ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ಪ್ರವಾಸದ ಕುರಿತು ಮಾತನಾಡುತ್ತಾ ನಿವೃತ್ತಿಯ ಸುಳಿವು ನೀಡಿದ್ರಾ ಮೊಹಮ್ಮದ್ ಶಮಿ?

I am not going to play forever says Mohammed Shami
ಶೀಘ್ರದಲ್ಲೇ ಕೊನೆಯಗುತ್ತೆ ಮೊಹಮ್ಮದ್ ಶಮಿ ಯುಗ

ಟೀಮ್ ಇಂಡಿಯಾ ಜೂನ್ ಮೊದಲನೇ ವಾರ ಇಂಗ್ಲೆಂಡ್‌ಗೆ ಹಾರಲಿದ್ದು, ಜೂನ್ 18ರಿಂದ ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ಮತ್ತು ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ.

ಈ ಸರಣಿಗಳಿಗೆ ಆಯ್ಕೆಯಾಗುವುದರ ಮೂಲಕ 6 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳುತ್ತಿದ್ದಾರೆ. ಕಳೆದ ಬಾರಿಯ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗಾಯಕ್ಕೊಳಗಾಗಿದ್ದ ಮೊಹಮ್ಮದ್ ಶಮಿ ತಂಡದಿಂದ ಹೊರಗುಳಿದಿದ್ದರು, ಇದೀಗ ಗಾಯದಿಂದ ಚೇತರಿಸಿಕೊಂಡು ತಂಡವನ್ನು ಸೇರಿಕೊಳ್ಳುತ್ತಿರುವ ಮೊಹಮ್ಮದ್ ಶಮಿ ಮುಂಬರುವ ಸರಣಿ ಮತ್ತು ಟೀಮ್ ಇಂಡಿಯಾದ ಯುವ ಆಟಗಾರರ ಕುರಿತು ಮಾತನಾಡಿದ್ದಾರೆ.

ಟೀಮ್ ಇಂಡಿಯಾ ತಂಡ ಕಳೆದ ಒಂದು ವರ್ಷದಿಂದ ಉತ್ತಮ ಪ್ರದರ್ಶನವನ್ನು ನೀಡುತ್ತಿದ್ದು ಮುಂಬರುವ ಇಂಗ್ಲೆಂಡ್ ಪ್ರವಾಸದಲ್ಲಿಯೂ ಸಹ ಉತ್ತಮ ಆಟವನ್ನು ಆಡಿ ಗೆಲುವು ಸಾಧಿಸುವ ವಿಶ್ವಾಸವನ್ನು ಮೊಹಮ್ಮದ್ ಶಮಿ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಟೀಮ್ ಇಂಡಿಯಾದ ಯುವ ಆಟಗಾರರ ಕುರಿತು ಮಾತನಾಡಿದ ಶಮಿ 'ಹೇಗಿದ್ದರೂ ನಾನು ಹೆಚ್ಚು ವರ್ಷಗಳ ಕಾಲ ಕ್ರಿಕೆಟ್ ಆಡುವುದಿಲ್ಲ ಹೀಗಾಗಿ ಯುವ ಬೌಲರ್‌ಗಳು ನನ್ನಿಂದ ಬೌಲಿಂಗ್ ಕುರಿತು ಯಾವುದೇ ಮಾಹಿತಿ ಅಥವಾ ಸಲಹೆ ಕೇಳಿದರೂ ಹಂಚಿಕೊಳ್ಳಲು ನಾನು ಸಿದ್ಧ' ಎಂದು ಹೇಳುವುದರ ಮೂಲಕ ನಿವೃತ್ತಿಯ ಮುನ್ಸೂಚನೆ ನೀಡಿದಂತಿದೆ.

Story first published: Monday, May 17, 2021, 21:15 [IST]
Other articles published on May 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X