
ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ನಾಯಕ ರೋಹಿತ್ ಶರ್ಮಾರಿಂದ ತನಗೆ ಸಿಕ್ಕಿರುವ ಹೊಗಳಿಕೆಯ ಮಾತಿಗೆ ಏನು ಹೇಳಬೇಕೆಂದು ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ. ಇತ್ತೀಚೆಗೆ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಟೀಂ ಇಂಡಿಯಾದ ಲೆಜೆಂಡರಿ ವೇಗಿ ಕಪಿಲ್ ದೇವ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಈ ದಾಖಲೆಯ ಬಳಿಕ ನಾಯಕ ರೋಹಿತ್ ಶರ್ಮಾ ಅನುಭವಿ ಸ್ಪಿನ್ನರ್ ಅಶ್ವಿನ್ ಅವರನ್ನು ಹೊಗಳಿದ್ದಾರೆ. ಟೀಂ ಇಂಡಿಯಾದ ಸಾರ್ವಕಾಲಿಕ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರು ಎಂದು ಅಶ್ವಿನ್ರನ್ನ ಶ್ಲಾಘಿಸಿದ್ದಾರೆ. ರೋಹಿತ್ ಶರ್ಮಾ ಹೊಗಳಿಕೆಗೆ ಪ್ರತಿಕ್ರಿಯಿಸಿರುವ ಅಶ್ವಿನ್, ಯಾರಾದರೂ ಹೊಗಳಿದರೆ ಅದನ್ನು ಲಘುವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಕ್ಯಾಪ್ಟನ್ ಅವರ ಪದಗಳಿಗೆ ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿದಿಲ್ಲ ಎಂದು ಹೇಳಿದರು. ಇಂದು ಬೆಳಗ್ಗೆಯೂ ರೋಹಿತ್‌ಗೆ ಏನು ಹೇಳಬೇಕೆಂದು ತಿಳಿಯಲಿಲ್ಲ , ನಿಮ್ಮ ಮನಸ್ಸು(ರೋಹಿತ್) ತುಂಬಾ ಚೆನ್ನಾಗಿದೆ ಎಂದು ಅಶ್ವಿನ್ ಹೇಳಿದ್ದಾರೆ.
ಅನುಭವಿ ಆಲ್‌ರೌಂಡರ್ ಕಪಿಲ್ ದೇವ್ ಅವರ ದಾಖಲೆ ಮುರಿದ ನಂತರ ಅವರು ನನ್ನ ಮನೆಗೆ ಹೂಗುಚ್ಛವನ್ನು ಕಳುಹಿಸಿದ್ದಕ್ಕಾಗಿ ಅಶ್ವಿನ್ ಅಭಿನಂದಿಸಿದರು. ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ರವಿಚಂದ್ರನ್ ಅಶ್ವಿನ್ ಎರಡು ಇನ್ನಿಂಗ್ಸ್‌ಗಳಲ್ಲಿ 6 ವಿಕೆಟ್ ಪಡೆದರು. ಇದರೊಂದಿಗೆ ಭಾರತದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಕಪಿಲ್ ದೇವ್ ಅವರ ದಾಖಲೆಯನ್ನು ಅಶ್ವಿನ್ ಹಿಂದಿಕ್ಕಿದರು.
ಕಪಿಲ್ ದೇವ್ 434 ವಿಕೆಟ್ ಪಡೆದಿದ್ದಾರೆ. ಅಶ್ವಿನ್ ಟೆಸ್ಟ್‌ನಲ್ಲಿ 436 ವಿಕೆಟ್ ಗಳಿಂದ ಕಪಿಲ್ ದೇವ್ ಅವರನ್ನು ಹಿಂದಿಕ್ಕಿದ್ದಾರೆ. ಇದರ ಫಲವಾಗಿ ಅಶ್ವಿನ್ ಟೆಸ್ಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎನಿಸಿಕೊಂಡರು. ಟೀಂ ಇಂಡಿಯಾ ದಿಗ್ಗಜ ಅನಿಲ್ ಕುಂಬ್ಳೆ 619 ವಿಕೆಟ್‌ಗಳೊಂದಿಗೆ ಭಾರತ ಪರ ಅಗ್ರಸ್ಥಾನದಲ್ಲಿದ್ದಾರೆ ಮತ್ತು ಒಟ್ಟಾರೆ ನಾಲ್ಕನೇ ಸ್ಥಾನದಲ್ಲಿದ್ದಾರೆ.
2ನೇ ಟೆಸ್ಟ್‌ಗೆ ಟೀಂ ಇಂಡಿಯಾ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಪ್ರಿಯಾಂಕ್ ಪಾಂಚಾಲ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಭ್ ಪಂತ್ (ವಿಕೆಟ್-ಕೀಪರ್), ಕೆ.ಎಸ್ ಭರತ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಸೌರಭ್ ಕುಮಾರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ)