ಭಾರತ vs ಇಂಗ್ಲೆಂಡ್: ಅಶ್ವಿನ್ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ ಎಂದ ಮಾಜಿ ಕ್ರಿಕೆಟಿಗ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಪಂದ್ಯದಲ್ಲಿ ವರುಣನ ಆಗಮನವಾದ ಕಾರಣದಿಂದ ಯಾವುದೇ ಫಲಿತಾಂಶ ಬಾರದೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಹಾಗೂ ಭಾರತ ಮತ್ತು ಇಂಗ್ಲೆಂಡ್ ನಡುವೆ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು 151 ರನ್‌ಗಳ ಅಂತರದಲ್ಲಿ ಸೋಲಿಸುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗೆಲುವಿನ ಖಾತೆ ತೆರೆಯಿತು.
ಹೀಗೆ ಭಾರತ ತಂಡ ಲಾರ್ಡ್ಸ್ ಅಂಗಳದಲ್ಲಿ ಇಂಗ್ಲೆಂಡ್ ವಿರುದ್ಧ ಜಯ ಸಾಧಿಸಿದ್ದರ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ ಲಾರ್ಡ್ಸ್ ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ತೆಗೆದುಕೊಂಡ ಒಂದು ನಿರ್ಧಾರ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಬೇಸರವನ್ನು ಉಂಟು ಮಾಡಿತ್ತು. ಹೌದು ಮೊದಲನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ನೀಡದೇ ತಂಡದಿಂದ ಕೈಬಿಡಲಾಗಿದ್ದ ರವಿಚಂದ್ರನ್ ಅಶ್ವಿನ್‌ಗೆ ಎರಡನೇ ಪಂದ್ಯದಲ್ಲಿಯೂ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಅವಕಾಶ ನೀಡದೇ ಹೊರಗೆ ಇಟ್ಟಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಲಾರ್ಡ್ಸ್ ಪಂದ್ಯ ಗೆದ್ದ ನಂತರವೂ ಸಹ ರವಿಚಂದ್ರನ್ ಅಶ್ವಿನ್‌ಗೆ ಸ್ಥಾನ ನೀಡದೇ ಇರುವುದರ ಕುರಿತು ಕ್ರೀಡಾಭಿಮಾನಿಗಳಲ್ಲಿ ಬೇಸರವೇನೋ ಕಡಿಮೆಯಾಗಿಲ್ಲ, ಇಂಗ್ಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಾದರೂ ರವಿಚಂದ್ರನ್ ಅಶ್ವಿನ್‌ಗೆ ಆಡುವ ಅವಕಾಶ ನೀಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ.
ಇದೀಗ ರವಿಚಂದ್ರನ್ ಅಶ್ವಿನ್‌ಗೆ ತಂಡದಲ್ಲಿ ಅವಕಾಶ ನೀಡದೇ ಇರುವುದರ ಕುರಿತು ಭಾರತದ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಪ್ರತಿಕ್ರಿಯಿಸಿದ್ದು ರವಿಚಂದ್ರನ್ ಅಶ್ವಿನ್ ಪರಿಸ್ಥಿತಿಗೆ ಬೇಸರ ವ್ಯಕ್ತಪಡಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ
ಹೀಗೆ ರವಿಚಂದ್ರನ್ ಅಶ್ವಿನ್‌ಗೆ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಅವಕಾಶ ನೀಡದೇ ತಂಡದಿಂದ ಹೊರಗಿಟ್ಟಿರುವುದರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ 'ಓರ್ವ ಅತ್ಯುತ್ತಮ ಬೌಲರ್ ಆಗಿ ಈ ಹಿಂದಿನ ಟೆಸ್ಟ್ ಪಂದ್ಯಗಳಲ್ಲಿ ಹೆಚ್ಚಿನ ವಿಕೆಟ್‍ಗಳನ್ನು ಪಡೆದುಕೊಂಡರೂ ಸಹ ತಂಡದಲ್ಲಿ ಸ್ಥಾನ ಪಡೆದುಕೊಳ್ಳದೇ ಬೆಂಚ್ ಕಾಯುತ್ತಿರುವ ರವಿಚಂದ್ರನ್ ಅಶ್ವಿನ್ ಪರಿಸ್ಥಿತಿಯನ್ನು ನೋಡಿದರೆ ಅಯ್ಯೋ ಎನಿಸುತ್ತದೆ' ಎಂದು ಬೇಸರದ ಮಾತುಗಳನ್ನಾಡಿದ್ದಾರೆ.

