ಭಾರತ vs ಶ್ರೀಲಂಕಾ ಟಿ ಟ್ವೆಂಟಿ: ಆರಂಭಿಕ ಆಟಗಾರರು ಯಾರು ಎಂಬುದನ್ನು ಬಿಚ್ಚಿಟ್ಟ ರೋಹಿತ್ ಶರ್ಮಾ

ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ಕೆರಿಬಿಯನ್ನರಿಗೆ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಸೋಲುಣಿಸಿರುವ ಟೀಮ್ ಇಂಡಿಯಾ ಎರಡೂ ಸರಣಿಗಳಲ್ಲಿಯೂ ಕೂಡ ವೈಟ್ ವಾಶ್ ಬಳಿಯುವ ಮೂಲಕ ಗೆದ್ದು ಬೀಗಿದೆ. ಹೀಗೆ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗಳಲ್ಲಿ ವೈಟ್ ವಾಷ್ ಸಾಧನೆ ಮಾಡಿರುವ ಟೀಂ ಇಂಡಿಯಾ ತನ್ನ ಮುಂದಿನ ಸರಣಿಯಲ್ಲಿ ಶ್ರೀಲಂಕಾ ತಂಡವನ್ನು ಎದುರಿಸುತ್ತಿದೆ. ಈಗಾಗಲೇ ಭಾರತ ಪ್ರವಾಸವನ್ನು ಕೈಗೊಂಡು ಅಭ್ಯಾಸದಲ್ಲಿ ನಿರತವಾಗಿರುವ ಶ್ರೀಲಂಕಾ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟವನ್ನು ನಡೆಸಲಿದೆ.
ಶ್ರೀಲಂಕಾ ವಿರುದ್ಧ ನಡೆಯಲಿರುವ ಟಿ ಟ್ವೆಂಟಿ ಹಾಗೂ ಟೆಸ್ಟ್ ಸರಣಿಗಳಿಗೆ ಈಗಾಗಲೇ 2 ಪ್ರತ್ಯೇಕ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ. ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಟಿ ಟ್ವೆಂಟಿ ಸರಣಿಗೆ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಅಲಭ್ಯರಾಗಿದ್ದು, ಗಾಯದ ಸಮಸ್ಯೆಗೊಳಗಾಗಿರುವ ಸೂರ್ಯಕುಮಾರ್ ಯಾದವ್ ಮತ್ತು ದೀಪಕ್ ಚಾಹರ್ ಕೂಡ ಚಿಕಿತ್ಸೆಗೆಂದು ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಯುವ ಕ್ರಿಕೆಟಿಗರಿಗೆ ಈ ಆಟಗಾರರ ಬದಲಾಗಿ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಳ್ಳುವ ಅವಕಾಶಗಳು ಹೆಚ್ಚಿವೆ. ಹೀಗೆ ಲಂಕಾ ವಿರುದ್ಧ ಫೆಬ್ರವರಿ 24ರಂದು ನಡೆಯಲಿರುವ ಟಿ ಟ್ವೆಂಟಿ ಸರಣಿಯ ಪ್ರಥಮ ಪಂದ್ಯದಲ್ಲಿ ಯಾವ ಆಟಗಾರರು ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂಬುದರ ಕುರಿತು ಚರ್ಚೆಗಳು ಹೆಚ್ಚಾಗಿ ನಡೆಯುತ್ತಿದ್ದು, ಆರಂಭಿಕ ಆಟಗಾರರಾಗಿ ಯಾವ ಆಟಗಾರರು ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆ ಹೆಚ್ಚಾಗಿ ಕೇಳಿಬರುತ್ತಿದೆ. ಕಳೆದ ವೆಸ್ಟ್ ಇಂಡೀಸ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ ಆರಂಭಿಕ ಆಟಗಾರರ ಸ್ಥಾನವನ್ನು ಇಶಾನ್ ಕಿಶಾನ್ ಮತ್ತು ರುತುರಾಜ್ ಗಾಯಕ್ವಾಡ್ ಅವರಿಗೆ ಬಿಟ್ಟುಕೊಟ್ಟಿದ್ದರು.
ಹೀಗಾಗಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿಯೂ ಕೂಡ ಇದೇ ರೀತಿ ಇಶಾನ್ ಕಿಶನ್ ಮತ್ತು ರುತುರಾಜ್ ಗಾಯಕ್ವಾಡ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರಾ ಎಂಬ ಕುತೂಹಲವಿತ್ತು. ಈ ಕುತೂಹಲಕ್ಕೆ ಬ್ರೇಕ್ ಹಾಕಿರುವ ರೋಹಿತ್ ಶರ್ಮಾ ತಾವೇ ಶ್ರೀಲಂಕಾ ವಿರುದ್ಧದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿದ್ದೇನೆ ಎಂಬುದನ್ನು ಖಚಿತಪಡಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಇಶಾನ್ ಕಿಶನ್ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಆರಂಭಿಕ ಆಟಗಾರರಾಗಿ ಕಣಕ್ಕಿಳಿಸಿದ್ದು ಆ ಪಂದ್ಯಕ್ಕಾಗಿ ಮಾತ್ರ ಎಂದಿರುವ ರೋಹಿತ್ ಶರ್ಮಾ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಇನ್ನೂ ಸಮಯವಿದ್ದು ಸದ್ಯ ಪ್ರಯೋಗಗಳಿಗೆ ಕೈ ಹಾಕುವುದಿಲ್ಲ ಎಂದಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಋತುರಾಜ್ ಗಾಯಕ್ವಾಡ್ ಜತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿದ್ದು, ವಿರಾಟ್ ಕೊಹ್ಲಿ ಅಲಭ್ಯತೆಯ ಕಾರಣದಿಂದಾಗಿ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.
ಫೆಬ್ರವರಿ 24ರಿಂದ ಫೆಬ್ರವರಿ 27ರವರೆಗೆ ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ 3ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಪ್ರಕಟವಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಆಟಗಾರರ ಪಟ್ಟಿ ಇಲ್ಲಿದೆ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವಿ ಜಡೇಜಾ, ಯುಜುವೇಂದ್ರ ಚಾಹಲ್, ಆರ್ ಬಿಷ್ಣೋಯ್, ಕುಲದೀಪ್, ಅವೇಶ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications