ವಿರಾಟ್ ಕೊಹ್ಲಿ ಆ್ಯಟಿಟ್ಯೂಡ್ ನನಗಿಷ್ಟ, ಆದ್ರೆ ಇತ್ತೀಚೆಗೆ ತುಂಬಾ ಜಗಳವಾಡುತ್ತಾನೆ ಎಂದ ಸೌರವ್ ಗಂಗೂಲಿ!

ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ನಡುವಿನ ಇತ್ತೀಚಿನ ಕಿತ್ತಾಟವು ನಿಮಗೆಲ್ಲಾ ತಿಳಿದಿದೆ. ಅದ್ರಲ್ಲೂ ಏಕದಿನ ನಾಯಕತ್ವದಿಂದ ವಿರಾಟ್ ವಜಾಗೊಂಡ ಬಳಿಕ ಕೊಹ್ಲಿ ಮತ್ತು ಬಿಸಿಸಿಐ ನಡುವೆ ಎಲ್ಲವೂ ಸರಿಯಿಲ್ಲ ಎಂದೇ ಹೇಳಲಾಗುತ್ತಿದೆ. ಇದರ ನಡುವೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ವಿರಾಟ್ ತದ್ದಿರುದ್ದ ಹೇಳಿಕೆಯನ್ನ ಮತ್ತೆ ಬೆಳಸದೆ ಒಂದೇ ಮಾತಿನಲ್ಲಿ ಮುಗಿಸಿದ್ದಾರೆ.
ಆದ್ರೆ ಈ ಸಂವಾದದ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಕೊಹ್ಲಿ ನಾಯಕತ್ವ ಏನೇ ಇದ್ದರೂ, ಕೊಹ್ಲಿ ಆ್ಯಟಿಟ್ಯೂಡ್ ನನಗಿಷ್ಟ ಎಂದು ದಾದಾ ಹೇಳಿದ್ದಾರೆ.
ಗುರುಗಾವ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿಮಗೆ ಯಾವ ಆಟಗಾರನ ಆ್ಯಟಿಟ್ಯೂಡ್ ತುಂಬಾ ಇಷ್ಟವಾಗುತ್ತದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಸೌರವ್ ಗಂಗೂಲಿ '' ನನಗೆ ವಿರಾಟ್ ಕೊಹ್ಲಿ ಆ್ಯಟಿಟ್ಯೂಡ್ ತುಂಬಾ ಇಷ್ಟ. ಆದ್ರೆ ಇತ್ತೀಚೆಗೆ ಅವರು ತುಂಬಾ ಜಗಳವಾಡುತ್ತಾರೆ'' ಎಂದು ಗಂಗೂಲಿ ಹೇಳಿದ್ದಾರೆ.
ಇತ್ತೀಚಿಗೆ, ನಾಯಕತ್ವದ ವಿಷಯಗಳ ಕುರಿತು ಸಾಕಷ್ಟು ವಿವಾದಗಳು ನಡೆದವು. ನನಗೆ ಟಿ20 ನಾಯಕತ್ವದಿಂದ ಕೆಳಗಿಳಿಯಲು ಬಿಸಿಸಿಐ ಆಯ್ಕೆ ಸಮಿತಿಯ ಮಂಡಳಿಯ ಯಾವುದೇ ಸದಸ್ಯರು ಹೇಳಲಿಲ್ಲ ಎಂದು ಹೇಳಿದ್ದಾರೆ. ಆದ್ರೆ ಇದಕ್ಕೂ ಮೊದಲು ಸೌರವ್ ಗಂಗೂಲಿ ನಾನೇ ಸ್ವತಃ ಕರೆ ಮಾಡಿ ವಿರಾಟ್‌ಗೆ ನಾಯಕತ್ವದಿಂದ ಕೆಳಗಿಳಿಯದಂತೆ ಹೇಳಿದ್ದೆ. ಆದ್ರೆ ಅವರು ಒಪ್ಪಲಿಲ್ಲ, ಹೀಗಾಗಿ ಆಯ್ಕೆ ಸಮಿತಿಯು ವೈಟ್ ಬಾಲ್ ಕ್ರಿಕೆಟ್‌ಗೆ ಒಬ್ಬನೇ ನಾಯಕನಿರಬೇಕು ಎಂಬ ಕಾರಣಕ್ಕೆ ಟಿ20 ನಾಯಕ ರೋಹಿತ್ ಶರ್ಮಾರನ್ನ ಆಯ್ಕೆಮಾಡಿರುವುದಾಗಿ ಹೇಳಿದ್ದರು.
