ಕೊಹ್ಲಿ ನಾಯಕತ್ವದಡಿಯಲ್ಲಿ ಈಗಲೂ ಆಟಗಾರನಾಗಿ ಮುಂದುವರಿಯುತ್ತೇನೆ ಎಂದ ರೋಹಿತ್ ಶರ್ಮಾ

2021 ಭಾರತ ಅಂತರರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿನ ಭಾರೀ ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ಅದರಲ್ಲಿಯೂ ಭಾರತ ಅಂತರ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕತ್ವದ ಹಾಗೂ ಉಪನಾಯಕತ್ವದ ಸಾಕಷ್ಟು ಬದಲಾವಣೆಗಳಿಗೆ ಈ ವರ್ಷ ವೇದಿಕೆಯಾಯಿತು.
ವರ್ಷದ ಆರಂಭದಲ್ಲಿ ಏಕದಿನ, ಟಿ ಟ್ವೆಂಟಿ ಮತ್ತು ಟೆಸ್ಟ್ ಹೀಗೆ ಎಲ್ಲಾ ಮಾದರಿಯ ಭಾರತ ಕ್ರಿಕೆಟ್ ತಂಡಕ್ಕೂ ಏಕೈಕ ನಾಯಕನಾಗಿ ವಿರಾಟ್ ಕೊಹ್ಲಿ ಇದ್ದರು. ಆದರೆ ವರ್ಷಾಂತ್ಯದ ವೇಳೆಗೆ ಅದೇ ವಿರಾಟ್ ಕೊಹ್ಲಿ ಕೇವಲ ಭಾರತ ಟೆಸ್ಟ್ ತಂಡಕ್ಕೆ ಮಾತ್ರ ನಾಯಕನಾಗಿ ಉಳಿದುಕೊಂಡಿದ್ದಾರೆ. ಮೊದಲಿಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವುದಕ್ಕೂ ಮುನ್ನ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸಿದ ವಿರಾಟ್ ಕೊಹ್ಲಿ ಇದೀಗ ಭಾರತ ಏಕದಿನ ತಂಡದ ನಾಯಕತ್ವದಿಂದಲೂ ಸಹ ವಜಾಗೊಂಡಿದ್ದಾರೆ. ಹೀಗೆ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ಮತ್ತು ಏಕದಿನ ತಂಡಗಳೆರಡರ ನಾಯಕತ್ವವನ್ನು ಕಳೆದುಕೊಂಡ ನಂತರ ನೂತನ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ.
ಭಾರತ vs ದ. ಆಫ್ರಿಕಾ: ವಿದೇಶಿ ಪಿಚ್‌ನಲ್ಲಿ ಐಯ್ಯರ್‌ಗಿಂತ ಈ ಆಟಗಾರನೇ ಹೆಚ್ಚು ಅರ್ಹ: ಸಂಜಯ್ ಬಂಗಾರ್
ಹೌದು, ಇತ್ತೀಚೆಗಷ್ಟೇ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮೂಲಕ ಭಾರತ ಟಿ ಟ್ವೆಂಟಿ ತಂಡದ ಪೂರ್ಣ ಪ್ರಮಾಣದ ನಾಯಕನಾಗಿ ಕೆಲಸ ಆರಂಭಿಸಿದ ರೋಹಿತ್ ಶರ್ಮಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಡೆಯಲಿರುವ 3 ಪಂದ್ಯಗಳ ಏಕದಿನ ಸರಣಿಯ ಮೂಲಕ ಭಾರತ ಏಕದಿನ ತಂಡದ ಪೂರ್ಣ ಪ್ರಮಾಣದ ನಾಯಕನಾಗಿ ಕೂಡ ಕೆಲಸವನ್ನು ಆರಂಭಿಸಲಿದ್ದಾರೆ. ಇನ್ನು ವೈಟ್ ಬಾಲ್ ಕ್ರಿಕೆಟ್‍ನ ಎಲ್ಲ ಮಾದರಿಗಳಿಗೂ ನೂತನ ನಾಯಕನಾಗಿ ಆಯ್ಕೆಯಾಗಿರುವ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ನಾಯಕತ್ವದ ಕುರಿತು ವಿಶೇಷವಾಗಿ ಮಾತನಾಡಿದ್ದು ಈ ಕೆಳಕಂಡಂತೆ ಹೇಳಿಕೆಗಳನ್ನು ನೀಡಿದ್ದಾರೆ.

ಕೊಹ್ಲಿ ನಾಯಕತ್ವದಡಿಯಲ್ಲಿ ಈಗಲೂ ಆಟಗಾರನಾಗಿ ಮುಂದುವರಿಯುತ್ತೇನೆ ಎಂದ ರೋಹಿತ್
ವಿರಾಟ್ ಕೊಹ್ಲಿ ಕಳೆದ 5 ವರ್ಷಗಳಿಂದ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದಾರೆ ಎಂದು ಮಾತು ಶುರು ಮಾಡಿದ ರೋಹಿತ್ ಶರ್ಮಾ ಪ್ರತಿ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ನಾಯಕನಾಗಿ ಮುಂದೆ ನಿಂತು ತಂಡವನ್ನು ಮುನ್ನಡೆಸಿದ್ದಾರೆ ಹಾಗೂ ಇತರೆ ಆಟಗಾರರೆಲ್ಲಾ ಕೊಹ್ಲಿ ನಾಯಕತ್ವದಲ್ಲಿ ಕಣಕ್ಕಿಳಿದಿದ್ದು ಪ್ರತಿ ಪಂದ್ಯದಲ್ಲಿಯೂ ಗೆಲುವಿನೊಂದಿಗೆ ಹೊರಹೊಮ್ಮಬೇಕು ಎಂಬ ಸಂದೇಶವನ್ನು ಕೊಹ್ಲಿ ನೀಡುತ್ತಿದ್ದರು ಎಂದಿದ್ದಾರೆ. ಹಾಗೂ ತಂಡದ ಎಲ್ಲಾ ಆಟಗಾರರು ಕೂಡ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆಡಿದ ಉತ್ತಮ ಅನುಭವವನ್ನು ಹೊಂದಿದ್ದಾರೆ ಮತ್ತು ತಾನೂ ಕೂಡ ಕೊಹ್ಲಿ ನಾಯಕತ್ವದಲ್ಲಿ ಸಾಕಷ್ಟು ಪಂದ್ಯಗಳನ್ನು ಆಡಿರುವ ಅನುಭವವನ್ನು ಹೊಂದಿದ್ದೇನೆ ಎಂದು ರೋಹಿತ್ ಶರ್ಮಾ ಹೇಳಿಕೊಂಡರು. ಅಷ್ಟೇ ಅಲ್ಲದೆ ಈಗಲೂ ಸಹ ತಾನು ಕೊಹ್ಲಿ ನಾಯಕತ್ವದಡಿಯಲ್ಲಿ ಆಟಗಾರನಾಗಿ ಮುಂದುವರಿಯಲಿದ್ದೇನೆ ಎಂದು ಕೂಡ ರೋಹಿತ್ ಶರ್ಮಾ ಹೇಳಿದರು.

2013ರ ನಂತರ ನಾವು ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ತಾವು ಉತ್ತಮ ಕ್ರಿಕೆಟ್ ಆಡಿರುವುದಾಗಿ ಹೇಳಿಕೊಂಡ ರೋಹಿತ್ ಶರ್ಮಾ 2013ರಲ್ಲಿ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಯಾವುದೇ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ ಎಂಬುದನ್ನು ತಿಳಿಸಿದ್ದಾರೆ. ಹಾಗೂ ಆ ಚಾಂಪಿಯನ್ಸ್ ಟ್ರೋಫಿ ನಂತರ ಭಾರತ ತಂಡ ಯಾವುದೇ ಹಂತದಲ್ಲಿಯೂ ತಪ್ಪು ಮಾಡಿಲ್ಲ ಎಂದು ಹೇಳಿದ ರೋಹಿತ್ ಶರ್ಮಾ ತಾವು ಉತ್ತಮ ಪ್ರದರ್ಶನ ನೀಡಿದ್ದು ಟ್ರೋಫಿ ಗೆಲ್ಲುವುದರಲ್ಲಿ ಕೊನೆಯ ಹಂತದಲ್ಲಿ ಎಡವಿದ್ದಾಗಿ ಹೇಳಿದ್ದಾರೆ.

ತಂಡವಾಗಿ ಪ್ರದರ್ಶನವನ್ನು ನೀಡಬೇಕು ಎಂದ ರೋಹಿತ್ ಶರ್ಮಾ
ಇನ್ನು ನಾಯಕನಾದ ಮೇಲೆ ಟೀಮ್ ಇಂಡಿಯಾ ಕುರಿತು ವಿಶೇಷವಾಗಿ ಮಾತನಾಡಿರುವ ರೋಹಿತ್ ಶರ್ಮಾ ಆಟಗಾರರು ವೈಯಕ್ತಿಕ ದಾಖಲೆಗಳಿಗಾಗಿ ಪ್ರದರ್ಶನವನ್ನು ನೀಡದೇ ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡುವತ್ತ ಹೆಚ್ಚಿನ ಒತ್ತನ್ನು ನೀಡಬೇಕು ಎಂದಿದ್ದಾರೆ. ಹಾಗಿದ್ದಾಗ ಮಾತ್ರ ತಂಡ ತನ್ನ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾಗಲಿದೆ ಎಂದು ರೋಹಿತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications