ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ

Ian Healy says Australia lacked commitment against India

ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಸೋತಿರುವ ಆಸ್ಟ್ರೇಲಿಯಾ ತಂಡದ ಬಗ್ಗೆ ಸಾಕಷ್ಟು ಕಟು ವಿಶ್ಲೇಷಣೆಗಳು ನಡೆಯುತ್ತಿದೆ. ಆಸ್ಟ್ರೇಲಿಯಾದ ಮಾಜಿ ಆಟಗಾರರು ತಂಡದ ಒಟ್ಟಾರೆ ಪ್ರದರ್ಶನದ ಬಗ್ಗೆ ಹಾಗೂ ಆಟಗಾರರ ಸಾಮರ್ಥ್ಯದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆಸ್ಟ್ರೇಲಿಯಾ ತಂಡದ ಮಾಜಿ ವಿಕೆಟ್ ಕೀಪರ್ ಇಯಾನ್ ಹೀಲಿ ಕೂಡ ಈ ಸಾಲಿಗೆ ಸೇರಿದ್ದು ಕಟುವಾಗಿ ಟೀಕಿಸಿದ್ದಾರೆ.

ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಟೀಮ್ ಇಂಡಿಯಾ ವಿರುದ್ಧ ಸರಣಿ ಸೋಲಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರರಲ್ಲಿ ಇದ್ದ ಬದ್ಧತೆಯ ಕೊರತೆಯೇ ಕಾರಣ ಎಂದು ಹೀಲಿ ತಿವಿದಿದ್ದಾರೆ. ಜೊತೆಗೆ ನಾಯಕ ಟಿಮ್ ಪೈನ್ ಅವರಲ್ಲಿನ ನಾಯಕತ್ವದ ಸಾಮರ್ಥ್ಯದ ಬಗ್ಗೆಗೂ ಹೀಲಿ ಪ್ರಶ್ನೆ ಮಾಡಿದ್ದಾರೆ.

ಅಡಿಲೇಡ್ ಸೋಲಿನ ನಂತರ ಗೆಲುವಿನ ಹಾದಿ ಹಿಡಿದ ರೋಚಕ ಸಂಗತಿ ವಿವರಿಸಿದ ಹನುಮ ವಿಹಾರಿಅಡಿಲೇಡ್ ಸೋಲಿನ ನಂತರ ಗೆಲುವಿನ ಹಾದಿ ಹಿಡಿದ ರೋಚಕ ಸಂಗತಿ ವಿವರಿಸಿದ ಹನುಮ ವಿಹಾರಿ

ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಟೆಸ್ಟ್ ಕ್ರಿಕೆಟ್‌ನ ಅತ್ಯಂತ ಕನಿಷ್ಠ ಮೊತ್ತವನ್ನು ದಾಖಲಿಸಿದ ಬಳಿಕ ತಿರುಗಿ ಬೀಳುವಲ್ಲಿ ಯಶಸ್ವಿಯಾಗಿತ್ತು. ಬಳಿಕ ನಡೆದ ಮೂರು ಟೆಸ್ಟ್ ಪಂದ್ಯಗಳಲ್ಲಿ ಮೆಲ್ಬರ್ನ್ ಪಂದ್ಯದಲ್ಲಿ ಗೆಲುವು ಸಿಡ್ನಿ ಪಂದ್ಯ ಡ್ರಾ ಹಾಗೂ ಬ್ರಿಸ್ಬೇನ್ ಅಂಗಳದಲ್ಲಿ ಐತಿಹಾಸಿಕ ಟೆಸ್ಟ್ ಗೆಲುವು ಸಾಧಿಸಿ ಸರಣಿ ಗೆಲುವು ಸಾಧಿಸಿದೆ.

"ಆಸ್ಟ್ರೇಲಿಯಾ ತಮಡದ ಆಟಗಾರರು ನಿಜವಾದ ಬದ್ಧತೆಯನ್ನು ಬಿಟ್ಟು ಆಡಿದ್ದರು. ಈ ಹಣಾಹಣಿಯಲ್ಲಿ ಅವರ ಹೋರಾಟ ಸರಿಯಾಗಿರಲಿಲ್ಲ. ಅವರು ತಮ್ಮ ವೈಯಕ್ತಿಕ ರನ್‌ಗಳನ್ನು 60ರಿಂದ 120 ರನ್‌ಗಳಿಗೆ ಬದಲಾಯಿಸುವ ಹಸಿವು ಹೊಂದಿರಲಿಲ್ಲ" ಎಂದು ಇಯಾನ್ ಹೀಲಿ ಹೇಳಿದ್ದಾರೆ.

ಐಪಿಎಲ್ 2021: ಎಲ್ಲಾ 8 ತಂಡಗಳು ಉಳಿಸಿಕೊಂಡ, ಬಿಟ್ಟುಕೊಟ್ಟ ಆಟಗಾರರ ಸಂಪೂರ್ಣ ಪಟ್ಟಿಐಪಿಎಲ್ 2021: ಎಲ್ಲಾ 8 ತಂಡಗಳು ಉಳಿಸಿಕೊಂಡ, ಬಿಟ್ಟುಕೊಟ್ಟ ಆಟಗಾರರ ಸಂಪೂರ್ಣ ಪಟ್ಟಿ

"ತಂಡದ ನಾಯಕ, ಉಪನಾಯಕ, ಕೋಚ್ ಮತ್ತು ಕೋಚಿಂಗ್ ಸಿಬ್ಬಂದಿಗಳ ವಿಪರ್ಯಾಸದ ಪ್ರದರ್ಶನವಾಗಿದೆ. ನಮ್ಮ ಫೀಲ್ಡಿಂಗ್ ಕೂಡ ಕಳಪೆಯಾಗಿತ್ತು. ತಮ್ಮ ನಡವಳಿಕೆ ಹಾಗೂ ಫೀಲ್ಡಿಂಗ್‌ನ ಮೇಲೆ ಅವರು ಇನ್ನಷ್ಟು ಕೆಲಸ ಮಾಡಬೇಕು. ಆಗ ಉಳಿದೆಲ್ಲವೂ ಮರಳುತ್ತದೆ" ಎಂದು ಇಯಾನ್ ಹೀಲಿ ಆಸ್ಟ್ರೇಲಿಯಾ ತಂಡದ ಪ್ರದರ್ಶನದ ಬಗ್ಗೆ ತಿವಿದಿದ್ದಾರೆ.

Story first published: Thursday, January 21, 2021, 14:35 [IST]
Other articles published on Jan 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X