ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2023: ಬೇರೆ ತಂಡ ಸೇರಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಾರೆ ಎಂದ ಕೀರನ್ ಪೊಲಾರ್ಡ್

I Cant Play Against Mumbai Indians : Kieron Pollard Will Continue As A Batting Coach For MI

ವೆಸ್ಟ್ ಇಂಡೀಸ್‌ನ ದಿಗ್ಗಜ ಕ್ರಿಕೆಟರ್ ಕೀರನ್ ಪೊಲಾರ್ಡ್ ಐಪಿಎಲ್‌ನಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಕಳೆದ 13 ವರ್ಷಗಳಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರನಾಗಿದ್ದರು. ಒಂದೇ ತಂಡದ ಪರವಾಗಿ ಆಡಿರುವ ಸಾಧನೆ ಪೊಲಾರ್ಡ್‌ ಅವರದ್ದಾಗಿದೆ.

ಮುಂಬೈ ಇಂಡಿಯನ್ಸ್ ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿದ್ದು, ಎರಡು ಬಾರಿ ಚಾಂಪಿಯನ್ಸ್ ಲೀಗ್‌ನಲ್ಲಿ ಕಪ್ ಗೆದ್ದಿದೆ. ತಂಡದ ಪ್ರತಿ ಸೋಲು ಗೆಲುವಿನಲ್ಲಿ ಪೊಲಾರ್ಡ್ ತಮ್ಮದೇ ಕೊಡುಗೆ ನೀಡಿದ್ದಾರೆ. ಆದರೆ, 2022ರ ಐಪಿಎಲ್ ಆವೃತ್ತಿಯಲ್ಲಿ ಪೊಲಾರ್ಡ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು.

ಐಪಿಎಲ್‌ನಿಂದ ನಿವೃತ್ತಿ ಘೋಷಣೆ ಮಾಡಿದ ವೆಸ್ಟ್ ಇಂಡೀಸ್ ದಿಗ್ಗಜ ಕೀರನ್ ಪೊಲಾರ್ಡ್ಐಪಿಎಲ್‌ನಿಂದ ನಿವೃತ್ತಿ ಘೋಷಣೆ ಮಾಡಿದ ವೆಸ್ಟ್ ಇಂಡೀಸ್ ದಿಗ್ಗಜ ಕೀರನ್ ಪೊಲಾರ್ಡ್

ತಮ್ಮ ನಿವೃತ್ತಿ ಬಗ್ಗೆ ಟ್ವಿಟರ್ ನಲ್ಲಿ ಸುದೀರ್ಘವಾದ ಟಿಪ್ಪಣಿಯನ್ನು ಹಂಚಿಕೊಂಡಿದ್ದಾರೆ. ಟಿಪ್ಪಣಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೇಲೆ ತಮಗಿರುವ ಅಭಿಮಾನವನ್ನು ತೋರಿಸಿದ್ದಾರೆ.

2023ರ ಐಪಿಎಲ್‌ಗೆ ಮುನ್ನ ಮುಂಬೈ ಇಂಡಿಯನ್ಸ್ ತಂಡ ಪೊಲಾರ್ಡ್‌ರನ್ನು ಬಿಡುಗಡೆ ಮಾಡಲು ಯೋಚಿಸುತ್ತಿದೆ ಎನ್ನುವಾಗಲೇ ಪೊಲಾರ್ಡ್ ಈ ನಿರ್ಧಾರ ಪ್ರಕಟಿಸಿದ್ದಾರೆ. ತಾನು ಮುಂಬೈ ಇಂಡಿಯನ್ಸ್ ಬಿಟ್ಟು ಬೇರೆ ತಂಡದಲ್ಲಿ ಸೇರಿಕೊಂಡು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧವೇ ಆಡುವುದನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬೇರೆ ತಂಡಕ್ಕಾಗಿ ಆಡಲಾರೆ

ಬೇರೆ ತಂಡಕ್ಕಾಗಿ ಆಡಲಾರೆ

"ನಾನು ಇನ್ನೂ ಕೆಲವು ವರ್ಷಗಳ ಕಾಲ ಕ್ರಿಕೆಟ್ ಆಡುವುದನ್ನು ಮುಂದುವರೆಸಬೇಕು ಎಂದು ಉದ್ದೇಶಿಸಿದ್ದರಿಂದ ಇದು ಸುಲಭವಾದ ನಿರ್ಧಾರವಾಗಿರಲಿಲ್ಲ. ಆದರೆ, ಮುಂಬೈ ಇಂಡಿಯನ್ಸ್ ಜೊತೆ ಚರ್ಚೆ ಮಾಡಿದ ಬಳಿಕ, ನಾನು ನನ್ನ ಐಪಿಎಲ್ ವೃತ್ತಿಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದೆ. ಮುಂಬೈ ಇಂಡಿಯನ್ಸ್ ಬದಲಾವಣೆಯನ್ನು ಬಯಸುತ್ತಿದೆ ಎನ್ನುವುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ, ಮುಂಬೈ ಇಂಡಿಯನ್ಸ್‌ಗಾಗಿ ನಾನು ಆಡದಿದ್ದರೆ, ಇನ್ಯಾವ ತಂಡಕ್ಕಾಗಿಯೂ ನಾನು ಆಡಲಾರೆ. ನಾನು ಯಾವಾಗಲೂ ಮುಂಬೈ ಇಂಡಿಯನ್ಸ್ ಆಗಿರಲು ಇಷ್ಟಪಡುತ್ತೇನೆ" ಎಂದು ಹೇಳಿದ್ದಾರೆ.

ಜಗತ್ತಿನ ಶ್ರೇಷ್ಠ ಕ್ರಿಕೆಟಿಗರ ಜೊತೆ ಆಡಲು ಅವಕಾಶ ಮಾಡಿಕೊಟ್ಟ ಮುಂಬೈ ಇಂಡಿಯನ್ಸ್ ತಂಡದ ಮಾಲೀಕರು, ತರಬೇತುದಾರರು, ತಂಡದ ಸದಸ್ಯರು, ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ತರಬೇತುದಾರ ರಾಬಿನ್ ಶರ್ಮಾ ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

IPL 2023: ಈ ಆಟಗಾರನನ್ನು ಬಿಡುಗಡೆ ಮಾಡಿ ಮತ್ತೆ ಹರಾಜಿನಲ್ಲಿ ಖರೀದಿಸಿ: ಪಂಜಾಬ್ ತಂಡಕ್ಕೆ ಟಾಮ್ ಮೂಡಿ ಈ ಸಲಹೆ ಕೊಟ್ಟಿದ್ಯಾಕೆ?

ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಕೋಚ್ ಆಗಿ ಕೆಲಸ

ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಕೋಚ್ ಆಗಿ ಕೆಲಸ

"ಇದು ಮುಂಬೈ ಇಂಡಿಯನ್ಸ್‌ಗೆ ಭಾವನಾತ್ಮಕ ವಿದಾಯವಲ್ಲ. ನಾನು ಐಪಿಎಲ್‌ ಮತ್ತು ಎಂಐ ಎಮಿರೇಟ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಕೆಲಸ ಮಾಡುತ್ತೇನೆ" ಎಂದು ಹೇಳಿದ್ದಾರೆ.

ಆಟಗಾರನಾಗಿ ನಿವೃತ್ತಿ ಹೊಂದಿದ್ದರೂ ಅವರು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಮುಂದುವರೆಯಲಿದ್ದಾರೆ. ಹಾಗೆಯೇ, ಮುಂಬೈ ಇಂಡಿಯನ್ಸ್ ಪ್ರಾಂಚೈಸಿಯ ಯುಎಇ ಟಿ20 ಅಂತಾರಾಷ್ಟ್ರೀಯ ಲೀಗ್‌ನ ಎಂಐ ಎಮಿರೇಟ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಕೆಲಸ ಮಾಡಲಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಪೊಲಾರ್ಡ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಪೊಲಾರ್ಡ್

ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಪೊಲಾರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ನಿವೃತ್ತಿಗೆ ಮುನ್ನ ಪೊಲಾರ್ಡ್ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು 3-2 ಅಂತರದಲ್ಲಿ ಗೆದ್ದಿತ್ತು.

ಪೊಲಾರ್ಡ್ 123 ಏಕದಿನ ಮತ್ತು 101 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದಾರೆ. ಒಟ್ಟಾರೆ 4,275 ರನ್ ಗಳಿಸಿದ್ದು, 97 ವಿಕೆಟ್ ಪಡೆದಿದ್ದಾರೆ. 2012ರಲ್ಲಿ ಟಿ20 ವಿಶ್ವಕಪ್‌ ಗೆದ್ದ ವೆಸ್ಟ್ ಇಂಡೀಸ್ ತಂಡದಲ್ಲಿ ಪೊಲಾರ್ಡ್ ಕೂಡ ಇದ್ದರು.

Story first published: Tuesday, November 15, 2022, 16:02 [IST]
Other articles published on Nov 15, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X