AFG vs SA ಚಾಂಪಿಯನ್ಸ್ ಟ್ರೋಫಿ 2025: ದಕ್ಷಿಣ ಆಫ್ರಿಕಾ ವಿರುದ್ಧ ಸೇಡಿನ ಸಮರಕ್ಕೆ ಅಫ್ಘಾನಿಸ್ತಾನ ಸಜ್ಜು
ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯ ಇಂದು ಅಂದರೆ ಶುಕ್ರವಾರ ನಡೆಯಲಿರುವ ಮೂರನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳ ಪಂದ್ಯ ಕರಾಚಿಯ ಸ್ಟೇಡಿಯಂನಲ್ಲಿ ನಡೆಯಲಿದೆ. ಅಫ್ಘಾನಿಸ್ತಾನ ತಂಡವನ್ನು ಹಶ್ಮತುಲ್ಲಾ ಶಾಹಿದಿ ಮುನ್ನಡೆಸಿದರೆ, ದಕ್ಷಿಣ ಆಫ್ರಿಕಾ ತಂಡಕ್ಕೆ ಟೆಂಬಾ ಬವುಮಾ ನಾಯಕತ್ವ ವಹಿಸಲಿದ್ದಾರೆ. ಉಭಯ ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ ಶುಭಾರಂಭ ಮಾಡಲು ತಯಾರಾಗಿದೆ.
ದಕ್ಷಿಣ ಆಫ್ರಿಕಾ ತಂಡ ಕಳಪೆ ಪ್ರದರ್ಶನ ನೀಡಿದ್ದರೂ, ಸ್ಫೋಟಕ ಬ್ಯಾಟಿಂಗ್ ಬಲದ ಮೂಲಕ ಉತ್ತಮ ಆರಂಭ ಪಡೆಯುವ ಭರವಸೆಯಲ್ಲಿದೆ. ಮತ್ತೊಂದೆಡೆ ಅಫ್ಘಾನಿಸ್ತಾನ ದಾಖಲೆಗಳನ್ನು ಸೃಷ್ಟಿಸಲು ಸಜ್ಜಾಗಿದೆ. 2023ರ ಏಕದಿನ ಮತ್ತು 2024ರ ಟಿ20 ವಿಶ್ವವಕಪ್‌ಗಳಲ್ಲಿ ಉಭಯ ತಂಡಗಳು ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ.

ಅಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇದುವರೆಗೆ ಒಟ್ಟು 5 ಏಕದಿನ ಪಂದ್ಯಗಳು ನಡೆದಿವೆ. ದಕ್ಷಿಣ ಆಫ್ರಿಕಾ 3 ಪಂದ್ಯಗಳನ್ನು ಗೆದ್ದಿದ್ದರೆ, ಅಫ್ಘಾನಿಸ್ತಾನ 2 ಪಂದ್ಯಗಳನ್ನು ಗೆದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಕರಾಚಿಯಲ್ಲಿ ಎರಡೂ ತಂಡಗಳ ನಡುವೆ ಕಠಿಣ ಸ್ಪರ್ಧೆಯನ್ನು ಕಾಣಬಹುದು.
ಪಾಕಿಸ್ತಾನದ ಸ್ಪಿನ್ ಸ್ನೇಹಿ ಪಿಚ್‌ಗಳಲ್ಲಿ ಹರಿಣಗಳ ಪಡೆಗೆ ಬೆದರಿಕೆ ಒಡ್ಡಬಲ್ಲ ವಿಶ್ವ ದರ್ಜೆಯ ಸ್ಪಿನ್ ಬೌಲರ್‌ಗಳನ್ನು ಅಫ್ಘಾನಿಸ್ತಾನ ತಂಡ ಹೊಂದಿದೆ. ಅಫ್ಘಾನಿಸ್ತಾನ ತಂಡವು ರಶೀದ್ ಖಾನ್, ನೂರ್ ಅಹ್ಮದ್ ಮತ್ತು ಮೊಹಮ್ಮದ್ ನಬಿ ಅವರಂತಹ ಸ್ಪಿನ್ನರ್‌ಗಳನ್ನು ಹೊಂದಿದೆ. ದಕ್ಷಿಣ ಆಫ್ರಿಕಾ ತಂಡವು ನಾಯಕ ಟೆಂಬಾ ಬವುಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಅವರಿಂದ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.
ದಕ್ಷಿಣ ಆಫ್ರಿಕಾವು ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ ಮತ್ತು ಲುಂಗಿ ಎನ್‌ಗಿಡಿ ಅವರಂತಹ ಅಪಾಯಕಾರಿ ವೇಗಿಗಳನ್ನು ಹೊಂದಿದ್ದು, ಅಫ್ಘಾನಿಸ್ತಾನದ ಬ್ಯಾಟರ್‌ಗಳಿಗೆ ಕಾಟ ನೀಡಬಹುದು. ರಹಮಾನಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರೆಹಮತ್ ಶಾ, ಹಶ್ಮತುಲ್ಲಾ ಶಾಹಿದಿ ಕೂಡ ಅಫ್ಘಾನಿಸ್ತಾನ ಪರ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ.
ಕರಾಚಿಯ ಸ್ಟೇಡಿಯಂನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ಪಂದ್ಯವು ಭಾರತೀಯ ಕಾಲಮಾನ ಪ್ರಕಾರ, ಶುಕ್ರವಾರ ಮಧ್ಯಾಹ್ನ 2.30 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 2 ಗಂಟೆಗೆ ಟಾಸ್ ನಡೆಯಲಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ನೆಟ್‌ವರ್ಕ್ 18 ಚಾನೆಲ್‌ಗಳಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಇದಲ್ಲದೆ, ಜಿಯೋ ಹಾಟ್‌ಸ್ಟಾರ್‌ನಲ್ಲಿ ಈ ಪಂದ್ಯವನ್ನು ನೇರಪ್ರಸಾರ ನೋಡಬಹುದು.
ಸಂಭಾವ್ಯ ಪ್ಲೇಯಿಂಗ್-11
ಅಫ್ಘಾನಿಸ್ತಾನ: ಇಬ್ರಾಹಿಂ ಜದ್ರಾನ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ಕೀಪರ್), ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕಿ), ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ರಶೀದ್ ಖಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಫರೀದ್ ಮಲಿಕ್.
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಜೊರ್ಜಿ, ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ಕೀಪರ್), ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications