AUS vs ENG ಚಾಂಪಿಯನ್ಸ್ ಟ್ರೋಫಿ 2025: ಮದಗಜಗಳ ನಡುವೆ ಬಿಗ್ ಮೆಗಾ ಫೈಟ್; ಗೆಲ್ಲೋದ್ಯಾರು?
ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025ರ ಬಿ ಗುಂಪಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಶುಭಾರಂಭ ಮಾಡಲು ಉಭಯ ತಂಡಗಲು ಸಜ್ಜಾಗಿವೆ. ಗಾಯಗೊಂಡು ಟೂರ್ನಿಯಿಂದ ಹೊರಗುಳಿದಿರುವ ಪ್ಯಾಟ್ ಕಮ್ಮಿನ್ಸ್ ಬದಲಿಗೆ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ತಂಡಕ್ಕೆ ಜೋಸ್ ಬಟ್ಲರ್ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯವು ಫೆಬ್ರವರಿ 22 ರ ಶನಿವಾರ ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ಪ್ರಾರಂಭವಾಗಲಿದೆ.

ಆಸ್ಟ್ರೇಲಿಯಾ ತಂಡವು ತನ್ನ ಚಾಂಪಿಯನ್ ಆಟಗಾರರಿಲ್ಲದೆ ಟೂರ್ನಿಗೆ ಪ್ರವೇಶಿಸಲಿದೆ. ಮತ್ತೊಂದೆಡೆ, ಭಾರತ ವಿರುದ್ಧ 3-0 ಅಂತರದಲ್ಲಿ ಸರಣಿ ಸೋಲಿನಿಂದ ಚೇತರಿಸಿಕೊಂಡಿರುವ ಇಂಗ್ಲೆಂಡ್, ಚಾಂಪಿಯನ್ಸ್ ಟ್ರೋಫಿಯನ್ನು ಆರಂಭಿಸಲು ಗೆಲುವಿನ ನಿರೀಕ್ಷೆಯಲ್ಲಿದೆ. 2023 ರ ಏಕದಿನ ವಿಶ್ವಕಪ್ ಗೆಲುವಿನ ನಂತರ ಆಸ್ಟ್ರೇಲಿಯಾ ಇತ್ತೀಚಿನ ದಿನಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರೆ, ಇಂಗ್ಲೆಂಡ್ ತಂಡದ ಪ್ರದರ್ಶನದಲ್ಲಿ ಕುಸಿತ ಕಂಡಿದೆ.
ಸ್ಟಾರ್ ಆಟಗಾರರ ಗೈರು
ವಿಶ್ವಕಪ್‌ನ ಸೆಮಿಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ನಂತರ, ಇಂಗ್ಲೆಂಡ್ ಸತತ ನಾಲ್ಕು ಸರಣಿಗಳನ್ನು ಸೋಲು ಕಂಡಿದೆ. ಈ ಬಾರಿ ಆಸ್ಟ್ರೇಲಿಯಾ ತಂಡ ಪ್ಯಾಟ್ ಕಮ್ಮಿನ್ಸ್, ಜೋಶ್ ಹೇಜಲ್‌ವುಡ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಮಾರ್ಷ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಅವರಂತಹದ ಸ್ಟಾರ್ ಆಟಗಾರರಿಲ್ಲದೆ ಪ್ರಶಸ್ತಿ ಗೆಲ್ಲುವ ಪಣ ತೊಟ್ಟಿದೆ.
ಹೆಡ್ ಟು ಹೆಡ್
ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ 160 ಏಕದಿನ ಪಂದ್ಯಗಳು ನಡೆದಿವೆ. ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಕಾಂಗೂರು ಪಡೆ 90 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 65 ಬಾರಿ ಜಯಗಳಿಸಿದೆ. ಮೂರು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಇದಲ್ಲದೆ, ಐಸಿಸಿ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ತಂಡವು ಇಂಗ್ಲೆಂಡ್ ವಿರುದ್ಧ ಪ್ರಾಬಲ್ಯ ಸಾಧಿಸಿದೆ. 2019ರ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಆತಿಥೇಯ ಇಂಗ್ಲೆಂಡ್ ಫೈನಲ್ ತಲುಪಿತ್ತು.
ಉಭಯ ತಂಡಗಳ ಸಂಭಾವ್ಯ-11
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್ವೆಲ್, ಸೀನ್ ಅಬಾಟ್, ಆಡಮ್ ಜಂಪಾ, ಸ್ಪೆನ್ಸರ್ ಜಾನ್ಸನ್, ನಾಥನ್ ಎಲ್ಲಿಸ್.
ಇಂಗ್ಲೆಂಡ್: ಫಿಲಿಪ್ ಸಾಲ್ಟ್, ಬೆನ್ ಡಕೆಟ್, ಜೇಮೀ ಸ್ಮಿತ್ (ವಿಕೆಟ್‌ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications