸಲು ಹೈದರಾಬಾದ್ ಸಿದ್ಧತೆ ನಡೆಸಿದೆ. ಆದರೆ ಸನ್ ತಂಡದ ವೇಗದ ಬೌಲಿಂಗ್ ವಿಭಾಗದಲ್ಲಿ ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿ ಬಹುವಾಗಿ ಕಾಡುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications