WTC Final: ನ್ಯೂಜಿಲೆಂಡ್‌ನ ಈ ಆಟಗಾರ ಭಾರತಕ್ಕೆ ತಲೆನೋವಾಗಿ ಪರಿಣಮಿಸಲಿದ್ದಾನೆ ಎಂದ ಪನೇಸರ್

ಜೂನ್ 18-22ರವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದು ಟೆಸ್ಟ್ ಕ್ರಿಕೆಟ್‌ನ ವಿಶ್ವಕಪ್ ಎಂದೇ ಖ್ಯಾತಿಯನ್ನು ಪಡೆದುಕೊಳ್ಳುತ್ತಿದ್ದು ದಿನದಿಂದ ದಿನಕ್ಕೆ ಈ ಪಂದ್ಯದ ಮೇಲೆ ನಿರೀಕ್ಷೆಗಳು ಹೆಚ್ಚಾಗುತ್ತಿವೆ.
'ಬೇಗ ಗುಣಮುಖರಾಗಿ': ಕ್ರಿಶ್ಚಿಯನ್ ಎರಿಕ್ಸೆನ್ ಚೇತರಿಕೆಗೆ ಖ್ಯಾತ ಕ್ರಿಕೆಟಿಗರ ಹಾರೈಕೆ
ಈ ಪಂದ್ಯ ಆರಂಭವಾಗುವುದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು ಹಲವು ತಂಡಗಳ ಮಾಜಿ ಆಟಗಾರರು, ಕ್ರಿಕೆಟ್ ಪಂಡಿತರು ಹಾಗೂ ಕ್ರೀಡಾಭಿಮಾನಿಗಳು ಈ ಪಂದ್ಯದ ಕುರಿತು ಚರ್ಚೆಗಳಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಈ ಪಂದ್ಯದ ಕುರಿತು ಹಲವಾರು ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು ಯಾವ ತಂಡ ಗೆಲ್ಲಲಿದೆ ಮತ್ತು ಯಾವ ಆಟಗಾರ ಹೆಚ್ಚಿನ ರನ್ ಗಳಿಸಲಿದ್ದಾನೆ ಹಾಗೂ ಯಾವ ಬೌಲರ್ ಹೆಚ್ಚಿನ ವಿಕೆಟ್ ಪಡೆಯಬಹುದು ಎಂಬುದನ್ನು ಊಹಿಸಿದ್ದಾರೆ. ಇದೀಗ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಮಾಂಟಿ ಪನೇಸರ್ ಕೂಡ ಈ ಪಂದ್ಯದ ಕುರಿತು ತಮ್ಮ ಅಭಿಪ್ರಾಯವನ್ನು ಈ ಕೆಳಕಂಡಂತೆ ವ್ಯಕ್ತಪಡಿಸಿದ್ದಾರೆ.
ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಡಿಕ್ಕಿ ಹೊಡೆದು ಮೈದಾನದಲ್ಲೇ ಕುಸಿದು ಬಿದ್ದ ಡು ಪ್ಲೆಸಿಸ್
'ಇಂಗ್ಲೆಂಡ್ ನೆಲದಲ್ಲಿ ಸ್ವಿಂಗ್ ವೇಗಿಗಳು ಹೆಚ್ಚಿನ ಅನುಕೂಲವನ್ನು ಹೊಂದಿದ್ದಾರೆ. ಅದರಲ್ಲಿಯೂ ಸ್ವಿಂಗ್ ಬೌಲಿಂಗ್‌ನಲ್ಲಿ ನಿಪುಣತೆಯನ್ನು ಹೊಂದಿರುವ ನ್ಯೂಜಿಲೆಂಡ್ ತಂಡದ ಟಿಮ್ ಸೌಥಿಗೆ ಇಂಗ್ಲೆಂಡ್ ಪಿಚ್ ಹೆಚ್ಚು ಸಹಕಾರಿಯಾಗಲಿದ್ದು, ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಇದು ತಲೆನೋವಾಗಿ ಪರಿಣಮಿಸಲಿದೆ' ಎಂದು ಮಾಂಟಿ ಪನೇಸರ್ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications