ರವಿಶಾಸ್ತ್ರಿ ನಂತರ ಯಾರು ಟೀಮ್ ಇಂಡಿಯಾ ಕೋಚ್ ಆಗುತ್ತಿದ್ದಾರೋ ಗೊತ್ತಿಲ್ಲ!: ವಿರಾಟ್ ಕೊಹ್ಲಿ

ಕಳೆದ ಕೆಲ ದಿನಗಳಿಂದ ಕ್ರಿಕೆಟ್ ಜಗತ್ತಿನಲ್ಲಿ ಸಾಕಷ್ಟು ದೊಡ್ಡ ಮಟ್ಟದ ಚರ್ಚೆಗಳಿಗೆ ಮತ್ತು ಸುದ್ದಿಗಳಿಗೆ ಕಾರಣವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಅಕ್ಟೋಬರ್ 15ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಫೈನಲ್ ಪಂದ್ಯದ ಮೂಲಕ ತೆರೆಬಿದ್ದಿದೆ. ಈ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 27 ರನ್‌ಗಳ ಭರ್ಜರಿ ಜಯವನ್ನು ಸಾಧಿಸುವುದರ ಮೂಲಕ ನಾಲ್ಕನೇ ಐಪಿಎಲ್ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಐಪಿಎಲ್ 2021: ಯಾರು ಯಾವ ಪ್ರಶಸ್ತಿ ಗೆದ್ದಿದ್ದಾರೆ?; ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿಐಪಿಎಲ್ 2021: ಯಾರು ಯಾವ ಪ್ರಶಸ್ತಿ ಗೆದ್ದಿದ್ದಾರೆ?; ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

ಹೀಗೆ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಯುಎಇಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದ ಮೂಲಕ ಮುಕ್ತಾಯಗೊಂಡಿದ್ದು, ಇದೇ ಯುಎಇ ನೆಲದಲ್ಲಿ ಅಕ್ಟೋಬರ್ 17ರ ಭಾನುವಾರದಿಂದ ಪ್ರತಿಷ್ಠಿತ ಹಾಗೂ ಬಹು ನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಹೀಗೆ ಬಹು ನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವ ಮುನ್ನ ಅಕ್ಟೋಬರ್ 16ರ ಶನಿವಾರದಂದು ಐಸಿಸಿ ನಾಯಕರ ಕರೆ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ವಿವಿಧ ತಂಡಗಳ ನಾಯಕರು ಟೂರ್ನಿಯ ಕುರಿತಾಗಿ ಮಾತನಾಡಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ತಮ್ಮ ತಂಡದ ವಿವಿಧ ವಿಷಯಗಳ ಕುರಿತು ಪ್ರತಿಕ್ರಿಯಿಸಿದ್ದಾರೆ.

ಐಪಿಎಲ್ ಟ್ರೋಫಿ ಗೆದ್ದ ಸಿಎಸ್‌ಕೆಗೆ 20 ಕೋಟಿ; ಸೋತ ಕೆಕೆಆರ್ ಮತ್ತು ಆರ್‌ಸಿಬಿಗೆ ಸಿಕ್ಕ ಹಣವೆಷ್ಟು ಗೊತ್ತಾ?ಐಪಿಎಲ್ ಟ್ರೋಫಿ ಗೆದ್ದ ಸಿಎಸ್‌ಕೆಗೆ 20 ಕೋಟಿ; ಸೋತ ಕೆಕೆಆರ್ ಮತ್ತು ಆರ್‌ಸಿಬಿಗೆ ಸಿಕ್ಕ ಹಣವೆಷ್ಟು ಗೊತ್ತಾ?