ದಕ್ಷಿಣ ಆಫ್ರಿಕಾ ಆಫ್ರಿಕಾ ಪ್ರವಾಸಕ್ಕೂ ಮುನ್ನ ವಿರಾಟ್ ಕೊಹ್ಲಿ ಮುಂಬರುವ ದಕ್ಷಿಣ ಸರಣಿಯಲ್ಲಿ ಭಾಗಿಯಾಗುತ್ತಿಲ್ಲ, ಟೆಸ್ಟ್ ಸರಣಿ ಮುಗಿಸಿ ಕುಟುಂಬದೊಂದಿಗೆ ರಜಾ ದಿನಗಳನ್ನು ಕಳೆಯಲಿದ್ದಾರೆ ಎಂಬ ಸುದ್ದಿಗಳು ಹೊರಬಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದ್ರೆ ಈ ಎಲ್ಲಾ ವಿವಾದಗಳಿಗೆ ತೆರೆ ಎಳೆದಿದ್ದ ವಿರಾಟ್ ಏಕದಿನ ಸರಣಿಯಲ್ಲೂ ಭಾಗಿಯಾಗುವುದಾಗಿ ತಿಳಿಸಿದ್ರು.
ಆದ್ರೆ ಇದರ ಜೊತೆಗೆ ವಿರಾಟ್ ನನ್ನನ್ನು ನಾಯಕತ್ವದಿಂದ ಕೆಳಗಿಳಿಸುವ ಮೊದಲು ಯಾವುದೇ ಸರಿಯಾದ ಸಂವಹನ ನಡೆಸಿಲ್ಲ ಎಂದು ಹೇಳುವ ಮೂಲಕ ವಿವಾದದ ಕಿಡಿ ಹತ್ತಿಸಿದ್ರು.
ಈಗಾಗಲೇ ದಕ್ಷಿಣ ಆಫ್ರಿಕಾ ತಲುಪಿರುವ ಟೀಂ ಇಂಡಿಯಾ ಅಭ್ಯಾಸ ಆರಂಭಿಸಿದ್ದು, ಡಿಸೆಂಬರ್ 26ರಂದು ಸೆಂಚುರಿಯನ್‌ನಲ್ಲಿ ಮೊದಲ ಟೆಸ್ಟ್ ಪಂದ್ಯವನ್ನಾಡಲಿದೆ. ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮುಂಬರುವ ಟೆಸ್ಟ್ ಮತ್ತು ಏಕದಿನ ಸರಣಿಯ ವೇಳಾಪಟ್ಟಿ ಈ ಕೆಳಗಿದೆ.
ಭಾರತ-ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿಯ ವೇಳಾಪಟ್ಟಿ
ಸೆಂಚುರಿಯನ್ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26ರಂದು ನಡೆಯಲಿದೆ. ಇನ್ನು ಎರಡನೇ ಪಂದ್ಯವು ಹೊಸ ವರ್ಷದಲ್ಲಿ, ಅಂದರೆ 2022 ರಿಂದ ಆರಂಭವಾಗಲಿದೆ.
ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ
ಮೊದಲ ಟೆಸ್ಟ್: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್ ಟೌನ್
ಏಕದಿನ ಸರಣಿ ವೇಳಾಪಟ್ಟಿ
ಭಾರತವು ಮೂರು ಏಕದಿನ ಪಂದ್ಯಗಳನ್ನು ಸಹ ಆಡುತ್ತದೆ. ಆದರೆ ಬಿಸಿಸಿಐ ಮೊದಲೇ ಘೋಷಿಸಿದಂತೆ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಮತ್ತೆ ನಿಗದಿಪಡಿಸಲಾಗುತ್ತದೆ.
ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್ ಟೌನ್, ಸಮಯ - 2.00 PM
ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್
ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಪ್ರಿಯಾಂಕ್ ಪಾಂಚಾಲ್, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊ. ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.
ಸ್ಟ್ಯಾಂಡ್ ಬೈ ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಾಹರ್, ಅರ್ಜಾನ್ ನಾಗ್ವಾಸ್ವಾಲ್ಲಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications