ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಎಬಿಡಿ ನಿವೃತ್ತಿ: ನಾನು ಅರ್ಧ ಭಾರತೀಯನಾಗಿದ್ದೇನೆ ಎಂದ ಎಬಿ ಡಿವಿಲಿಯರ್ಸ್

I have become half Indian now says Ab De Villiers

ಮಿಸ್ಟರ್ 360, ಆಪತ್ಬಾಂಧವ, ಏಲಿಯನ್ ಎಂದು ಖ್ಯಾತಿಯನ್ನು ಪಡೆದಿದ್ದ ಕ್ರಿಕೆಟ್ ಜಗತ್ತು ಕಂಡ ಅತ್ಯದ್ಭುತ ಪ್ರತಿಭೆ ಎಬಿ ಡಿವಿಲಿಯರ್ಸ್ ಇಂದು ( ನವೆಂಬರ್‌ 19 ) ಎಲ್ಲಾ ಮಾದರಿಯ ಕ್ರಿಕೆಟ್‌ಗೂ ನಿವೃತ್ತಿಯನ್ನು ಘೋಷಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಯ ಮೂಲಕ ನಿವೃತ್ತಿಯ ನಿರ್ಧಾರವನ್ನು ಎಬಿ ಡಿವಿಲಿಯರ್ಸ್ ತಿಳಿಸಿದ್ದಾರೆ.

ಗಪ್ಟಿಲ್‌ರನ್ನು ಗುರಾಯಿಸಿದ ದೀಪಕ್ ಚಹರ್‌ಗೆ ಸಿಕ್ಕಿತು 1 ಲಕ್ಷ; ಕಾರಣವೇನು ಗೊತ್ತಾ?ಗಪ್ಟಿಲ್‌ರನ್ನು ಗುರಾಯಿಸಿದ ದೀಪಕ್ ಚಹರ್‌ಗೆ ಸಿಕ್ಕಿತು 1 ಲಕ್ಷ; ಕಾರಣವೇನು ಗೊತ್ತಾ?

"ಬಾಲ್ಯದಲ್ಲಿ ಸೋದರರ ಜೊತೆಗೆ ಕ್ರಿಕೆಟ್ ಆಡಲು ಆರಂಭಿಸಿದಾಗಿನಿಂದ ಶುದ್ಧ ಆನಂದ ಹಾಗೂ ಉತ್ಸಾಹದಿಂದಲೇ ಈವರೆಗೂ ಆಡಿದ್ದೇನೆ. ಈಗ 37ನೇ ವಯಸ್ಸಿನಲ್ಲಿ ನನಗೆ ತುಂಬಾ ಪ್ರಖರವಾಗಿ ಬೆಳಗಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಈ ಸತ್ಯವನ್ನು ನಾನು ಒಪ್ಪಿಕೊಳ್ಳಬೇಕಿದೆ. ಇದು ತಕ್ಷಣದ ನಿರ್ಧಾರದಂತೆ ಅನಿಸಿದರೂ ಈ ನಿರ್ಧಾರವನ್ನು ತೆಗೆದುಕೊಳ್ಳಲು ನಾನು ಸಮಯ ತೆಗೆದುಕೊಂಡಿದ್ದೇನೆ. ಕ್ರಿಕೆಟ್ ನನ್ನ ಮೇಲೆ ಅಸಾಧಾರಣವಾದ ಪ್ರಭಾವ ಬೀರಿದೆ" ಎಂದು ಎಬಿ ಡಿವಿಲಿಯರ್ಸ್ ಟ್ವಿಟ್ಟರ್‌ನಲ್ಲಿ ತಮ್ಮ ನಿವೃತ್ತಿಯನ್ನು ಘೋಷಿಸುತ್ತಾ ಬರೆದುಕೊಂಡಿದ್ದಾರೆ.

