ನಿವೃತ್ತಿ ಸುದ್ದಿಗೆ ಸ್ಪಷ್ಟ ಉತ್ತರ ನೀಡಿದ ಪಾಕ್ ಆಲ್‌ರೌಂಡರ್ ಶೋಯೆಬ್ ಮಲಿಕ್

ಪಾಕಿಸ್ತಾನ ಕ್ರಿಕೆಟ್ ತಂಡದ ಅನುಭವಿ ಆಟಗಾರ ಶೋಯೆಬ್ ಮಲಿಕ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯನ್ನು ಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿತ್ತು. ಸಾಮಾಜಿಕ ಜಾಲತಾಣದಲ್ಲಿಯೂ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಈ ವಿಚಾರವಾಗಿ ಪಾಕಿಸ್ತಾನ ಕ್ರಿಕೆಟ್ ತಮಡದ ಅನುಭವಿ ಆಟಗಾರ ಶೋಯೆಬ್ ಮಲಿಕ್ ಸ್ಪಷ್ಟವಾದ ಉತ್ತರವನ್ನು ನೀಡಿದ್ದಾರೆ.

ಶೋಯೆಬ್ ಮಲಿಕ್ ಪಾಕಿಸ್ತಾನದ ಪರವಾಗಿ ಸದ್ಯ ಟಿ20 ಕ್ರಿಕೆಟ್‌ನಲ್ಲಿ ಮಾತ್ರವೇ ಭಾಗಿಯಾಗುತ್ತಿದ್ದು ಏಕದಿನ ಹಾಗೂ ಟೆಸ್ಟ್ ಮಾದರಿಯಿಂದ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ. ಆದರೆ ಟಿ20 ಕ್ರಿಕೆಟ್‌ನಲ್ಲಿ ಯುವ ಆಟಗಾರರಿಗೆ ಸ್ಪರ್ಧೆಯನ್ನು ನೀಡಲು ಹಾಗೂ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಲು ಇನ್ನೂ ಕೂಡ ಸಾಕಷ್ಟು ಸಮರ್ಥನಾಗಿದ್ದೇನೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಪಂಜಾಬ್ ಕಿಂಗ್ಸ್‌ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈಲೈಟ್ಸ್‌

ಮಲಿಕ್ 116 ಪಂದ್ಯಗಳಲ್ಲಿ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ್ದು 2335 ರನ್‌ಗಳಿಸಿದ್ದಾರೆ. 31.13ರ ಸರಾಸರಿಯಲ್ಲಿ ಬ್ಯಾಟಿಂಗ್ ನಡೆಸಿರುವ ಮಲಿಕ್, 2006ರಲ್ಲಿ ಈ ಮಾದರಿಗೆ ಪದಾರ್ಪಣೆ ಮಾಡಿದರು. ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಮಲಿಕ್ ಕ್ರಿಸ್ ಗೇಲ್ ಹಾಗೂ ಕಿರಾನ್ ಪೊಲಾರ್ಡ್ ನಂತರ ಮೂರನೇ ಸ್ಥಾನವನ್ನು ಅಲಂಕರಿಸಿದ್ದಾರೆ.

"ನಾನು ಇವರು ನನ್ನ ನಿವೃತ್ತಿಯ ಬಗ್ಗೆ ಸ್ಪಷ್ಟವಾಗಿ ತಿಳಿಸುತ್ತೇನೆ. ನಿವೃತ್ತಿಯ ಬಗ್ಗೆ ಯಾವುದೇ ಚಿಂತನೆಗಳು ನನ್ನ ತಲೆಯಲ್ಲಿಲ್ಲ. ನಿವೃತ್ತಿ ಪಡೆಯುವ ಯಾವುದೇ ಯೋಜನೆಗಳು ಕೂಡ ನನ್ನ ಮುಂದಿಲ್ಲ. ಕಾರಣ ನಾನು ಇನ್ನು ಕೂಡ ಸಾಕಷ್ಟು ಸಮರ್ಥನಾಗಿದ್ದು ಬ್ಯಾಟ್ ಹಾಗೂ ಬೌಲಿಂಗ್ ಮಾಡಬಲ್ಲೆ" ಎಂದಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Saturday, May 1, 2021, 15:36 [IST]
Other articles published on May 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X