ಟಿ20 ವಿಶ್ವಕಪ್‌ನಲ್ಲಿ ಇಶಾನ್ ಕಿಶನ್ ಬದಲು ಈ ಇಬ್ಬರು ಉತ್ತಮರಿಗೆ ಅವಕಾಶ ನೀಡಿ ಎಂದ ಪಾಂಟಿಂಗ್

ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಕುರಿತು ಈಗಾಗಲೇ ಚರ್ಚೆಗಳು ಶುರುವಾಗಿವೆ. ಇನ್ನು ಕಳೆದ ವರ್ಷ ಯುಎಇ ನೆಲದಲ್ಲಿ ನಡೆದಿದ್ದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದ ಟೀಮ್ ಇಂಡಿಯಾ ಈ ಬಾರಿ ರೋಹಿತ್ ಶರ್ಮಾ ನಾಯಕತ್ವ ಮತ್ತು ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದ್ದು, ನಿರೀಕ್ಷೆಗಳು ಹೆಚ್ಚಿವೆ.
ಇನ್ನು ಇತ್ತೀಚಿಗೆ ನಡೆದ ಸರಣಿಗಳಲ್ಲಿ ಟೀಮ್ ಇಂಡಿಯಾ ಹಲವಾರು ಆಟಗಾರರಿಗೆ ಅವಕಾಶ ನೀಡಿದ್ದು ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಆಯ್ಕೆ ಮಾಡುವ ಯೋಜನೆಯಲ್ಲಿದೆ. ಸದ್ಯ ಸಿಕ್ಕ ಅವಕಾಶಗಳನ್ನು ಹಲವು ಆಟಗಾರರು ಅಚ್ಚುಕಟ್ಟಾಗಿ ಉಪಯೋಗಿಸಿಕೊಂಡಿದ್ದು, ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಿಗೆ ಯಾವ ಆಟಗಾರರನ್ನು ಆಯ್ಕೆ ಮಾಡಬೇಕು ಮತ್ತು ಯಾವ ಆಟಗಾರರನ್ನು ಕೈಬಿಡಬೇಕು ಎಂಬ ಗೊಂದಲ ಉಂಟಾಗಿರುವುದಂತೂ ಸತ್ಯ. ಹೀಗಾಗಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಯಾವ ರೀತಿಯ ಭಾರತ ತಂಡ ರಚನೆಯಾಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ ಹಾಗೂ ಚರ್ಚೆಗಳು ಆರಂಭವಾಗಿವೆ.
ಈ ಕುರಿತಾಗಿ ಇದೀಗ ಆಸ್ಟ್ರೇಲಿಯಾದ ಯಶಸ್ವಿ ನಾಯಕ ಎಂದೇ ಖ್ಯಾತಿಯನ್ನು ಪಡೆದಿರುವ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಪ್ರತಿಕ್ರಿಯಿಸಿದ್ದು, ಟಿ ಟ್ವೆಂಟಿ ವಿಶ್ವಕಪ್‌ಗೆ ಪ್ರಕಟವಾಗುವ ಟೀಮ್ ಇಂಡಿಯಾದಲ್ಲಿ ಇಶಾನ್ ಕಿಶನ್ ಬದಲ ಈ ಇಬ್ಬರಿಗೆ ಅವಕಾಶ ನೀಡಬೇಕು ಎಂದು ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

ಭಾರತ ತಂಡದಲ್ಲಿ ಈ ಇಬ್ಬರು ವಿಕೆಟ್ ಕೀಪರ್‌ಗಳಿಗೆ ಅವಕಾಶ ನೀಡಬೇಕು
ಇತ್ತೀಚೆಗಷ್ಟೆ ರಿಷಭ್ ಪಂತ್ ಏಕದಿನ ಕ್ರಿಕೆಟ್‌ನಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದ್ದನ್ನು ನೋಡಿದ್ದೇವೆ ಹಾಗೂ ಆತ ಟಿ ಟ್ವೆಂಟಿ ಕ್ರಿಕೆಟ್‌ನಲ್ಲಿ ಆತನ ಸಾಮರ್ಥ್ಯವೇನು ಎಂಬುದು ನನಗೆ ತಿಳಿದಿದೆ. ಇನ್ನು ದಿನೇಶ್ ಕಾರ್ತಿಕ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಮಿಂಚಿದ್ದಾರೆ. ಹೀಗಾಗಿ ಈ ಇಬ್ಬರೂ ವಿಕೆಟ್ ಕೀಪರ್‌ಗಳನ್ನು ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಯ್ಕೆ ಮಾಡಬೇಕು ಎಂದು ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಈ ಆಟಗಾರರು ಇದ್ದರೆ ತಂಡ ಬಲಿಷ್ಟವಾಗಲಿದೆ
ಇನ್ನೂ ಮುಂದುವರೆದು ಮಾತನಾಡಿರುವ ರಿಕಿ ಪಾಂಟಿಂಗ್ ರಿಷಭ್ ಪಂತ್ ಮೂರರಿಂದ ಐದನೇ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿದರೆ, ಫಿನಿಶರ್‌ಗಳಾಗಿ ದಿನೇಶ್ ಕಾರ್ತಿಕ್ ಮತ್ತು ಕಮ್‌ಬ್ಯಾಕ್ ಮಾಡಿರುವ ಹಾರ್ದಿಕ್ ಪಾಂಡ್ಯ ಆಡಬೇಕು, ಹೀಗಿದ್ದಾಗ ತಂಡದ ಬ್ಯಾಟಿಂಗ್ ಲೈನ್ಅಪ್ ಬಲಿಷ್ಟವಾಗಿರಲಿದ್ದು, ಎದುರಾಳಿ ತಂಡಗಳಿಗೆ ನಡುಕ ಹುಟ್ಟಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಆಟಗಾರರಿಗೆ ಅವಕಾಶ ನೀಡಿದರೆ ಇಶಾನ್ ಕಿಶನ್ ಹೊರಕ್ಕೆ
ತಂಡವನ್ನು ಈ ರೀತಿ ಆಯ್ಕೆ ಮಾಡಿದರೆ ಇಶಾನ್ ಕಿಶನ್, ಶ್ರೇಯಸ್ ಐಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಈ ಮೂವರಲ್ಲಿ ಒಬ್ಬರು ಅವಕಾಶ ಕಳೆದುಕೊಳ್ಳುವುದು ಖಚಿತ ಎಂದು ರಿಕಿ ಪಾಂಟಿಂಗ್ ಊಹಿಸಿದ್ದಾರೆ. ಆದರೆ, ಸದ್ಯ ಉತ್ತಮ ಫಾರ್ಮ್ ಹೊಂದಿರುವ ಕಾರಣ ಸೂರ್ಯಕುಮಾರ್ ಯಾದವ್ ಅವಕಾಶ ಕಳೆದುಕೊಳ್ಳುವುದಿಲ್ಲ ಎಂದಿರುವ ರಿಕಿ ಪಾಂಟಿಂಗ್ ಪ್ರತಿಭಾವಂತ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬೇಕೆಂದರೆ ಈ ರೀತಿಯ ಕಷ್ಟದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಹಾಗೂ ಇಶಾನ್ ಕಿಶನ್‌ಗಿಂತ ದಿನೇಶ್ ಕಾರ್ತಿಕ್ ಮತ್ತು ರಿಷಭ್ ಪಂತ್ ಅವರನ್ನು ಆಯ್ಕೆ ಮಾಡುವುದು ಉತ್ತಮ ಎಂದು ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications