ಟೀಮ್ ಇಂಡಿಯಾ ಇಂಗ್ಲೆಂಡ್ ತಂಡಕ್ಕೂ ತವರಿನಲ್ಲಿ ಸೋಲುಣಿಸಲಿದೆ: ಇಯಾನ್ ಚಾಪೆಲ್

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಮುಂದಿನ ತಿಂಗಳು ಇಂಗ್ಲೆಂಡ್ ತಂಡದ ವಿರುದ್ಧ ಇಂಗ್ಲೆಂಡ್ ನೆಲದಲ್ಲಿಯೇ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಸೆಣೆಸಾಡಲಿದೆ. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡಕ್ಕೂ ಅದರ ತವರಿನಲ್ಲಿಯೇ ಸೋಲುಣಿಸುವ ಅತ್ಯುತ್ತಮ ಅವಕಾಶವನ್ನು ಹೊಂದಿದೆ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ಇಯಾನ್ ಚಾಪೆಲ್ ಅಭಿಪ್ರಾಯಪಟ್ಟಿದ್ದಾರೆ.

"ಇತ್ತೀಚಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ ತಂಡ ಅದ್ಭುತವಾದ ವೇಗದ ಬೌಲಿಂಗ್ ಶಕ್ತಿಯನ್ನು ಹೊಂದಿದ ತಂಡಗಳ ವಿಭಾಗಕ್ಕೆ ಸೇರ್ಪಡೆಯಾಗಿದೆ. ಇದರ ಪರಿಣಾಮವಾಗಿ ಅವರು ಆಸ್ಟ್ರೇಲಿಯಾ ತಂಡದ ವಿರುದ್ಧ ಆಸ್ಟ್ರೇಲಿಯಾದಲ್ಲಿಯೇ ಗೆಲುವು ಸಾಧಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಲುಪಿದ್ದಾರೆ ಹಾಗೂ ಈಗ ಇಂಗ್ಲೆಂಡ್ ತಂಡವನ್ನು ಅದರ ನೆಲದಲ್ಲಿಯೇ ಸೋಲಿಸುವ ಅವಕಾಶವನ್ನು ಹೊಂದಿದ್ದಾರೆ" ಎಂದು ಚಾಪೆಲ್ ಕ್ರಿಕ್‌ಇನ್ಫೋಗೆ ಪ್ರತಿಕ್ರಿಯಿಸಿದ್ದಾರೆ.

ಮಹಿಳೆಯರ ಏಕದಿನ ಸರಣಿ: ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯಮಹಿಳೆಯರ ಏಕದಿನ ಸರಣಿ: ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಇಯಾನ್ ಚಾಪೆಲ್ ಕ್ರಿಕೆಟ್‌ನ ಶ್ರೇಷ್ಠ ವಿಶ್ಲೇಷಕರಲ್ಲಿ ಒಬ್ಬರೆನಿಸಿದ್ದಾರೆ. ಇವರ ಪ್ರಕಾರ ಭಾರತೀಯ ಕ್ರಿಕೆಟ್ ತಂಡದ ವೇಗಿಗಳಾದ ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅದ್ಭುತವಾದ ಪ್ರದರ್ಶನವನ್ನು ನೀಡುತ್ತಿದ್ದಾರೆ ಎಂದು ಅವರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಅದ್ಭುತವಾದ ಪ್ರದರ್ಶನವನ್ನು ನೀಡಿದ ನ್ಯೂಜಿಲೆಂಡ್ ತಂಡದ ವೇಗಿಗಳ ಬಗ್ಗೆಯೂ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. 1970ರೊಂದ 1990ರ ಮಧ್ಯಭಾಗದ ವರೆಗೆ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಹೊಂದಿದ್ದ ಅದ್ಭುತವಾದ ವೇಗದ ಬೌಲಿಂಗ್‌ನ ಮಟ್ಟಕ್ಕೆ ಕೀವಿಸ್ ಬೌಲರ್‌ಗಳು ಪ್ರದರ್ಶನವನ್ನು ನೀಡಿದ್ದಾರೆ ಎಂದು ಚಾಪೆಲ್ ಹೇಳಿದ್ದಾರೆ.

"ವಿರಾಟ್ ಕೊಹ್ಲಿ ನಾಯಕತ್ವದ ಭವಿಷ್ಯಕ್ಕೆ ಟಿ20 ವಿಶ್ವಕಪ್ ನಿರ್ಣಾಯಕ"

IPL ಗೆ ಕೈ ಕೊಟ್ಟ ಸ್ಟೀವ್ ಸ್ಮಿತ್ | Steve Smith | Oneindia Kannada

"ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವನ್ನು ಗೆಲ್ಲಲು ನ್ಯೂಜಿಲೆಂಡ್ ತಂಡ ಅತ್ಯಂತ ಅರ್ಹವಾಗಿತ್ತು. ಈ ಕಾರಣದಿಂದಾಗಿ ಚಾಂಪಿಯನ್‌ಶಿಪ್‌ ಟ್ರೋಫಿಯನ್ನು ಎತ್ತಿಹಿಡಿದಿದೆ. ವೇಗದ ಬೌಲಿಂಗ್ ಪಡೆ ಇಲ್ಲಿಯೂ ಕೂಡ ಪ್ರಮುಖ ಪಾತ್ರವನ್ನು ವಹಿಸಿತ್ತು" ಎಂದಿದ್ದಾರೆ ಆಸ್ಟ್ರೇಲಿಯಾ ಕ್ರಿಕೆಟ್ ತಮಡದ ಮಾಜಿ ನಾಯಕ ಇಯಾನ್ ಚಾಪೆಲ್.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, July 4, 2021, 15:32 [IST]
Other articles published on Jul 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X