ಆಸ್ಟ್ರೇಲಿಯಾಗೆ ಬಂದಿದ್ದ ಪರಿಸ್ಥಿತಿಯೇ ಇಂಗ್ಲೆಂಡ್‌ಗೂ ಬರಲಿದೆ; ಎಚ್ಚರಿಕೆ ನೀಡಿದ ಭಾರತದ ಯುವ ಆಟಗಾರ

ಕಳೆದ ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿಯೇ ಆಸ್ಟ್ರೇಲಿಯಾವನ್ನು 2-1 ಅಂತರದಲ್ಲಿ ಸೋಲಿಸುವುದರ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದು ಬೀಗಿತ್ತು. ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯ ಜಯ ಸಾಧಿಸಿ ಟೆಸ್ಟ್ ಸರಣಿಯಲ್ಲಿ ಶುಭಾರಂಭವನ್ನು ಮಾಡಿತ್ತು. ಆದರೆ ನಂತರ ನಡೆದ ಎರಡನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಎದುರು ಆಸ್ಟ್ರೇಲಿಯಾ ತನ್ನ ತವರು ನೆಲದಲ್ಲಿಯೇ ಶರಣಾಯಿತು ಹಾಗೂ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು.

ಟೋಕಿಯೋ ಒಲಿಂಪಿಕ್ಸ್: ಸೆಮಿಫೈನಲ್ ಸೋತು ಕಣ್ಣೀರಿಟ್ಟಿದ್ದ ಪಿವಿ ಸಿಂಧು ಪದಕ ಗೆಲ್ಲಲು ಕಾರಣ ಆ ಒಬ್ಬ ವ್ಯಕ್ತಿ!ಟೋಕಿಯೋ ಒಲಿಂಪಿಕ್ಸ್: ಸೆಮಿಫೈನಲ್ ಸೋತು ಕಣ್ಣೀರಿಟ್ಟಿದ್ದ ಪಿವಿ ಸಿಂಧು ಪದಕ ಗೆಲ್ಲಲು ಕಾರಣ ಆ ಒಬ್ಬ ವ್ಯಕ್ತಿ!

ಹೀಗೆ ತವರು ನೆಲದಲ್ಲಿಯೇ ಟೀಮ್ ಇಂಡಿಯಾ ಎದುರು ಟೆಸ್ಟ್ ಸರಣಿಯನ್ನು ಸೋತು ಮುಖಭಂಗವನ್ನು ಅನುಭವಿಸಿದ್ದ ಆಸ್ಟ್ರೇಲಿಯಾದ ಪರಿಸ್ಥಿತಿಯೇ ಇಂಗ್ಲೆಂಡ್ ತಂಡಕ್ಕೂ ಬರಲಿದೆ ಎಂದು ಮೊಹಮ್ಮದ್ ಸಿರಾಜ್ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಳ್ಳುವುದರ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ ಮೊಹಮ್ಮದ್ ಸಿರಾಜ್ ಭಾರತ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು.

ಹಾಕಿ: ಬಲಿಷ್ಠ ಆಸ್ಟ್ರೇಲಿಯಾವನ್ನು ಸದೆಬಡಿದು ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ಭಾರತ ಮಹಿಳಾ ತಂಡ!ಹಾಕಿ: ಬಲಿಷ್ಠ ಆಸ್ಟ್ರೇಲಿಯಾವನ್ನು ಸದೆಬಡಿದು ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ಭಾರತ ಮಹಿಳಾ ತಂಡ!

ಆಗಸ್ಟ್ 4ರಿಂದ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಮೇಲುಗೈ ಸಾಧಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿರುವ ಮೊಹಮ್ಮದ್ ಸಿರಾಜ್ ಈ ಕೆಳಕಂಡ ವಿಷಯಗಳ ಕುರಿತು ಮಾತನಾಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಪ್ರಶಸ್ತಿ ಎತ್ತಿ ಹಿಡಿಯುವ ಆಸೆ

