ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೀಮ್ ಇಂಡಿಯಾಗೆ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ನೂತನ ನಾಯಕನ ಬಗ್ಗೆ ಎಚ್ಚರಿಕೆ ನೀಡಿದ ಜೋ ರೂಟ್

I am sure Ben Stokes got plans for the test match against India says Joe Root

ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಆತಿಥೇಯ ಇಂಗ್ಲೆಂಡ್ ವಿರುದ್ಧ 1 ಟೆಸ್ಟ್ ಪಂದ್ಯ, 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಸೆಣಸಾಟವನ್ನು ನಡೆಸಲಿದೆ.

ರೋಹಿತ್ ಆಡಿದ್ದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದವರಲ್ಲಿ ಈಗಲೂ ತಂಡದಲ್ಲಿರುವುದು ಓರ್ವ ಮಾತ್ರ!ರೋಹಿತ್ ಆಡಿದ್ದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದವರಲ್ಲಿ ಈಗಲೂ ತಂಡದಲ್ಲಿರುವುದು ಓರ್ವ ಮಾತ್ರ!

ಹೌದು, ಕಳೆದ ವರ್ಷ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಆಯೋಜನೆಯಾಗಿದ್ದ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಕೊರೋನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು ಹಾಗೂ ಇದೇ ಪಂದ್ಯ ಈ ಜುಲೈ 1ರಿಂದ ಆರಂಭವಾಗುತ್ತಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ಟೀಮ್ ಇಂಡಿಯಾ ಕೈವಶವಾಗಲಿದೆ, ಅಥವಾ ಇಂಗ್ಲೆಂಡ್ ಜಯ ಸಾಧಿಸಿದರೆ ಸರಣಿ 2 - 2 ಅಂತರದ ಸಮಬಲದೊಂದಿಗೆ ಅಂತ್ಯಗೊಳ್ಳಲಿದೆ.

ಇಂಗ್ಲೆಂಡ್‌ನಲ್ಲಿ ಅತಿಹೆಚ್ಚು ಏಕದಿನ ರನ್ ಬಾರಿಸಿರುವ ಭಾರತೀಯ ಆಟಗಾರರ ಟಾಪ್ 5 ಪಟ್ಟಿ; ನಂ.1 ಯಾರು?ಇಂಗ್ಲೆಂಡ್‌ನಲ್ಲಿ ಅತಿಹೆಚ್ಚು ಏಕದಿನ ರನ್ ಬಾರಿಸಿರುವ ಭಾರತೀಯ ಆಟಗಾರರ ಟಾಪ್ 5 ಪಟ್ಟಿ; ನಂ.1 ಯಾರು?

ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಈ ಟೆಸ್ಟ್ ಪಂದ್ಯ ಎರಡೂ ತಂಡಗಳಿಗೂ ಬಹುಮುಖ್ಯದ್ದಾಗಿದ್ದು, ಟೀಮ್ ಇಂಡಿಯಾ ಈಗಾಗಲೇ ಇಂಗ್ಲೆಂಡ್ ತಲುಪಿ ಅಭ್ಯಾಸವನ್ನು ನಡೆಸುತ್ತಿದೆ. ಇನ್ನು ಟೀಮ್ ಇಂಡಿಯಾಗೆ ಇಂಗ್ಲೆಂಡ್ ತಂಡವನ್ನು ಸೋಲಿಸುವುದು ಈ ಹಿಂದಿನಷ್ಟು ಸುಲಭವಲ್ಲ. ಏಕೆಂದರೆ ಇಂಗ್ಲೆಂಡ್ ಟೆಸ್ಟ್ ತಂಡ ಸಾಕಷ್ಟು ಬದಲಾವಣೆಗಳನ್ನು ಕಂಡಿದ್ದು, ಬೆನ್ ಸ್ಟೋಕ್ಸ್ ಟೆಸ್ಟ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ ಹಾಗೂ ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಬ್ರೆಂಡನ್ ಮೆಕ್ಕಲಮ್ ಇಂಗ್ಲೆಂಡ್ ತಂಡದ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಅಷ್ಟೇ ಅಲ್ಲದೇ ಇತ್ತೀಚೆಗಷ್ಟೇ ಈ ನಾಯಕ ಮತ್ತು ಕೋಚ್ ಜೋಡಿ ನ್ಯೂಜಿಲೆಂಡ್ ತಂಡಕ್ಕೆ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೈಟ್ ವಾಶ್ ಬಳಿದಿದೆ. ಈ ಕುರಿತಾಗಿ ಇದೀಗ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರ ಜೋ ರೂಟ್ ಮಾತನಾಡಿದ್ದು, ಟೀಮ್ ಇಂಡಿಯಾಗೆ ಎಚ್ಚರಿಕೆಯೊಂದನ್ನು ರವಾನಿಸಿದ್ದಾರೆ.

ಬೆನ್ ಸ್ಟೋಕ್ಸ್ ಕುರಿತು ಎಚ್ಚರಿಕೆ ನೀಡಿದ ಜೋ ರೂಟ್

ಬೆನ್ ಸ್ಟೋಕ್ಸ್ ಕುರಿತು ಎಚ್ಚರಿಕೆ ನೀಡಿದ ಜೋ ರೂಟ್

ನ್ಯೂಜಿಲೆಂಡ್ ವಿರುದ್ಧ ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ವೈಟ್ ವಾಷ್ ಸಾಧನೆ ಮಾಡಿದ ಬೆನ್ನಲ್ಲೇ ಮಾತನಾಡಿರುವ ಜೋ ರೂಟ್ ಬೆನ್ ಸ್ಟೋಕ್ಸ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ರೀತಿಯೇ ಭಾರತ ವಿರುದ್ಧದ ಟೆಸ್ಟ್ ಪಂದ್ಯ ಹಾಗೂ ನಂತರದ ಸರಣಿಗಳಿಗೆ ಈಗಾಗಲೇ ಯೋಜನೆ ರೂಪಿಸಿದ್ದಾರೆ ಎಂಬುದನ್ನು ಖಚಿತವಾಗಿ ಹೇಳಬಲ್ಲೆ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಇಂಗ್ಲೆಂಡ್ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಲು ಸಿದ್ಧವಾಗಿದೆ ಎಂದು ಭಾರತಕ್ಕೆ ಪರೋಕ್ಷವಾಗಿ ಜೋ ರೂಟ್ ಎಚ್ಚರಿಸಿದ್ದಾರೆ.

ಟೆಸ್ಟ್ ಪಂದ್ಯಕ್ಕೆ ಪ್ರಕಟವಾಗಿರುವ ಇಂಗ್ಲೆಂಡ್ ತಂಡ

ಟೆಸ್ಟ್ ಪಂದ್ಯಕ್ಕೆ ಪ್ರಕಟವಾಗಿರುವ ಇಂಗ್ಲೆಂಡ್ ತಂಡ

ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋ ( ವಿಕೆಟ್ ಕೀಪರ್‌, ಸ್ಯಾಮ್ ಬಿಲ್ಲಿಂಗ್ಸ್, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರಾಕ್, ಜಾಕ್ ಕ್ರೌಲಿ, ಬೆನ್ ಫಾಕ್ಸ್, ಜ್ಯಾಕ್ ಲೀಚ್, ಅಲೆಕ್ಸ್ ಲೀಸ್, ಕ್ರೇಗ್ ಓವರ್‌ಟನ್, ಜೇಮೀ ಓವರ್‌ಟನ್, ಮ್ಯಾಥ್ಯೂ ಪಾಟ್ಸ್, ಓಲಿ ಪೋಪ್, ಜೋ ರೂಟ್

ಭಾರತ ತಂಡ

ಭಾರತ ತಂಡ

ರೋಹಿತ್ ಶರ್ಮಾ (ನಾಯಕ) , ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆ.ಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ ಕೃಷ್ಣ

Story first published: Tuesday, June 28, 2022, 19:22 [IST]
Other articles published on Jun 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X