ಈ ಸಂದರ್ಭದಲ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ಭಾರತ ತಂಡಕ್ಕೆ ನೂತನ ತರಬೇತುದಾರರ ನೇಮಕವಾಗುವ ವಿಚಾರವಾಗಿ ಪ್ರಶ್ನೆ ಎದುರಾದಾಗ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ. ಹೌದು, 2017ರಿಂದ ಟೀಮ್ ಇಂಡಿಯಾ ಹೆಡ್ ಕೋಚ್ ಆಗಿ ಭಾರತದ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಕಾರ್ಯನಿರ್ವಹಿಸುತ್ತಿದ್ದು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಹೀಗೆ ರವಿಶಾಸ್ತ್ರಿ ಹೆಡ್ ಕೋಚ್ ಸ್ಥಾನದಿಂದ ಕೆಳಗಿಳಿದ ನಂತರ ಆ ಸ್ಥಾನಕ್ಕೆ ಭಾರತದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ನೇಮಕವಾಗಲಿದ್ದಾರೆ ಎನ್ನುವ ಸುದ್ದಿ ದೊಡ್ಡಮಟ್ಟದಲ್ಲಿ ಹರಿದಾಡಿದೆ. ಈ ವಿಷಯದ ಕುರಿತಾಗಿಯೂ ಮಾತನಾಡಿರುವ ವಿರಾಟ್ ಕೊಹ್ಲಿ ಈ ಕೆಳಕಂಡಂತೆ ಪ್ರತಿಕ್ರಿಯಿಸಿದ್ದಾರೆ.

ಮುಂದಿನ ಕೋಚ್ ಯಾರು ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ

ಮುಂದಿನ ಕೋಚ್ ಯಾರು ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ರವಿಶಾಸ್ತ್ರಿ ಭಾರತ ತಂಡದ ಹೆಡ್ ಕೋಚ್ ಸ್ಥಾನದಿಂದ ಕೆಳಗಿಳಿಯಲಿದ್ದು ರಾಹುಲ್ ದ್ರಾವಿಡ್ ನೂತನ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮಾತ್ರ ಈ ಕುರಿತಾಗಿ ನಮಗೆ ಯಾವುದೇ ಮಾಹಿತಿ ಇಲ್ಲ, ಇದರ ಕುರಿತಾಗಿ ಯಾರೊಂದಿಗೂ ನಾನು ಚರ್ಚೆಯನ್ನು ಕೂಡ ಮಾಡಿಲ್ಲ ಎಂದು ಹೇಳಿಕೆ ನೀಡುವುದರ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿ ಗೆಲ್ಲುವುದು ನಮ್ಮ ಗುರಿ

ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿ ಗೆಲ್ಲುವುದು ನಮ್ಮ ಗುರಿ

'ಟೀಮ್ ಇಂಡಿಯಾದ ಮುಂದಿನ ಹೆಡ್ ಕೋಚ್ ಯಾರಾಗಲಿದ್ದಾರೆ ಎನ್ನುವುದರ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಆದರೆ ಸದ್ಯ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ಸ್ ಆಗಿ ಹೊರಹೊಮ್ಮುವ ಮೂಲಕ ಟ್ರೋಫಿಯನ್ನು ನಮ್ಮದಾಗಿಸಿಕೊಳ್ಳುವುದು ನಮ್ಮ ತಂಡದ ಗುರಿ' ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಟೀಮ್ ಇಂಡಿಯಾ ಜೊತೆ ಅಭ್ಯಾಸದಲ್ಲಿ ಕಾಣಿಸಿಕೊಂಡ ಧೋನಿ | Oneindia Kannada
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಮೊದಲ ಪಂದ್ಯ ಯಾವಾಗ?

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಮೊದಲ ಪಂದ್ಯ ಯಾವಾಗ?

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಅಕ್ಟೋಬರ್ 17ರ ಭಾನುವಾರದಂದೇ ಆರಂಭವಾಗುತ್ತಿದೆ. ಆದರೆ ಟೀಮ್ ಇಂಡಿಯಾದ ಮೊದಲ ಪಂದ್ಯ ಅಕ್ಟೋಬರ್ 24ರ ಭಾನುವಾರದಂದು ನಿಗದಿಯಾಗಿದ್ದು ತನ್ನ ಬದ್ಧ ಎದುರಾಳಿಯಾದ ಪಾಕಿಸ್ತಾನದ ವಿರುದ್ಧ ಭಾರತ ತಂಡ ಸೆಣಸಾಡಲಿದೆ.

For Quick Alerts
ALLOW NOTIFICATIONS
For Daily Alerts
Story first published: Saturday, October 16, 2021, 23:46 [IST]
Other articles published on Oct 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X