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಪ್ರಶಸ್ತಿ ಎತ್ತಿ ಹಿಡಿಯುವ ಆಸೆ

ಆಸ್ಟ್ರೇಲಿಯಾ ನೆಲದಲ್ಲಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯ ವಿರುದ್ಧದ ತಮ್ಮ ಉತ್ತಮ ಬೌಲಿಂಗ್ ಕುರಿತು ಮೆಲುಕು ಹಾಕಿದ್ದಾರೆ. ರಹಾನೆ ನಾಯಕತ್ವದಲ್ಲಿ ವಿಕೆಟ್‍ಗಳನ್ನು ಪಡೆದು ಮಿಂಚಿದ್ದ ಗಳಿಗೆಯನ್ನು ನೆನಪಿಸಿಕೊಂಡರೆ ಈಗಲೂ ರೋಮಾಂಚನವಾಗುತ್ತೆ, ಮುಂದೆ ಬರಲಿರುವ ಇಂಗ್ಲೆಂಡ್ ಸರಣಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಅದೇ ರೀತಿಯ ಪ್ರದರ್ಶನವನ್ನು ನೀಡುವುದರ ಮೂಲಕ ಸರಣಿಯನ್ನು ಗೆದ್ದು ವಿರಾಟ್ ಕೊಹ್ಲಿ ಜೊತೆ ಟ್ರೋಫಿಯನ್ನು ಎತ್ತಿ ಹಿಡಿದು ನಿಲ್ಲಲು ಕಾಯುತ್ತಿದ್ದೇನೆ ಎಂದು ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.

ಮತ್ತೆ ಜೋ ರೂಟ್ ವಿಕೆಟ್ ಪಡೆಯುವ ಯೋಜನೆಯಲ್ಲಿ ಮೊಹಮ್ಮದ್ ಸಿರಾಜ್

ಮತ್ತೆ ಜೋ ರೂಟ್ ವಿಕೆಟ್ ಪಡೆಯುವ ಯೋಜನೆಯಲ್ಲಿ ಮೊಹಮ್ಮದ್ ಸಿರಾಜ್

ಇನ್ನೂ ಮುಂದುವರಿದು ಮಾತನಾಡಿರುವ ಮೊಹಮ್ಮದ್ ಸಿರಾಜ್ ಇಂಗ್ಲೆಂಡ್ ಭಾರತ ಪ್ರವಾಸ ಕೈಗೊಂಡಿದ್ದಾಗ ತಾವು ನೀಡಿದ ಪ್ರದರ್ಶನದ ಕುರಿತು ಹಂಚಿಕೊಂಡಿದ್ದು ಜೋ ರೂಟ್ ವಿಕೆಟ್ ಪಡೆದ ಬಗ್ಗೆಯೂ ಮಾತನಾಡಿದ್ದಾರೆ. ಈ ಹಿಂದೆ ಇಂಗ್ಲೆಂಡ್ ತಂಡ ಭಾರತ ಪ್ರವಾಸವನ್ನು ಕೈಗೊಂಡಿದ್ದಾಗ ಇಂಗ್ಲೆಂಡ್ ತಂಡದ ಬೆಸ್ಟ್ ಬ್ಯಾಟ್ಸ್‌ಮನ್‌ ಜೋ ರೂಟ್ ವಿಕೆಟ್‍ನ್ನು ಪಡೆದಿದ್ದೆ, ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿಯೂ ಜೋ ರೂಟ್ ವಿಕೆಟ್ ಪಡೆಯುವುದು ನನ್ನ ಗುರಿಯಾಗಿದ್ದು ಅದರ ಜೊತೆ ಮತ್ತಷ್ಟು ಹೆಚ್ಚಿನ ವಿಕೆಟ್‍ಗಳನ್ನು ಪಡೆದು ಉತ್ತಮ ಪ್ರದರ್ಶನ ನೀಡಬೇಕೆಂದು ಮೊಹಮ್ಮದ್ ಸಿರಾಜ್ ಆಸೆ ವ್ಯಕ್ತಪಡಿಸಿದ್ದಾರೆ.

ಟೆಸ್ಟ್ ಮ್ಯಾಚ್ ಬಗ್ಗೆ ಮಾತಾಡಿದ Rishabh Pant!! | Oneindia Kannada
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸರಣಿಗಳಲ್ಲಿ ಮೊಹಮ್ಮದ್ ಸಿರಾಜ್ ಮಿಂಚು

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸರಣಿಗಳಲ್ಲಿ ಮೊಹಮ್ಮದ್ ಸಿರಾಜ್ ಮಿಂಚು

ಆಸ್ಟ್ರೇಲಿಯಾ ನೆಲದಲ್ಲಿ ನಡೆದಿದ್ದ ಆಸ್ಟ್ರೇಲಿಯ ವಿರುದ್ಧದ ಎರಡನೆ ಟೆಸ್ಟ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ್ದ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ವಿರುದ್ಧದ ಒಟ್ಟು 3 ಟೆಸ್ಟ್ ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡು 13 ವಿಕೆಟ್‍ಗಳನ್ನು ಪಡೆದು ಮಿಂಚಿದ್ದರು. ಹಾಗೂ ಇಂಗ್ಲೆಂಡ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದಿದ್ದ ಮೊಹಮ್ಮದ್ ಸಿರಾಜ್ 3 ವಿಕೆಟ್‍ಗಳನ್ನು ಪಡೆದಿದ್ದರು.

For Quick Alerts
ALLOW NOTIFICATIONS
For Daily Alerts
Story first published: Monday, August 2, 2021, 15:11 [IST]
Other articles published on Aug 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X