ಹೀಗೆ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ನಿವೃತ್ತಿಯನ್ನು ಘೋಷಿಸಿರುವ ಎಬಿ ಡಿವಿಲಿಯರ್ಸ್ ಅವರ ವಿಡಿಯೋವೊಂದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ. ಈ ಟ್ವೀಟ್ ಒಂದರಲ್ಲಿ ಮಾತನಾಡಿರುವ ಎಬಿ ಡಿವಿಲಿಯರ್ಸ್ "ನನ್ನ ಜೀವನ ಪೂರ್ತಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗನಾಗಿರುತ್ತಾನೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರತಿಯೊಬ್ಬ ಸದಸ್ಯರೂ ಕೂಡ ನನ್ನ ಕುಟುಂಬದ ಸದಸ್ಯರಾಗಿದ್ದಾರೆ. ಜೀವನದಲ್ಲಿ ಹಲವಾರು ವ್ಯಕ್ತಿಗಳು ಬರುತ್ತಾರೆ ಮತ್ತು ಹೋಗುತ್ತಾರೆ ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ನಾವು ಪರಸ್ಪರ ಹೊಂದಿರುವ ಪ್ರೀತಿ ಎಂದೆಂದಿಗೂ ಶಾಶ್ವತ. ನಾನೀಗ ಅರ್ಧ ಭಾರತೀಯನಾಗಿದ್ದೇನೆ ಮತ್ತು ಅದಕ್ಕಾಗಿ ನಾನು ತುಂಬಾ ಗೌರವಪಡುತ್ತೇನೆ" ಎಂದು ಹೇಳಿಕೆ ನೀಡಿದ್ದಾರೆ.

ಕೊಹ್ಲಿ ನನಗಾಗಿ 3ನೇ ಕ್ರಮಾಂಕ ಬಿಟ್ಟರು; ಕಿವೀಸ್ ವಿರುದ್ಧದ ಉತ್ತಮ ಪ್ರದರ್ಶನದ ನಂತರ ಯಾದವ್ ಪ್ರತಿಕ್ರಿಯೆಕೊಹ್ಲಿ ನನಗಾಗಿ 3ನೇ ಕ್ರಮಾಂಕ ಬಿಟ್ಟರು; ಕಿವೀಸ್ ವಿರುದ್ಧದ ಉತ್ತಮ ಪ್ರದರ್ಶನದ ನಂತರ ಯಾದವ್ ಪ್ರತಿಕ್ರಿಯೆ

ಅಂತರರಾಷ್ಟ್ರೀಯ ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕನಾಗಿ ಕಾರ್ಯನಿರ್ವಹಿಸಿದ್ದ ಎಬಿ ಡಿವಿಲಿಯರ್ಸ್ 2017ರಲ್ಲಿ ನಾಯಕ ಸ್ಥಾನದಿಂದ ಕೆಳಗಿಳಿದಿದ್ದರು ಮತ್ತು 2018ರ ಮೇ ತಿಂಗಳಿನಲ್ಲಿ ಎಬಿ ಡಿವಿಲಿಯರ್ಸ್ ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದರು. ಹೀಗೆ ಅಂತರರಾಷ್ಟ್ರೀಯ ಕ್ರಿಕೆಟ್‍ನಿಂದ 3 ವರ್ಷಗಳ ಹಿಂದೆಯೇ ನಿವೃತ್ತಿ ಪಡೆದಿದ್ದ ಎಬಿ ಡಿವಿಲಿಯರ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ಭಾಗವಹಿಸುತ್ತಾ ಬಂದಿದ್ದರು. ಈ ವರ್ಷ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ತಮ್ಮ ನೆಚ್ಚಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿದಿದ್ದ ಎಬಿ ಡಿವಿಲಿಯರ್ಸ್ ಹಲವಾರು ವರ್ಷಗಳಿಂದ ಬೆಂಗಳೂರು ಅಭಿಮಾನಿಗಳನ್ನು ರಂಜಿಸುತ್ತಾ ಬಂದಿದ್ದರು.

ಹೌದು, 2011ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದ ಎಬಿ ಡಿವಿಲಿಯರ್ಸ್ ಅಂದಿನಿಂದ ಇಲ್ಲಿಯವರೆಗೂ ನಡೆದಿರುವ ಎಲ್ಲಾ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಾಗಿ ಕಣಕ್ಕಿಳಿದಿದ್ದಾರೆ. ಹೀಗೆ ಈ ದಶಕದ ಪೂರ್ತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದ ಎಬಿ ಡಿವಿಲಿಯರ್ಸ್ ಕುರಿತಾಗಿ ಭಾರತ ನೆಲದಲ್ಲಿ ಅಪಾರವಾದ ಪ್ರೀತಿ ಮತ್ತು ಗೌರವ ಹುಟ್ಟಿಕೊಂಡಿತ್ತು ಎಂದರೆ ತಪ್ಪಾಗಲಾರದು. ಇದೀಗ ನಾನು ಅರ್ಧ ಭಾರತೀಯನಾಗಿದ್ದೇನೆ ಎಂದು ಹೇಳಿಕೆ ನೀಡುವುದರ ಮೂಲಕ ಎಬಿ ಡಿವಿಲಿಯರ್ಸ್ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

Story first published: Friday, November 19, 2021, 18:34 [IST]
Other articles published on Nov 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X