Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿರಾಟ್ ಕೊಹ್ಲಿ ವಿಕೆಟ್ ಪಡೆದರೆ ಹುಚ್ಚನಂತಾಡುತ್ತೇನೆ ಎಂದ ಇಂಗ್ಲೆಂಡ್ ಸ್ಪಿನ್ನರ್

I will go loony if I take Virat Kohli’s wicket: Dom Bess

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದ್ದು ಇಂಗ್ಲೆಂಡ್ ಮೊದಲಿಗೆ ಬ್ಯಾಟಿಂಗ್ ನಡೆಸುತ್ತಿದೆ. ಆದರೆ ಈ ಪಂದ್ಯದ ಆರಂಭಕ್ಕೂ ಮುನ್ನ ಭಾರತದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡಲು ಬಂದಿರುವ ಇಂಗ್ಲೆಂಡ್ ತಂಡದ ಸ್ಪಿನ್ನರ್ ಡಾಮ್ ಬೆಸ್ ತಮ್ಮ ಕನಸನ್ನು ವ್ಯಕ್ತಡಿಸಿದ್ದಾರೆ.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್‌ನಲ್ಲಿ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆನಿಸಿದ್ದಾರೆ. ವಿರಾಟ್ ವಿಕೆಟ್ ಪಡೆಯುವುದು ಪ್ರತಿಯೊಬ್ಬ ಬೌಲರ್‌ನ ಕನಸು ಕೂಡ ಆಗಿರುತ್ತದೆ. ಇಂಗ್ಲೆಂಡ್ ತಂಡದ ಯುವ ಸ್ಪಿನ್ನರ್ ಡಾಮಿನಿಕ್ ಬೆಸ್ ಕೂಡ ಈ ಇದೇ ಗುರಿಯನ್ನು ಹೊಂದಿದ್ದಾರೆ.

ಪಂದ್ಯದ ಆರಂಭಕ್ಕೂ ಮುನ್ನ ವರ್ಚುವಲ್ ಮಾಧ್ಯಮಗೋಷ್ಠಿಯಲ್ಲಿ ಡಾಮಿನಿಕ್ ಬೆಸ್‌ಗೆ ಪ್ರಶ್ನೆಯೊಂದನ್ನುಕೇಳಲಾಯಿತು. ವಿರಾಟ್ ಕೊಹ್ಲಿ ವಿಕೆಟ್ ಪಡೆದರೆ ನಿಮ್ಮ ಪ್ರತಿಕ್ರಿಯೆ ಹೇಗಿರುತ್ತದೆ ಎಂಬ ಎದುರಾಯಿತು. ಇದಕ್ಕೆ ಬೆಸ್ ನಾನು ವಿಕೆಟ್ ಕೊಹ್ಲಿ ವಿಕೆಟ್ ಪಡೆದರೆ ಹುಚ್ಚನಂತೆ ಓಡಾಡಿ ಬಿಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಡಾಮಿನಿಕ್ ಬೆಸ್ ಇಂಗ್ಲೆಂಡ್ ತಂಡದ ಪರವಾಗಿ 12 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 2.80 ಎಕಾನಮಿಯಲ್ಲಿ 31 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ಪರವಾಗಿ ಉತ್ತಮ ದಾಳಿಯನ್ನು ನಡೆಸಿ ಮೇಲುಗೈ ಒದಗಿಸುವಲ್ಲಿ ಯಶಸ್ವಿಯಾಗಿದ್ದರು.

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಶಹಬಾಜ್ ನದೀಮ್, ಜಸ್ಪ್ರೀತ್ ಬೂಮ್ರಾ
ಇಂಗ್ಲೆಂಡ್ ಆಡುವ ಬಳಗ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಡೇನಿಯಲ್ ಲಾರೆನ್ಸ್, ಜೋ ರೂಟ್(ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೊಮಿನಿಕ್ ಬೆಸ್, ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್

Story first published: Friday, February 5, 2021, 16:12 [IST]
Other articles published on Feb 5, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+