Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy: ಬಾಂಗ್ಲಾದೇಶ vs ಭಾರತ ಕಾದಾಟ; ಶುಭಾರಂಭದ ನಿರೀಕ್ಷೆಯಲ್ಲಿ ರೋಹಿತ್ ಪಡೆ

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು 2025ರ ಚಾಂಪಿಯನ್ಸ್ ಟ್ರೋಫಿಯ ಅಭಿಯಾನವನ್ನು ಬಾಂಗ್ಲಾದೇಶ ವಿರುದ್ಧದ ಪಂದ್ಯದೊಂದಿಗೆ ಪ್ರಾರಂಭಿಸಲಿದೆ. ಚಾಂಪಿಯನ್ಸ್ ಟ್ರೋಫಿಯ 9ನೇ ಆವೃತ್ತಿಯ ಎರಡನೇ ಪಂದ್ಯವು ಇಂದು ಅಂದರೆ ಫೆಬ್ರವರಿ 20ರ ಗುರುವಾರ ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯಲಿದೆ. ಈ ಪಂದ್ಯ ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 2:30 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ಟಾಸ್ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಹಾಗಾದರೆ ಈ ಪಂದ್ಯಕ್ಕೂ ಮುನ್ನ ಭಾರತ ಮತ್ತು ಬಾಂಗ್ಲಾದೇಶದ ಏಕದಿನ ಕ್ರಿಕೆಟ್‌ನ ಅಂಕಿ-ಅಂಶಗಳ ಇಲ್ಲಿದೆ ಸಂಪೂರ್ಣ ಮಾಹಿತಿ.

ICC 2025 Champions Trophy Bangladesh vs India looking forward to a good start

ಹೆಡ್ ಟು ಹೆಡ್

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಇದುವರೆಗೆ ಒಟ್ಟು 41 ಪಂದ್ಯಗಳು ನಡೆದಿವೆ. ಭಾರತ 32 ಏಕದಿನ ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ತಂಡ ಕೇವಲ 8 ಏಕದಿನ ಪಂದ್ಯಗಳನ್ನು ಮಾತ್ರ ಗೆದ್ದಿದೆ. ಈ ಎರಡೂ ತಂಡಗಳ ನಡುವಿನ ಒಂದು ಪಂದ್ಯವು ಅನಿರ್ಣಾಯಕವಾಗಿತ್ತು.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮುಖಾಮುಖಿ ಬಗ್ಗೆ ನೋಡುವುದಾದರೆ, ಈ ಮೆಗಾ ಟೂರ್ನಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಉಭಯ ತಂಡಗಳು 27 ವರ್ಷಗಳ ಈ ಮೆಗಾ ಟೂರ್ನಿಯ ಇತಿಹಾಸದಲ್ಲಿ ಒಮ್ಮೆ ಮಾತ್ರ ಮುಖಾಮುಖಿಯಾಗಿವೆ. ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಜಯ ಸಾಧಿಸಿದೆ. ಉಭಯ ತಂಡಗಳು 2017 ರ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲಿ ಭಾರತ ಗೆದ್ದು ಫೈನಲ್‌ಗೆ ತಲುಪಿತು.

ಸಂಭಾವ್ಯ ಪ್ಲೇಯಿಂಗ್-11

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ಬಾಂಗ್ಲಾದೇಶ: ಸೌಮ್ಯ ಸರ್ಕಾರ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮುಷ್ಫಿಕರ್ ರಹೀಮ್, ಮಹ್ಮದುಲ್ಲಾ, ಮೆಹದಿ ಹಸನ್ ಮಿರಾಜ್, ತೌಹಿದ್ ಹೃದಯ್ ತಸ್ಕಿನ್ ಅಹ್ಮದ್, ತಂಜಿಮ್ ಹಸನ್ ಸಕಿಬ್, ನಹಿದ್ ರಾಣಾ, ಮುಸ್ತಾಫಿಜುರ್ ರೆಹಮಾನ್.

Story first published: Thursday, February 20, 2025, 7:00 [IST]
Other articles published on Feb 20, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+