ಬುದ್ಧಿವಂತಿಕೆಯಿಂದ ವಿಕೆಟ್ ಪಡೆಯಬಲ್ಲ ಬೌಲರ್ ಅಶ್ವಿನ್
ರವಿಚಂದ್ರನ್ ಅಶ್ವಿನ್ ಸಾಮಾನ್ಯ ಬೌಲರ್ ಅಲ್ಲ, ಎಂತಹ ಕಠಿಣ ಪರಿಸ್ಥಿತಿಯಲ್ಲಿಯೂ ತನ್ನ ಚಾಣಾಕ್ಷತನದಿಂದ ವಿಕೆಟ್ ಕಬಳಿಸಬಲ್ಲ ಅತ್ಯದ್ಭುತ ಕಲೆ ಇರುವ ಬೌಲರ್ ಎಂದು ಲಕ್ಷ್ಮಣ್ ಶಿವರಾಮಕೃಷ್ಣನ್ ರವಿಚಂದ್ರನ್ ಅಶ್ವಿನ್ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಟೆಸ್ಟ್ ಕ್ರಿಕೆಟ್‍ನಲ್ಲಿ ವಿಕೆಟ್ ಪಡೆಯುವುದು ಇತರೆ ಮಾದರಿಯ ಕ್ರಿಕೆಟ್‍ನಲ್ಲಿ ವಿಕೆಟ್ ಪಡೆದಷ್ಟು ಸುಲಭವಲ್ಲ, ಹೀಗಾಗಿ ರವಿಚಂದ್ರನ್ ಅಶ್ವಿನ್ ಚಾಣಾಕ್ಷತನದ ಆಟ ಮುಂದಿನ ಪಂದ್ಯಗಳಲ್ಲಿ ಅವರಿಗೆ ಅವಕಾಶ ತಂದುಕೊಡಲಿದೆ ಎಂಬ ನಂಬಿಕೆ ಇದೆ ಎಂದು ಲಕ್ಷ್ಮಣ್ ಶಿವರಾಮಕೃಷ್ಣನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರವಿಚಂದ್ರನ್ ಅಶ್ವಿನ್‌ಗೆ ಅವಕಾಶ ಸಿಗದಿರಲು ಅಸಲಿ ಕಾರಣವಿದು
ಲಾರ್ಡ್ಸ್ ಪಂದ್ಯ ಮುಗಿದ ನಂತರ ಮಾತನಾಡಿದ ರವಿಚಂದ್ರನ್ ಅಶ್ವಿನ್ ತಮಗೆ ತಂಡದಲ್ಲಿ ಸ್ಥಾನ ಸಿಗದಿರಲು ಕಾರಣವೇನೆಂಬುದನ್ನು ಸ್ವತಃ ಅವರೇ ಹಂಚಿಕೊಂಡಿದ್ದರು. ಲಾರ್ಡ್ಸ್ ಪಂದ್ಯ ಆರಂಭವಾಗುವ ಮುನ್ನ ಯಾವುದೇ ರೀತಿಯ ಮಳೆಯ ವಾತಾವರಣ ಇಲ್ಲದೇ ಇರುವ ಕಾರಣ ರವಿಚಂದ್ರನ್ ಅಶ್ವಿನ್‌ಗೆ ಪಂದ್ಯವನ್ನಾಡಲು ಸಿದ್ಧನಿರು ಎಂದು ವಿರಾಟ್ ಕೊಹ್ಲಿ ಹೇಳಿದ್ದರಂತೆ. ಆದರೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಪಂದ್ಯ ಆರಂಭವಾಗಲಿದೆ ಎನ್ನುವಾಗ ಮೋಡ ಕವಿದ ವಾತಾವರಣ ನಿರ್ಮಾಣವಾದ್ದರಿಂದ ರವಿಚಂದ್ರನ್ ಅಶ್ವಿನ್‌ಗೆ ಸ್ಥಾನ ನೀಡದೆ ವೇಗಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಯಿತು. ಹೀಗೆ ಮಳೆಯ ಕಾರಣದಿಂದಾಗಿ ತನಗೆ ಅವಕಾಶ ಸಿಗಲಿಲ್ಲ ಅಷ್ಟೇ ಎಂದು ರವಿಚಂದ್ರನ್ ಅಶ್ವಿನ್ ಸ್ಪಷ್ಟನೆ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications